ಅತಿವೃಷ್ಟಿ | ₹666.96 ಕೋಟಿ ಲಭ್ಯ, ಸಮರ್ಪಕ ಪರಿಹಾರ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.

- Advertisement -

ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂದು ಸಭೆಯಲ್ಲಿ ಸಿಎಂ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು. ಈ ಬಾರಿ ಜಲವಿದ್ಯುತ್‌ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಕಣಿವೆ ಹಾಗೂ ಕೃಷ್ಣಾ ಕಣಿವೆಯಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

“ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್‌ಡಿಆರ್‌ಎಫ್‌ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು 6.84 ಲಕ್ಷ ರೂ., ಸಣ್ಣ ಜಾನುವಾರುಗಳಿಗೆ ಒಟ್ಟು 2.8 ಲಕ್ಷ ರೂ. ಸೇರಿದಂತೆ ಒಟ್ಟು 9.6 ಲಕ್ಷ ರೂ. ಪರಿಹಾರ ಪಾವತಿಸಲಾಗಿದೆ” ಎಂದು ಮುಖ್ಯಮಂತ್ರಿಗಳು ವಿವರಿಸಿದರು.

“ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20 ಲಕ್ಷ ರೂ. ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ 50 ಸಾವಿರ ರೂ.ವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ” ಎಂದರು.

ಪ್ರಾಣ ಹಾನಿ ಪ್ರಕರಣ, 48 ಗಂಟೆಗಳಲ್ಲಿ ಪರಿಹಾರ

“ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ಜಿಲ್ಲಾಧಿಕಾರಿಗಳು ವರದಿಯನ್ನು ಸಲ್ಲಿಸಬೇಕು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು” ಎಂದು ಸೂಚಿಸಿದರು.

“ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 551.25 ಕೋಟಿ ರೂ. ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ 115.71 ಕೋಟಿ ರೂ. ಸೇರಿದಂತೆ ಒಟ್ಟು 666.96 ಕೋಟಿ ರೂ. ಹಣ ಲಭ್ಯವಿದ್ದು ಸಮರ್ಪಕವಾಗಿ ಬಳಸಬೇಕು” ಎಂದು ಸಿಎಂ ಸೂಚಿಸಿದರು.

ಸಿದ್ದರಾಮಯ್ಯ 1 30

“ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಿ. ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಬಳಿಕ ಕೆರೆಗಳ ಹೂಳೆತ್ತುವುದು ಸೇರಿದಂತೆ ಅಭಿವೃದ್ದಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಸಹ ಇದಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.

“ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು” ಎಂದರು.

ಹಸಿರು ಪಟಾಕಿಗೆ ಮಾತ್ರ ಅವಕಾಶ

“ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಸಭೆಯಲ್ಲಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಕಂದಾಯ ಇಲಾಖೆ ಸಚಿವರಾದ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್ , ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ , ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...