ರಾಜಭವನಕ್ಕೆ ಎಚ್‌ಡಿಕೆ ಗಣಿ ಅಕ್ರಮಗಳ ಪಟ್ಟಿ; ರಾಜ್ಯಪಾಲರ ನಡೆಯತ್ತ ಎಲ್ಲರ ಚಿತ್ತ

Date:

ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವ ಎಚ್‌.ಡಿ ಕುಮಾರಸ್ವಾಮಿ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಎಚ್‌.ಡಿ ಕುಮಾರಸ್ವಾಮಿ ವಿರುದ್ಧವೂ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನಡೆದಿವೆ ಎನ್ನಲಾದ ಗಣಿ ಗುತ್ತಿಗೆ ಮಂಜೂರು ಅಕ್ರಮಗಳ ಪಟ್ಟಿಯನ್ನು ಲೋಕಾಯುಕ್ತ ಎಸ್‌ಐಟಿ ತಂಡ ರಾಜಭವನಕ್ಕೆ ಕಳಿಸಲಾಗಿದೆ. ಕುಮಾರಸ್ವಾಮಿ ವಿರುದ್ಧದ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ಕೋರಿದೆ. ಸಿದ್ದರಾಮಯ್ಯ ಅವರ ವಿಚಾರದಲ್ಲಿ ಅತ್ಯುತ್ಸಾಹದಿಂದ ಪ್ರಾಸಿಕ್ಯೂಷನ್‌ಗೆ ಅಮನತಿ ನೀಡಿರುವ ರಾಜ್ಯಪಾಲ ತಾವರ್ ಚಂದ್ರ ಗೆಹ್ಲೋಟ್ ಅವರು ಎಚ್‌.ಡಿ ಕುಮಾರಸ್ವಾಮಿ ವಿಚಾರದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

- Advertisement -

ಮುಡಾ ಅಕ್ರಮ ಸಂಬಂಧ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ ದೂರು ಸಲ್ಲಿಸಿದ ದಿನವೇ ಮುಖ್ಯಮಂತ್ರಿಗೆ ನೋಟಿಸ್‌ ಕೊಟ್ಟು, ಬಳಿಕ ಪ್ರಾಸಿಕ್ಯೂಷನ್‌ಗೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಇದೀಗ, ಕುಮಾರಸ್ವಾಮಿ ಅವರ ವಿಚಾರದಲ್ಲಿಯೂ ಅಷ್ಟೇ ತ್ವರಿತವಾಗಿ ಕ್ರಮ ಕೈಗೊಳ್ಳವರೇ ಎಂಬ ಪ್ರಶ್ನೆ ಮತ್ತು ಕುತೂಹಲ ರಾಜ್ಯದ ಜನರಲ್ಲಿದೆ. ಅಂದಹಾಗೆ, ಇದೇ ರಾಜ್ಯಪಾಲರು ಈ ಹಿಂದೆ ಕುಮಾರಸ್ವಾಮಿ ವಿರುದ್ಧ ಸಲ್ಲಿಕೆಯಾಗಿದ್ದ ದೂರನ್ನು 10 ತಿಂಗಳಿಗೂ ಹೆಚ್ಚು ಕಾಲ ಬಚ್ಚಿಟ್ಟಿದ್ದರು ಎಂಬುದು ಕಳೆದ ವಾರ ಭಾರೀ ಚರ್ಚೆಯಲ್ಲಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

2007ರಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಬಳ್ಳಾರಿ ಜಿಲ್ಲೆಯ ಸಂಚೂರಿನಲ್ಲಿ 550 ಎಕರೆ ಭೂಮಿಯಲ್ಲಿ ಗಣಿಗಾರಿಕೆ ನಡೆಸಲು ಎಸ್‌ಎಸ್‌ವಿಎಂ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ್ದರು. ಈ ವೇಳೆ, ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ ಇದೇ ಆರೋಪದ ಮೇಲೆ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ಕೋರಿ ಲೋಕಾಯುಕ್ತ ಎಸ್‌ಐಟಿ ತಂಡ ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಿದೆ.

ಅಂದಿನ ಗಣಿ ಗುತ್ತಿಗೆ ಮಂಜೂರು ಪ್ರಕರಣದ ವಿಚಾರಣೆ ನಡೆಸಿದ್ದ ಆಗಿನ ಲೋಕಾಯುಕ್ತ ಎನ್‌ ಸಂತೋಷ್ ಹೆಗ್ಡೆ ಅವರು 2011ರಲ್ಲಿ ವರದಿ ಸಲ್ಲಿಸಿದ್ದರು. ಆ ವರದಿಯನ್ನು ಉಲ್ಲೇಖಿಸಿ ಲೋಕಾಯುಕ್ತ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದೆ. ಹೆಚ್ಚಿನ ತನಿಖೆ ನಡೆಸುತ್ತಿದೆ. ಭ್ರಷ್ಟಾಚಾರ ನಿಯಂತ್ರಣ ತಿದ್ದುಪಡಿ ಕಾಯ್ದೆ-2018ರ ಅಡಿಯಲ್ಲಿ ಜನಪ್ರತಿನಿಧಿಗಳ ವಿರುದ್ಧದ ಆರೋಪದ ತನಿಖೆಗೆ ತನಿಖಾ ಸಂಸ್ಥೆಗಳು ರಾಜ್ಯಪಾಲರ ಅನಮತಿ ಪಡೆಯಬೇಕಿದೆ. ಹೀಗಾಗಿ, ಕುಮಾರಸ್ವಾಮಿ ವಿರುದ್ಧ ತನಿಖೆಗಾಗಿ ರಾಜ್ಯಪಾಲರ ಅನುಮತಿಗೆ ಪ್ರಸ್ತಾವ ಸಲ್ಲಿಸಿದೆ.

ಈ ವರದಿ ಓದಿದ್ದೀರಾ?: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

ರಾಜ್ಯಪಾಲರು ಜಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ ನೀಡುವರೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಎಲ್ಲ ಚಿತ್ರ ರಾಜಭವನದತ್ತ ನೆಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...