ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್‌ಗೆ ಇನ್ನೂ ಕಗ್ಗಂಟಿನ ಚರ್ಚೆಯಾಗಿ ಉಳಿದಿದೆ. ಮಂಡ್ಯ ಜೆಡಿಎಸ್ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸುಮಲತಾ ಇನ್ನೂ ತಮ್ಮ ನಿರ್ಧಾರವೇನು ಎಂಬುದನ್ನು ಸ್ಪಷ್ಟವಾಗಿ ಹೇಳಿಲ್ಲ. ಈ ನಡುವೆ, ಎಚ್.ಡಿ ಕುಮಾರಸ್ವಾಮಿ ಭಾನುವಾರ ಸುಮಲತಾ ಅವರನ್ನು ಭೇಟಿ ಮಾಡಿದ್ದಾರೆ. ಮಂಡ್ಯದಲ್ಲಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಸುಮಲತಾರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, “ಮಂಡ್ಯದಲ್ಲಿ ಬೆಂಬಲ ನೀಡುವಂತೆ ಸುಮಲತಾ ಅವರಿಗೆ ಮನವಿ ಮಾಡಿದ್ದೇನೆ. ಸುಮಲತಾ ಜೊತೆ ಬಿಜೆಪಿ ನಾಯಕರು ಕೂಡ ಚರ್ಚೆ ನಡೆಸಿದ್ದಾರೆ. ಹಿತೈಷಿಗಳ ಜೊತೆ ಚರ್ಚಿಸಿ, ನಿರ್ಧಾರ ತಿಳಿಸುವುದಾಗಿ ಸುಮಲತಾ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.
ಸದ್ಯ, ಮಂಡ್ಯ ಬಿಟ್ಟು ಬೇರೆಲ್ಲೂ ಹೋಗಲ್ಲ ಎನ್ನುತ್ತಿರುವ ಸುಮಲತಾ ಏಪ್ರಿಲ್ 3ರಂದು ತಮ್ಮ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆಯ ಬಳಿಕ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.