ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಲು ಆರೋಗ್ಯ ಸಚಿವರ ಸೂಚನೆ

Date:

Advertisements

ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸೋಮವಾರ ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ರಾಜ್ಯದ ಮೂರು ಸ್ಥಳಗಳಲ್ಲಿ BMST ಅಡಿಯಲ್ಲಿ HLA ಪ್ರಯೋಗಾಲಯಗಳನ್ನು ಸ್ಥಾಪಿಸಲು KMC&RI ಮಾದರಿಯನ್ನು ಅನ್ವೇಷಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.‌

Advertisements
IMG 20250513 WA0287

ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಸಚಿವರು, ಎಲ್ಲ ಜಿಲ್ಲಾಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಪ್ರಾರಂಭಿಸಿ ಎಂದರು.

ರಾಜ್ಯದಲ್ಲಿ ಅಂಗಾಂಗ ದಾನ ಮತ್ತು ಕಸಿ ಪ್ರಯತ್ನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಪ್ರಮುಖ ನಿರ್ಧಾರಗಳನ್ನು ಸಚಿವರ ನೇತೃತ್ವದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

ಜೀವಸಾರ್ಥಕತೆ ಸೊಸೈಟಿಯ ನೋಂದಣಿಯನ್ನು ನವೀಕರಿಸಲಾಗುವುದು ಮತ್ತು ಕಾರ್ಯಾಚರಣಾ ವಲಯಗಳ ಸಂಖ್ಯೆಯನ್ನು ಐದರಿಂದ ಏಳಕ್ಕೆ ವಿಸ್ತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೇ ಸ್ಟೀರಿಂಗ್ ಸಮಿತಿಯನ್ನು ರಚಿಸುವುದರ ಜೊತೆಗೆ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X