ಸುಮಲತಾರನ್ನು ಭೇಟಿ ಮಾಡಿದ ಎಚ್‌ಡಿಕೆ; ಬೆಂಬಲಿಸುವಂತೆ ಮನವಿ

Date:

ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್‌ಗೆ ಇನ್ನೂ ಕಗ್ಗಂಟಿನ ಚರ್ಚೆಯಾಗಿ ಉಳಿದಿದೆ. ಮಂಡ್ಯ ಜೆಡಿಎಸ್ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸುಮಲತಾ ಇನ್ನೂ ತಮ್ಮ ನಿರ್ಧಾರವೇನು ಎಂಬುದನ್ನು ಸ್ಪಷ್ಟವಾಗಿ ಹೇಳಿಲ್ಲ. ಈ ನಡುವೆ, ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಸುಮಲತಾ ಅವರನ್ನು ಭೇಟಿ ಮಾಡಿದ್ದಾರೆ. ಮಂಡ್ಯದಲ್ಲಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

- Advertisement -

ಸುಮಲತಾರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, “ಮಂಡ್ಯದಲ್ಲಿ ಬೆಂಬಲ ನೀಡುವಂತೆ ಸುಮಲತಾ ಅವರಿಗೆ ಮನವಿ ಮಾಡಿದ್ದೇನೆ. ಸುಮಲತಾ ಜೊತೆ ಬಿಜೆಪಿ ನಾಯಕರು ಕೂಡ ಚರ್ಚೆ ನಡೆಸಿದ್ದಾರೆ. ಹಿತೈಷಿಗಳ ಜೊತೆ ಚರ್ಚಿಸಿ, ನಿರ್ಧಾರ ತಿಳಿಸುವುದಾಗಿ ಸುಮಲತಾ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸದ್ಯ, ಮಂಡ್ಯ ಬಿಟ್ಟು ಬೇರೆಲ್ಲೂ ಹೋಗಲ್ಲ ಎನ್ನುತ್ತಿರುವ ಸುಮಲತಾ ಏಪ್ರಿಲ್ 3ರಂದು ತಮ್ಮ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆಯ ಬಳಿಕ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...