ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ಫೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೊರೇನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಆದೇಶಿಸಿದೆ.
ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿಯೂ ಆಗಿರುವ ಹೇಮಂತ್ ಸೊರೇನ್ ಬಂಧನದಲ್ಲಿದ್ದಾರೆ.
ಸೊರೇನ್ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ಇದೇ 22ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಅವರ ಜಾಮೀನಿಗಾಗಿ ನಾವು ಅರ್ಜಿ ಸಲ್ಲಿಸಲಿದ್ದೇವೆ’ ಎಂದು ಸೊರೇನ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ರಾಜೀವ್ ರಂಜನ್ ತಿಳಿಸಿದರು.
ಸೊರೇನ್ ಅವರನ್ನು ರಾಂಚಿಯ ಬಿರ್ಸಾ ಮುಂಡಾ ಕೇಂದ್ರೀಯ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಸೊರೇನ್ ಅವರನ್ನು ಜನವರಿ 31ರಂದು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯವು ಇ.ಡಿ. ವಶಕ್ಕೆ ನೀಡಿತ್ತು.
ಇದನ್ನು ಓದಿದ್ದೀರಾ? ಹಿಂದು ಭಾವನೆಗೆ ಶಿಕ್ಷಕಿ ಧಕ್ಕೆ ತಂದಿಲ್ಲ; ಬಿಜೆಪಿ ಶಾಸಕನ ಒತ್ತಡದಿಂದ ಅಮಾನತು: ಜೆರೋಸಾ ಶಾಲೆ ಮುಖ್ಯಶಿಕ್ಷಕಿ
ಅಕ್ರಮ ಹಣ ವರ್ಗಾವಣೆ ಪ್ರಕರಣದ ಅಡಿ ಹೇಮಂತ್ ಸೊರೇನ್ ಬಂಧಿತರಾಗಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಇನ್ನು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳನ್ನು ಜೆಎಂಎಂ ನಾಯಕ ನಿರಾಕರಿಸಿದ್ದು, ಇವೆಲ್ಲವೂ ಬಿಜೆಪಿಯ ಷಡ್ಯಂತ್ರ ಎಂದು ಹೇಳಿದ್ದಾರೆ.