ಮಗನ ಚುನಾವಣೆ ಎಂದು ಕಂಪನಿಗಳ ಮೂಲಕ ಎಚ್‌ಡಿಕೆ ಸಾಕಷ್ಟು ಹಣ ಪಡೆದಿದ್ದಾರೆ: ಸಚಿವ ಚಲುವರಾಯಸ್ವಾಮಿ

Date:

Advertisements

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಬೇರೆ ಸಮಯದಲ್ಲಿ ಹಣ ಸಿಗುತ್ತದೋ ಇಲ್ವೋ ಗೊತ್ತಿಲ್ಲ. ಆದರೆ ಮಗನ ಚುನಾವಣೆ ಎಂದು ಸಾಕಷ್ಟು ಗಿಫ್ಟ್ ಪಡೆದಿದ್ದಾರೆ. ಸಾಕಷ್ಟು ಕಂಪನಿ ಮೂಲಕ ಸಾವಿರಾರು ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಗಂಭೀರವಾಗಿ ಆರೋಪಿಸಿದರು.

ಮಂಡ್ಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, “ದುಡ್ಡು ಖರ್ಚು ಮಾಡಿದ ತಕ್ಷಣ ಚುನಾವಣೆ ಗೆಲ್ಲಲ್ಲ. ಉಪ ಚುನಾವಣೆಯಲ್ಲಿ ದುಡ್ಡಿನಲ್ಲಿ ಅವರ ಜೊತೆ ಫೈಟ್ ಮಾಡಲಾಗಲಿಲ್ಲ. ಹಣದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್​ನವರ ಜೊತೆ ಹೋಲಿಕೆ ಸಾಧ್ಯವಿಲ್ಲ. ನಮ್ಮ ಬಳಿ ಹಣವಿಲ್ಲ, ಗ್ಯಾರಂಟಿ ನೀಡಿದ್ದೇವೆ” ಎಂದರು.

“40 ಪರ್ಸೆಂಟ್ ಹಗರಣ ಮಾಡಿದ್ದರಿಂದಲೇ ಬಿಜೆಪಿ ಸರ್ಕಾರ ಹೋಯ್ತು. ನಮ್ಮ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತೆ ಪ್ರಯತ್ನ ಮಾಡುತ್ತಿದೆ” ಎಂದು ದೂರಿದರು.

Advertisements

ಮೈಸೂರಲ್ಲೂ ವಾಗ್ದಾಳಿ

“ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೇಕೆ ನಾವು ಸಿದ್ಧರಿಲ್ಲ, ಸ್ನೇಹಿತರನ್ನು ಬಿಟ್ಟು ಜೆಡಿಎಸ್ ಪಕ್ಷ ಈಗ ಕುಟುಂಬದ ಪಕ್ಷವಾಗಿದೆ. ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ, ವೇದಿಕೆ ಸಿದ್ದಪಡಿಸಲಿ” ಎಂದು ಕುಮಾರಸ್ವಾಮಿಯವರಿಗೆ ಚಲುವರಾಯಸ್ವಾಮಿ ಸವಾಲು ಹಾಕಿದರು.

ಜಮೀರ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

“ನನಗೆ ಕುಮಾರಸ್ವಾಮಿಯಂತೆ ಮಾಧ್ಯಮದವರ ಮುಂದೆ ನಾಲಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡಾ ಎಂದು ಚರ್ಚೆ ಮಾಡೋಣ. 20 ವರ್ಷ ಅವರ ಜತೆ ಇದ್ದೆವು, ಯಾರು ಸ್ನೇಹ ಬಿಟ್ಟರು ಎಂದು ಚರ್ಚಿಸೋಣ” ಎಂದರು.

“ಸ್ನೇಹಿತರಿಂದಲೇ ಸಿಎಂ ಆದೇ ಎಂದು ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದರು. ಆಗ ಅದು ಕರಾಳದಿನ ಆಗಿರಲಿಲ್ಲವಾ? ಅಷ್ಟು ದಿನ ಏಕೆ ಕೊಳಚೆ ವಾಸನೆ ಕುಡಿದಿದ್ದರಾ? ಕುಮಾರಸ್ವಾಮಿ ಆ ರೀತಿ ಮಾತನಾಡಿದ್ದು ಎಷ್ಟು ಸರಿ? ಉತ್ತರ ಕೊಡುವುದು ಸೂಕ್ತ ಎಂದರೆ ಕೊಡುತ್ತೇನೆ. ಮಾತಿನಿಂದ ಯಾರೂ ದೊಡ್ಡವರು ಆಗುವುದಿಲ್ಲ, ನಡವಳಿಕೆಯಿಂದ ದೊಡ್ಡವರಾಗಬೇಕು” ಎಂದು ಹೇಳಿದರು.

“ಇವರದ್ದು ಕುಟುಂಬದ ಪಕ್ಷ ಆಗಿ ಉಳಿದಿದೆ. ಸಾಕಷ್ಟು ಇತಿಹಾಸ ಇದೆ, ಹೆಗಡೆ, ಜೆ.ಹೆಚ್‌. ಪಟೇಲ್‌ ಜೊತೆ ಎಷ್ಟು ದಿನ ಚೆನ್ನಾಗಿದ್ದರು? ಈ ಬಗ್ಗೆ ಅವರೇ ಹೇಳಲಿ, ಸದನದಲ್ಲಿ ಚರ್ಚೆಯಾದರೆ ಒಳ್ಳೆಯದು, ಬರಲು ಹೇಳಿ. ಒಂದು ವೇದಿಕೆ ನಿರ್ಮಾಣ ಮಾಡೋಣಾ, ಒಂದು ಸಮಯ ನಿಗದಿ ಮಾಡಿ. ನಾವು ಬರಲು ತಯಾರಿದ್ದೇವೆ, ಜನರಿಗೂ ಅಸಲಿ ಸಂಗತಿ ಗೊತ್ತಾಗಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X