ಭಾರಿ ಮಳೆ | ರಾಜ್ಯದಲ್ಲೂ ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

Advertisements

ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ದೆಹಲಿಯಿಂದಲೇ ಸೂಚಿಸಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

Advertisements

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ , ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದ್ದಾರೆ.

ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:
08226-223163
08226-223161
08226-223160
ವಾಟ್ಸಾಪ್‌ ಸಂಖ್ಯೆ: 9740942901

ವಯನಾಡು ಭೂಕುಸಿತ: ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ನಿಯೋಜನೆ

ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.

ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ. ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್ ಗಳನ್ನು ಹೆಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ.

ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.

ಕನ್ನಡಿಗರ ರಕ್ಷಣೆಗೆ ಪ್ರಯತ್ನ

ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X