ಭ್ರೂಣ ಪತ್ತೆ-ಹತ್ಯೆ ಜಾಲದಲ್ಲಿ ಆರೋಗ್ಯ ಇಲಾಖೆ ಶಾಮೀಲು: ಆರ್‌ ಅಶೋಕ್‌ ಗಂಭೀರ ಆರೋಪ

Date:

ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಗಂಭೀರವಾಗಿ ಆರೋಪಿಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಹಂಚಿಕೊಂಡಿರುವ ಅವರು, “ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರೇ, ಭ್ರೂಣ ಹತ್ಯೆ ಪ್ರಕರಣದ ವರದಿ ಸಲಿಸಬಾರದು ಎಂದು ಇಷ್ಟೊಂದು ಒತ್ತಡ ಹೇರುತ್ತಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಯಾರ ಕುಮ್ಮಕ್ಕಿದೆ, ಯಾವ ಬೆಂಬಲದಿಂದ ಅಧಿಕಾರಿಗಳ ಈ ಕಳ್ಳಾಟ ನಡೆಯುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ಇದನ್ನೆಲ್ಲಾ ನೋಡುತ್ತಿದ್ದರೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅಮಾನುಷ ಭ್ರೂಣ ಪತ್ತೆ-ಹತ್ಯೆ ಜಾಲವನ್ನು ಬೇಧಿಸಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್‌ ಸರ್ಕಾರ ಕಾಣದ ‘ಕೈ’ಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎನ್ನುವ ಅನುಮಾನ ಮೂಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಈ ಪ್ರಕರಣದ ಆಳ-ಅಗಲ, ಗಂಭೀರತೆ, ಮತ್ತು ಇದರ ಹಿಂದಿರುವ ಪ್ರಭಾವಿ ಶಕ್ತಿಗಳನ್ನು ಅಂದಾಜಿಸಿಯೇ ನಾನು ಈ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕು, ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಒತ್ತಾಯಿಸಿದ್ದು. ಮಹಿಳೆಯರ ವೋಟಿಗಾಗಿ ಅವರ ಮೂಗಿಗೆ ತುಪ್ಪ ಸವರುವ ಶಕ್ತಿ, ಗೃಹಲಕ್ಷ್ಮಿ ಗ್ಯಾರೆಂಟಿಗಳನ್ನು ನೀಡಿದರೆ ಮಹಿಳೆಯರ ಸಬಲೀಕರಣ ಆಗುವುದಿಲ್ಲ ಸಿಎಂ ಸಿದ್ದರಾಮಯ್ಯ ನವರೇ, ಹುಟ್ಟುವ ಮೊದಲೇ ಹೆಣ್ಣು ಮಕ್ಕಳ ಪ್ರಾಣ ಕಸಿದುಕೊಳ್ಳುವ ಈ ಅಮಾನುಷ ಜಾಲವನ್ನು ಭೇದಿಸುವ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ತಮ್ಮ ನಿಜವಾದ ಬದ್ಧತೆ ತೋರಿಸಿ” ಎಂದು ಕುಟುಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...