ಹೆಚ್ ಡಿ ರೇವಣ್ಣ ಬಂಧನ ರಾಜಕೀಯ ಪ್ರೇರಿತ, ಇದರ ಹಿಂದಿರುವ ದೊಡ್ಡ ತಿಮಿಂಗಿಲ ಬಂಧನ ಯಾವಾಗ: ಕುಮಾರಸ್ವಾಮಿ ಪ್ರಶ್ನೆ

Date:

Advertisements

ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ. ಇದೆಲ್ಲದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ರೇವಣ್ಣ ಕುಟುಂಬವನ್ನು ಮುಗಿಸಲು ನೋಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ನ್ಯಾಯದ ಪರ ಇದ್ದೇನೆ, ನೊಂದ ಮಹಿಳೆಯರ ಪರ ಇದ್ದೇನೆ” ಎಂದರು.

“ವಕೀಲರಾದ ದೇವರಾಜೇಗೌಡರನ್ನು ಈಗ ಒಂದು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದ್ದು ಯಾಕೆ? ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆ ಆಯಿತು? ಆಡಿಯೋ ಮೂಲಕ ಸಿಕ್ಕಿಬಿದ್ದ ದೊಡ್ಡ ತಿಮಿಂಗಲವನ್ನು ಬಿಟ್ಟು ದೇವರಾಜೇಗೌಡರನ್ನು ಬಂಧನ ಮಾಡಿದ್ದಾರೆ” ಎಂದು ಅತೃಪ್ತಿ ವ್ಯಕ್ತಪಡಿಸಿದರು.

Advertisements

“ವಿಡಿಯೋದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರಕಾರಕ್ಕೆ ಅನುಕಂಪ‌ ಎನ್ನುವುದು ಇದೆಯಾ? ಈ ಪ್ರಕರಣಕ್ಕೆ ಸಂಬಂಧಿಸಿ ನಾನು ಯಾರನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಹಿತಿ ತಂತ್ರಜ್ಞಾನದ ಈ ಕಾಲದಲ್ಲಿ ಅಪರಾಧಿ ನಿರಪರಾಧಿ ಆಗುತ್ತಾನೆ. ಸರಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ಅದನ್ನು ಬಿಟ್ಟು ರೇವಣ್ಣ ಸುತ್ತ ತನಿಖೆ ಗಿರಕಿ ಹೊಡೆಯುವ ಅಗತ್ಯವಿಲ್ಲ” ಎಂದರು.

ನೊಂದ ಮಹಿಳೆಯರಿಗೆ ಹೆದರಿಸಿದ್ದು ಯಾರು?

“ಮಹಿಳೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಓರ್ವ ನೊಂದ ಮಹಿಳೆ ದೂರು ಕೊಟ್ಟಿದ್ದಾರೆ. ಆ ಹೆಣ್ಣುಮಗಳಿಗೆ ಹೆದರಿಸಿ‌ ಅವರಿಂದ ದೂರು ಪಡೆಯಲು ಪ್ರಯತ್ನ ಮಾಡಿದ್ದಾರೆ. ಅವರಿಗೆ ಹೆದರಿಸಿ ಬೆದರಿಸಿದವರು ಯಾರು? ಮಫ್ತಿಯಲ್ಲಿ ಅವರ ಮನೆ ಬಳಿ ಹೋಗಿ ಹೆದರಿಸಿದ್ದು ಯಾರು? ಇದೆಲ್ಲಾ ಎಸ್ಐಟಿಗೆ ಗೊತ್ತಾ” ಎಂದು ಪ್ರಶ್ನಿಸಿದರು.

“ಕೆಲವೇ ದಿನಗಳಲ್ಲಿ ಎಲ್ಲ ಮಾಹಿತಿ ಹೊರಗೆ ಬರಲಿದೆ. ಮಹಿಳೆಯರಿಗೆ ಬೆದರಿಸಿದ್ದು, ಧಮ್ಕಿ ಹಾಕಿದ್ದು ಎಲ್ಲವೂ ಆಚೆ ಬರಲಿದೆ. ನೀವು ಅದರ ಬಗ್ಗೆ ಏನು ಕ್ರಮ ತಗೊಂಡಿದ್ದೀರಿ ಗೃಹ ಸಚಿವರೇ?” ಎಂದು ಡಾ ಜಿ ಪರಮೇಶ್ವರ ಅವರನ್ನು ಪ್ರಶ್ನಿಸಿದರು.

ಪೆನ್ ಡ್ರೈವ್ ಹಂಚಿದವರು ಎಲ್ಲಿ? ಯಾಕೆ ಹಿಡಿದಿಲ್ಲ?

“ಹಾಸನದಲ್ಲಿ ಪೆನ್ ಡ್ರೈವ್ ಗಳನ್ನು ಹಂಚಿರುವ ವ್ಯಕ್ತಿಗಳು ಎಲ್ಲಿ? ಎಫ್ ಐಆರ್ ದಾಖಲಾಗಿರುವ ಒಬ್ಬ ವ್ಯಕ್ತಿಯನ್ನೂ ಎಸ್ ಐಟಿ ಹಿಡಿಯಲಿಲ್ಲ. ವಿಡಿಯೋಗಳನ್ನು ಮೊದಲು ಕದ್ದು ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣನಾದ ಕಾರು ಚಾಲಕನನ್ನು ಇದುವರೆಗೂ ತನಿಖಾ ತಂಡ ಬಂಧನ ಮಾಡಿಲ್ಲ ಯಾಕೆ? ಆದರೆ, ಖಾಸಗಿ ಚಾನಲ್ ನಲ್ಲಿ ಒಂದೂವರೆ ಗಂಟೆ ಕಾಲ ಕೂರಿಸಿಕೊಂಡು ಅವನನ್ನು ಸಂದರ್ಶನ ಮಾಡುತ್ತಾರೆ. ಎಸ್‌ಐಟಿ ತಂಡಕ್ಕೆ ಸಿಗದ ಆ ವ್ಯಕ್ತಿ ಸುಲಭವಾಗಿ ಖಾಸಗಿ ಚಾನೆಲ್ ಗೆ ಸಿಗುತ್ತಾನೆ ಎಂದರೆ ಇಲ್ಲಿ ಏನ್ ನಡೆಯುತ್ತಿದೆ?” ಎಂದು ಹರಿಹಾಯ್ದರು.

“ಪ್ರಜ್ವಲ್ ವಿಡಿಯೋಗಳ ಹಂಚಿಕೆಯಲ್ಲಿ ಹಾಸನ ಅಭ್ಯರ್ಥಿಯೇ ಶಮೀಲಾಗಿದ್ದಾರೆ, ಇವೆಲ್ಲ ಸಣ್ಣ ಸಣ್ಣ ಮೀನುಗಳು, ದೊಡ್ಡ ತಿಮಿಂಗಲವನ್ನು ಹಿಡಿದು ವಿಚಾರಣೆ ನಡೆಸಿದರೆ ಎಲ್ಲ ವಿಷಯಗಳು ಬಯಲಿಗೆ ಬರುತ್ತವೆ, ಆದರೆ ತಿಮಿಂಗಿಲ ಸರ್ಕಾರದ ಭಾಗವಾಗಿರುವುದರಿಂದ ಬಂಧಿಸುವವರು ಯಾರು?” ಎಂದು ಕುಮಾರಸ್ವಾಮಿ ಕೇಳಿದರು.

ನವೀನ್ ಗೌಡ ಎನ್ನುವ ವ್ಯಕ್ತಿ ಎಲ್ಲಿ?

“ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ಹೊರಬರುತ್ತವೆ ಎಂದು ಫೇಸ್ ಬುಕ್ಕಿನಲ್ಲಿ ಸಮಯದ ಸಮೇತ ಪೋಸ್ಟ್ ಹಾಕಿದ್ದ ನವೀನ್ ಗೌಡ ಎನ್ನುವ ವ್ಯಕ್ತಿ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳಿದ್ದಾನೆ. ಅವನು ಏನೆಲ್ಲಾ ಹೇಳಿದ್ದಾನೆ, ಸಾಮಾಜಿಕ ಜಾಲತಾಣಗಳಲ್ಲಿ ಏನೆಲ್ಲಾ ಪೋಸ್ಟ್ ಮಾಡಿದ್ದಾನೆ ಎನ್ನುವುದು ಎಸ್ ಐಟಿಗೆ ಗೊತ್ತಿಲ್ಲವೇ? ಇವನನ್ನು ಹಿಡಿದ್ರಾ” ಎಂದು ಖಾರವಾಗಿ ಪ್ರಶ್ನಿಸಿದರು.

“ಬಿಜೆಪಿ ಪಕ್ಷದ ಮಾಜಿ ಶಾಸಕರೊಬ್ಬರ ಎಡಬಲದಲ್ಲಿ ಇದ್ದ ಇಬ್ಬರನ್ನು ಹಿಡಿಯಲಾಗಿದೆ ಮಾಧ್ಯಮಗಳಲ್ಲಿ ಗಮನಿಸಿದೆ. ಇನ್ನೊಂದು ವಾರದಲ್ಲಿ ಮುಖ್ಯವಾದವರನ್ನು ಹಿಡಿಯಲಾಗುತ್ತದೆ ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ಹಾಗಾದರೆ, ಎಸ್ಐಟಿ ತನಿಖೆಯ ಎಲ್ಲಾ ಅಂಶಗಳು ಇವರಿಗೆ ಹೇಗೆ ಸೋರಿಕೆ ಆಗುತ್ತಿವೆ. ಇದಕ್ಕೆ ಸರಕಾರ ಉತ್ತರ ಕೊಡಬೇಕಿದೆ” ಎಂದು ಅವರು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X