ದ್ವೇಷ ಭಾಷಣ ನಿಲ್ಲಿಸಿ, ಹೆಚ್ಚು ಸಿಸಿ ಟಿವಿ ಅಳವಡಿಸಿ: ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

Date:

ಹರಿಯಾಣ ಮತ್ತು ದೆಹಲಿಯಲ್ಲಿ ಗಲಭೆ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಮತ್ತು ಸಿಸಿಟಿವಿಗಳನ್ನು ಅಳವಡಿಸಲು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ.

ಕೋಮು ಹಿಂಸಾಚಾರ ಪ್ರಚೋದಿಸುವ ಮತ್ತು ಜನರನ್ನು ಹಿಂಸಾಚಾರಕ್ಕೆ ಪ್ರಚೋದಿಸುವ ರ‍್ಯಾಲಿಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಎಸ್‌ ವಿ ಭಟ್ಟಿ ಅವರನ್ನೊಳಗೊಂಡ ವಿಶೇಷ ಪೀಠವು ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿ ಸರ್ಕಾರಗಳಿಗೆ ನೋಟಿಸ್‌ ನೀಡಿದ್ದು, ವಿಎಚ್‌ಪಿ ಮತ್ತು ಬಜರಂಗದಳ ಸೇರಿದಂತೆ ಯಾವುದೇ ರ‍್ಯಾಲಿ ಮುಂದುವರಿಯಬಹುದು ಆದರೆ ಎಲ್ಲವೂ ವಿಡಿಯೋ ಗ್ರಾಫ್ ಮಾಡಬೇಕು ಎಂದು ತಿಳಿಸಿದೆ.

ಈ ಪ್ರತಿಭಟನೆಗಳಲ್ಲಿ ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಸರ್ಕಾರಗಳು ಕ್ರಮ ತೆಗೆದುಕೊಳ್ಳಬೇಕು. ಅರೆಸೇನಾ ಪಡೆಗಳ ಸಿಬ್ಬಂದಿ ಸೇರಿದಂತೆ ಸಾಕಷ್ಟು ಪಡೆಯನ್ನು ನಿಯೋಜಿಸಬೇಕು ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಾವುದೇ ಸಮುದಾಯದ ವಿರುದ್ಧ ಯಾವುದೇ ದ್ವೇಷದ ಭಾಷಣ ಅಥವಾ ಯಾವುದೇ ಆಸ್ತಿಯ ವಿರುದ್ಧ ಹಿಂಸಾಚಾರ ನಡೆಸುವುದಿಲ್ಲ ಎಂದು ಪೊಲೀಸರು ಒಳಗೊಂಡ ರಾಜ್ಯ ಸರ್ಕಾರ ಖಚಿತಪಡಿಸುತ್ತದೆ ಎಂದು ನಾವು ಭಾವಿಸುತ್ತೇವೆ ಮತ್ತು ನಂಬುತ್ತೇವೆ. ಅಗತ್ಯವಿರುವಲ್ಲಿ ಹೆಚ್ಚುವರಿ ಪೊಲೀಸ್ ಪಡೆ ಅಥವಾ ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗುತ್ತದೆ ಮತ್ತು ಅಗತ್ಯವಿರುವಲ್ಲಿ ಅಧಿಕಾರಿಗಳು ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಬೇಕು ಅಥವಾ ಅಗತ್ಯವಿರುವ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ವಿಡಿಯೋ ರೆಕಾರ್ಡಿಂಗ್ ಮಾಡಿ, ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು” ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಹರಿಯಾಣ ಗಲಭೆ: ದೆಹಲಿಗೆ ವ್ಯಾಪಿಸದಂತೆ ಕಟ್ಟೆಚ್ಚರ

ಹರಿಯಾಣದ ನುಹ್‌ನಲ್ಲಿ ನಡೆದ ಕೋಮು ಹಿಂಸಾಚಾರದ ನಂತರ ದೆಹಲಿ-ಎನ್‌ಸಿಆರ್‌ನಲ್ಲಿ ವಿಎಚ್‌ಪಿ ಮತ್ತು ಬಜರಂಗದಳ ಹಮ್ಮಿಕೊಂಡ ರ‍್ಯಾಲಿಗಳನ್ನು ನಿಲ್ಲಿಸುವಂತೆ ಸಲ್ಲಿಸಲಾದ ತುರ್ತು ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿತ್ತು.

“ನುಹ್ ಮತ್ತು ಗುರುಗ್ರಾಮದಲ್ಲಿನ ಪರಿಸ್ಥಿತಿಯು ಹೆಚ್ಚು ಉದ್ವಿಗ್ನವಾಗಿದೆ ಮತ್ತು ಸಣ್ಣದೊಂದು ಪ್ರಚೋದನೆಯು ಸಹ ಗಂಭೀರವಾದ ಜೀವಹಾನಿ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗಬಹುದು ಎಂಬ ಅಂಶವನ್ನು ಗಮನಿಸಿದರೆ, ಕೋಮು ಬೆಂಕಿಯನ್ನು ಪ್ರಚೋದಿಸುವ ಮತ್ತು ಹಿಂಸಾಚಾರಕ್ಕೆ ಜನರನ್ನು ಪ್ರಚೋದಿಸುವ ರ‍್ಯಾಲಿಗಳಿಗೆ ಕಡ್ಡಾಯವಾಗಿ ಅನುಮತಿ ನೀಡಬಾರದು,’’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ದೆಹಲಿಯ 23 ಸ್ಥಳಗಳಲ್ಲಿ ಪ್ರತಿಭಟನಾ ಮೆರವಣಿಗೆಗಳನ್ನು ಹಮ್ಮಿಕೊಂಡಿರುವ ಕಾರಣ ನ್ಯಾಯಾಲಯ ತುರ್ತು ವಿಚಾರಣೆ ಪರಿಗಣಿಸಬೇಕೆಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ನೆರೆಯ ಹರಿಯಾಣದಲ್ಲಿ ಕೋಮು ಗಲಭೆಯಿಂದ ಆರು ಮಂದಿ ಮೃತಪಟ್ಟು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾದ ನಂತರ ವಿಎಚ್‌ಪಿ ಮತ್ತು ಬಜರಂಗ ದಳದ ಬೆಂಬಲಿಗರು ರಾಷ್ಟ್ರ ರಾಜಧಾನಿಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆ

ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ...

ಬಿಜೆಪಿಯವರ ಒಂದು ಕೋಟಿ ಸದಸ್ಯತ್ವ ಅಭಿಯಾನ ಸುಳ್ಳಿನ ನಾಟಕ: ರಮೇಶ್ ಬಾಬು

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಕೋಟಿ ನಲವತ್ತು ಲಕ್ಷ...

ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು

ನಕಲಿ ವೈದ್ಯನೊಬ್ಬ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿ ಸರ್ಜರಿ ಮಾಡಿದ ಪರಿಣಾಮ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...