ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಚ್‌ಡಿಕೆ, ನಿಖಿಲ್‌ ಕುಮಾರಸ್ವಾಮಿ

Date:

‌ಲೋಕಾಯುಕ್ತದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮತ್ತು ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ ಚಂದ್ರಶೇಖರ್‌ ದೂರು ಆಧರಿಸಿ ಬೆಂಗಳೂರಿನ ಸಂಜಯ್‌ನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಬುಧವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಮಾಧ್ಯಮಗೋಷ್ಠಿಯಲ್ಲಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಕುಮಾರಸ್ವಾಮಿ, ಅವರ ಪುತ್ರ ಹಾಗೂ ಹಾಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್‌ ಬಾಬು ವಿರುದ್ಧ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶ ಆಧರಿಸಿ ಬೆಂಗಳೂರಿನ ಸಂಜಯ್‌ ನಗರ ಠಾಣಾಧಿಕಾರಿಯು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ, ನಿಖಿಲ್‌ ಮತ್ತು ಸುರೇಶ್‌ ಬಾಬು ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 224 (ಸರ್ಕಾರಿ ಅಧಿಕಾರಿಗೆ ಬೆದರಿಕೆ) ಅಡಿ ಪ್ರಕರಣ ದಾಖಲಿಸಿದ್ದರು.

ಈಗ ಈ ಮೂವರು ನಾಯಕರು ಎಫ್‌ಐಆರ್‌ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಇನ್ನಷ್ಟೇ ನಿಗದಿಯಾಗಬೇಕಿದೆ.

“ತಮ್ಮ ರಾಜಕೀಯ ಎದುರಾಳಿಗಳ ಪ್ರಚೋದನೆಗೆ ಒಳಗಾಗಿ ದೂರುದಾರ ಎಂ ಚಂದ್ರಶೇಖರ್‌ ಅವರು ತಮ್ಮ ವಿರುದ್ಧ ಆರೋಪ ಮಾಡಿ, ಘನತೆಗೆ ಹಾನಿ ಮಾಡಿದ್ದಾರೆ. ಕುಮಾರಸ್ವಾಮಿ ಅವರ ವಿರುದ್ಧ ಚಂದ್ರಶೇಖರ್‌ ಅವರು ದಾಳಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಾರದಿತ್ತು. ಅರ್ಜಿದಾರರನ್ನು ಅವಮಾನಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ. ಹಲವು ರಾಜಕೀಯ ವಿರೋಧಿಗಳು ಚಂದ್ರಶೇಖರ್‌ ಅವರನ್ನು ಪ್ರಚೋದಿಸಿದ್ದು, ಅವರು ಬರೆದಿರುವ ಪತ್ರವನ್ನು ಪೊಲೀಸ್‌ ಇಲಾಖೆಯಲ್ಲಿ ಹಂಚಿಕೆ ಮಾಡಲಾಗಿದೆ. ಈಗ ದೂರಿನಲ್ಲಿ ಮಾಡಿರುವ ಆರೋಪಗಳು ಸೃಷ್ಟಿತವಾಗಿದ್ದು, ಎಫ್‌ಐಆರ್‌ ದಾಖಲಿಸುವ ಉದ್ದೇಶದಿಂದ ಮಾಡಲಾಗಿದೆ. ಹೀಗಾಗಿ, ಅದನ್ನು ವಜಾ ಮಾಡಬೇಕು” ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...