ಇನ್ನು ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Date:

ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ರಚಿಸಿದ್ದೇವೆ ಎಂದು ತಿಳಿಸಿದರು.

- Advertisement -

ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಮೂರು ಹೊಸ ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದಿನಿಂದ (ಜುಲೈ 1) ಜಾರಿಗೆ ಬರಲಿವೆ. ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಳ್ಳಲಿರುವ ಕಾಯ್ದೆಗಳು. ಈ ಮೂರು ಕಾನೂನುಗಳು ಹಿಂದಿನ ಕ್ರಿಮಿನಲ್ ಕಾನೂನುಗಳಾದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯ ಬದಲಿ ಕಾನೂನುಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೆಂಗಳೂರಿನಲ್ಲಿ ಮಾತನಾಡಿದ ಡಾ.ಜಿ. ಪರಮೇಶ್ವರ್, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ರಚಿಸಿದ್ದೇವೆ. ಇನ್ನು ಮುಂದೆ ದಾಖಲಾಗುವ ಪ್ರಕರಣಗಳಿಗೆ ನೂತನ ಕಾಯ್ದೆಗಳು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಯಶಸ್ಸಿನ ಬಗ್ಗೆ ಗೊತ್ತಾಗುತ್ತೆ. ಇಂದಿನಿಂದ ಆಚೆಗೆ ಯಾವೆಲ್ಲ ಪ್ರಕರಣಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ನೀಡಿದ್ದೇವೆ.

ಈ ಸುದ್ದಿ ಓದಿದ್ದೀರಾ? ಇಂದಿನಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೆ

ಕಾನ್ಸ್‌ಟೇಬಲ್‌​ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಪ್ರತಿಕ್ರಿಯೆ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದರು.

ಇನ್ನು ಇದೇ ವೇಳೆ ವರ್ಷದಲ್ಲಿ ಮತ್ತೆ ಚುನಾವಣೆ ನಡೆಯಲಿದೆ ಎಂಬ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಸಚಿವ ಪರಮೇಶ್ವರ್ ವಾಗ್ದಾಳಿ ನಡೆಸಿದರು.

ಬೊಮ್ಮಾಯಿ ಒಂದು ಮಾತನಾಡಿದರೆ, ಸಿ.ಟಿ.ರವಿ ಮತ್ತೊಂದು ರೀತಿ ಮಾತನಾಡುತ್ತಾರೆ. ಅವರಲ್ಲೇ ಹೊಂದಾಣಿಕೆ ಇಲ್ಲ. ಬಿಜೆಪಿಯವರು ನಮ್ಮ ಮೇಲೆ ಗೂಬೆ ಕೂರಿಸಬೇಕು. ಹಾಗಾಗಿ ನಮ್ಮ ಬಗ್ಗೆ ಮಾತನಾಡುತ್ತಾರೆ. ನಾವು ಜನಗಳಿಗೆ ಮಾತು ಕೊಟ್ಟಿದ್ದೇವೆ. ನಾವು ಮಾಡಬೇಕಾಗಿರುವ ಅಭಿವೃದ್ಧಿ ಕಾರ್ಯಗಳನ್ನು ನಾವು ಮಾಡುತ್ತಿದ್ದೇವೆ ಎಂದರು.

ವಾಲ್ಮೀಕಿ ನಿಗಮ ಹಗರಣ ಪ್ರಕರಣ​ ಸಂಬಂಧ ಮಾತನಾಡಿದ ಪರಮೇಶ್ವರ್, ವಾಲ್ಮೀಕಿ ಹಗರಣ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ಕೂಡ ತನಿಖೆ ನಡೆಸುತ್ತಿದ್ದಾರೆ. ಎಸ್​ಐಟಿ ಕೂಡ ತನಿಖೆ ಮಾಡುತ್ತಿದ್ದಾರೆ. ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಲ್ಲುವುದಿಲ್ಲ. ತಪ್ಪು ಮಾಡಿದವರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗುತ್ತೆ. ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳು ಯಾರೇ ಇದ್ದರೂ ಶಿಕ್ಷೆಯಾಗಲಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...