ಮೂರು ತಿಂಗಳೊಳಗೆ ‘108’ ಆರೋಗ್ಯ ಸೇವೆಗೆ ಹೊಸ ರೂಪ: ದಿನೇಶ್‌ ಗುಂಡೂರಾವ್‌

Date:

108 ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಒಳಗೆ ಹೊಸ ರೂಪ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್ ತಿಳಿಸಿದರು.

- Advertisement -

ಆರೋಗ್ಯ ಸೌಧದಲ್ಲಿ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಅವರು, 108 ಆರೋಗ್ಯ ಸೇವೆ ಸುಧಾರಣೆಗೆ ಹಾಗೂ ಸಮಸ್ಯೆಗಳ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಸಭೆಗೂ ಮುನ್ನ ಇ.ಎಂ.ಆರ್.ಐ. ಗ್ರೀನ್ ಹೆಲ್ತ್‌ ಸರ್ವೀಸ್‌ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಕಾಲ್ ಸೆಂಟರ್‌ನ ತಂತ್ರಜ್ಞಾನ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದ ಅವರು, ತಂತ್ರಜ್ಞಾನದಲ್ಲಿ ಬದಲಾವಣೆ ತರುವಂತೆ ಸೂಚಿಸಿದರು.

108 ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಕರೆಗಳಿಗೆ ಸೂಕ್ತ ಸ್ಪಂದನೆ ಏಕೆ ಸಿಗುತ್ತಿಲ್ಲ? ಎಂದು ಅಧಿಕಾರಿಗಳನ್ನ ಪ್ರಶ್ನಿಸಿ, ಆದಷ್ಟು ಬೇಗ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

2017ರಿಂದ 108 ಆರೋಗ್ಯವಾಹಿನಿ ಹೊಸ ಟೆಂಡರ್ ಕರೆದಿಲ್ಲ. ಈ ಹಿಂದೆ ಗುತ್ತಿಗೆ ಪಡೆದವರೇ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಗರಂ ಆದ ಅವರು, 108 ಆರೋಗ್ಯ ವಾಹಿನಿ ಸೇವೆ ಜನರಿಗೆ ಸಮರ್ಪಕವಾಗಿ ತಲುಪಿಸಲು ಹೆಚ್ಚು ಗಮನ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

“ಮೂರು ತಿಂಗಳ ಒಳಗೆ ನನಗೆ ಉತ್ತಮ ಫಲಿತಾಂಶ ಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, “ಜನರು 108 ಆರೋಗ್ಯ ಸೇವೆ ಪಡೆಯಲು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾದರೆ ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಮೀನು ವಿವಾದ: ಜೋಳದ ಬೆಳೆ ನಾಶ, ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ

ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳಪುರ ಗ್ರಾಮದಲ್ಲಿ ಬಾಂಡ್ ಪತ್ರದ ಮೂಲಕ...

ಮಂಗಳೂರು | SIR ರದ್ದತಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮನವಿ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು,...

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...