ಬಿಗ್ ನ್ಯೂಸ್ | ಎಚ್‌ಡಿಕೆ-ಬಿಎಸ್‌ವೈ ಜಂಟಿ ಹಗರಣ: ನ್ಯಾಯಾಧೀಶರ ಸಮ್ಮುಖದಲ್ಲಿ ಹೇಳಿಕೆ ನೀಡಿದ ನಿವೃತ್ತ ಐಎಎಸ್‌ ಅಧಿಕಾರಿ

Date:

Advertisements

ಈದಿನ.ಕಾಮ್‌ ತನಿಖಾ ವರದಿ ಪ್ರಕಟಿಸಿದ ಬಳಿಕ, ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣವು ತೀವ್ರ ಚರ್ಚೆಯಲ್ಲಿದೆ. ಹಗರಣದ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹಲವು ಅಧಿಕಾರಿಗಳ ಹೇಳಿಕೆಯನ್ನು ನಿಯಮ 164ರ ಅಡಿಯಲ್ಲಿ ನ್ಯಾಯಾಧೀಶರ ಎದುರು ದಾಖಲೆ ಮಾಡಿಸಲು ಮುಂದಾಗಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ 2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್ ಅವರಿಂದ ತನಿಖಾಧಿಕಾರಿಗಳು ಹಿಂದೆಯೇ ಹೇಳಿಕೆ ದಾಖಲಿಸಿದ್ದಾಗಿ ತಿಳಿದುಬಂದಿತ್ತು.

ಇದೀಗ, ಗುರುವಾರ (ಸೆ.19), ಬೆಂಗಳೂರಿನ 36ನೇ ಎಸಿಎಂಎಂ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಎದುರು ಹಾಜರಾಗಿದ್ದ ರಾಕೇಶ್‌ ಸಿಂಗ್ ನಿಯಮ 164ರ ಅಡಿಯಲ್ಲಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

164ರ ನಿಯಮದಡಿ, ವಿಚಾರಣೆಯ ಹಂತದಲ್ಲಿ ತಪ್ಪೊಪ್ಪಿಗೆ ಅಥವಾ ಸಾಕ್ಷ್ಯಗಳನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ದಾಖಲೆ ಮಾಡಲಾಗುತ್ತದೆ. ಹೀಗೆ ಮಾಡುವುದರಿಂದ ವಿಚಾರಣೆಯ ಪ್ರಕ್ರಿಯೆಯಲ್ಲಿ  ಸಾಕ್ಷಿದಾರರು ಪ್ರತಿಕೂಲ ಹೇಳಿಕೆ ಕೊಡುವುದನ್ನು  ತಪ್ಪಿಸಬಹುದು. ಈ ರೀತಿಯ ಹೇಳಿಕೆಯನ್ನು ಆಧರಿಸಿ ತನಿಖಾಧಿಕಾರಿಗಳು ತನಿಖೆಯನ್ನು ತ್ವರಿತವಾಗಿ ಪುರ್ಣಗೊಳಿಸಲು ನೆರವಾಗುತ್ತದೆ.

Advertisements

ಅಂದಹಾಗೆ, ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ  ಹಾಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜಂಟಿಯಾಗಿ ಡಿನೋಟಿಫೈ ಮಾಡಿಸಿದ್ದರು. ಡಿನೋಟಿಫೈ ಆದ ಭೂಮಿಯನ್ನು ಅಂತಿಮವಾಗಿ ಕುಮಾರಸ್ವಾಮಿ ಅವರ ಬಾಮೈದ ಡಾ. ಚನ್ನಪ್ಪ ಎಂಬಾತನ ಹೆಸರಿಗೆ ನೋಂದಣಿ ಮಾಡಿಕೊಡಲಾಗಿತ್ತು. ಈ ಬಗ್ಗೆ 2015ರಲ್ಲಿ ಲೋಕಾಯುಕ್ತಕ್ಕೆ ದೂರನ್ನೂ ನೀಡಲಾಗಿತ್ತು. ಆದರೆ, ದೂರು ದಾಖಲಾಗಿ 9 ವರ್ಷಗಳು ಕಳೆದರೂ ಲೋಕಾಯುಕ್ತ ತನಿಖೆಯನ್ನು ಪೂರ್ಣಗೊಳಿಸದೆ, ನಿರ್ಲಕ್ಷ್ಯ ಧೋರಣೆ ತಳೆದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈದಿನ.ಕಾಮ್‌ ಸಮಗ್ರ ದಾಖಲೆಗಳನ್ನು ಕಲೆ ಹಾಕಿ, ಪ್ರಕರಣವನ್ನು ಬಯಲಿಗೆದಿದೆ. ಇದರಿಂದ, ಹಗರಣದ ತನಿಖೆಗೆ ಮತ್ತೆ ಜೀವ ಬಂದಿದೆ. ಇದೀಗ ಪ್ರಮುಖ ಬೆಳವಣಿಗೆಗಳು ನಡೆಯುತ್ತಿವೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಅಂದಿನ ಅಧಿಕಾರಿಗಳಾದ ರಾಕೇಶ್ ಸಿಂಗ್, ಜ್ಯೋತಿ ರಾಮಲಿಂಗಂ, ನಂದಕುಮಾರ್ ಮತ್ತಿತರ ಅಧಿಕಾರಿಗಳ ಹೇಳಿಕೆಗಳನ್ನು ಲೋಕಾಯುಕ್ತ ದಾಖಲಿಸಿಕೊಳ್ಳುತ್ತಿದೆ.

ಇದೇ ಸಮಯದಲ್ಲಿ, ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್‌ ಲಾಡ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಹಗರಣದ ಬಗ್ಗೆ ಮಾತನಾಡಿದ್ದಾರೆ. ತ್ವರಿತವಾಗಿ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X