ಎಚ್‌ಡಿಕೆ ಭೂ ಒತ್ತುವರಿ ಪ್ರಕರಣ: ಬಿಡದಿಯ ತೋಟದಲ್ಲಿ ಒತ್ತುವರಿ ತೆರವಿಗೆ ಸಜ್ಜಾಗಿವೆ 5 ಜೆಸಿಬಿಗಳು

Date:

ಕೇಂದ್ರ ಸಚಿವ ಎಚ್‌‌ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬಸ್ಥರ ವಿರುದ್ಧ ದಾಖಲಿರುವ ಭೂ ಒತ್ತುವರಿ ಪ್ರಕರಣ ಸಂಬಂಧಿ ಅದಿಕಾರಿಗಳು ಸಮೀಕ್ಷೆ ಮತ್ತು ತನಿನೆ ನೀಡಿದ್ದಾರೆ. ಇದೀಗ, ಒತ್ತುವರಿ ತೆರವಿಗೆ ಸಿದ್ದತೆ ನಡೆದಿದ್ದು, ಕುಮಾರಸ್ವಾಮಿ ಅವರು ತೋಟದ ಬಳಿ ಎರಡು ಜೆಸಿಬಿಗಳು ಒತ್ತುವರಿ ತೆರವು ಕಾರ್ಯಾರಚರಣೆಗೆ ಸಿದ್ದವಾಗಿದೆ ಎಂದು ಹೇಳಲಾಗಿದೆ.

- Advertisement -

ಬಿಡದಿಯ ಕೇತಗಾನಹಳ್ಳಿಯಲ್ಲಿ ಸರ್ವೇ ನಂಬರ್ 7, 8, 9, 10, 16, 17 ಮತ್ತು 79ರಲ್ಲಿ ಸುಮಾರು 70 ಎಕರೆ ಸರ್ಕಾರಿ ಭೂಮಿಯನ್ನು ಕುಮಾರಸ್ವಾಮಿ ಮತ್ತು ಸಂಬಂಧಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಒತ್ತುವರಿ ಪ್ರಕರಣದಲ್ಲಿ ತನಿಖೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಲು ಹೈಕೋರ್ಟ್‌ ಸೂಚನೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಹೈಕೋರ್ಟ್‌ ಆದೇಶದಂತೆ ಕಂದಾಯ ಇಲಾಖೆ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳು ಸರ್ವೇ ನಡೆಸಿ, ತನಿಖೆ ನಡೆಸಿದ್ದಾರೆ. ಆದರೆ, ಕೇವಲ 14 ಎಕರೆ ಮಾತ್ರವೇ ಒತ್ತುವರಿಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಒತ್ತುವರಿ ತೆರಳು ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಶೀಘ್ರದಲ್ಲೇ ತೆರವು ಕಾರ್ಯಾಚರಣೆ ಆರಂಭ ಸಾಧ್ಯತೆ ಇದೆ.

ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಕೋರ್ಟ್ ಆದೇಶ ಮತ್ತು ಒತ್ತುವರಿ ಸರ್ವೆ ವರದಿಯೊಂದಿಗೆ ಕುಮಾರಸ್ವಾಮಿ ಅವರ ತೋಟದ ಮನೆ ಬಳಿಗೆ ಬಂದಿದ್ದಾರೆ. ಉಪ ವಿಭಾಗಾಧಿಕಾರಿ ಬಿನೋಯ್ ಪಿ‌.ಕೆ, ತಹಶೀಲ್ದಾರ್ ತೇಜಸ್ವಿನಿ, ಸರ್ವೆ ಅಧಿಕಾರಿ ಹನುಮೇಗೌಡ, ಪೊಲೀಸರು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದಾರೆ. ಐದು ಜೆಸಿಬಿಗಳನ್ನೂ ತರಲಾಗಿದೆ.

“ಕೋರ್ಟ್ ಆದೇಶದಂತೆ ತೆರವು ಕಾರ್ಯಾಚರಣೆ ನಡೆಸಲು ಮುಂದಾಗಿದ್ದೇವೆ‌. ಹಲವರಿಗೆ ಸೇರಿರುವ 12 ಸರ್ವೆ ನಂಬರ್‌ಗಳ 14 ಎಕರೆಯಷ್ಟು ಜಾಗ ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಲಾಗುತ್ತದೆ” ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...