ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ, ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ: ಸಿದ್ದರಾಮಯ್ಯ

Date:

  • ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಅಭಿಮಾನಿ
  • ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ಹೈಕಮಾಂಡ್‌ ಹೇಳಿಲ್ಲ ಎಂದ ಸಿದ್ದರಾಮಯ್ಯ


ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ. ಆದರೂ ಸ್ಪರ್ಧೆ ಕುರಿತು ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ನಡುವೆ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಗೊಂದಲದ ಸಮಸ್ಯೆ ಕಾಡುತ್ತಿದ್ದು, ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, “ದೆಹಲಿಯಲ್ಲಿ ಕೋಲಾರ ಮತಕ್ಷೇತ್ರದ ಬಗ್ಗೆ ಚರ್ಚೆಯಾಗಿಲ್ಲ. ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಅವರು ಅಪಾಯ ತೆಗೆದುಕೊಳ್ಳಬೇಡಿ ಎಂದಿದ್ದರು. ಆದರೆ, ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ಹೈಕಮಾಂಡ್ ನನಗೆ ಹೇಳಿಲ್ಲ” ಎಂದು ಸ್ಪಷ್ಟಪಡಿಸಿದರು.

“ಕೋಲಾರದಲ್ಲಿ ನನ್ನನ್ನು ಕಟ್ಟಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಆದ್ದರಿಂದ ಅಪಾಯ ಮೈಮೇಲೆ ಎಳೆದುಕೊಳ್ಳಬೇಡಿ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ” ಎಂದು ತಿಳಿಸಿದರು.

“ರಾಹುಲ್ ಗಾಂಧಿಯಾಗಲಿ, ಮಲ್ಲಿಕಾರ್ಜುನ ಖರ್ಗೆಯಾಗಲಿ ಕೋಲಾರದಲ್ಲಿ ಸ್ಪರ್ಧಿಸಬೇಡಿ ಎಂದು ಹೇಳಿಲ್ಲ. ನಾನು ಸ್ಥಳೀಯ ನಾಯಕರೊಂದಿಗೆ ಮಾತನಾಡಿದ್ದೇನೆ. ಚುನಾವಣಾ ಸ್ಪರ್ಧೆ ವಿಚಾರವನ್ನು ಹೈಕಮಾಂಡ್ ನನಗೆ ಬಿಟ್ಟಿದೆ. ಮನೆಯವರೊಂದಿಗೆ ಮಾತನಾಡಿ ಮುಂದಿನ ನಡೆ ಬಗ್ಗೆ ನಿರ್ಧರಿಸುವೆ” ಎಂದು ಹೇಳಿದರು.

ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರಿಂದ ಒತ್ತಾಯ

ಕೋಲಾರ ಮತಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಅವರು ಎರಡು ತಿಂಗಳ ಹಿಂದಿನಿಂದಲೂ ತಯಾರಿ ಮಾಡಿಕೊಂಡು ಬಂದಿದ್ದರು. ಆದರೆ, ರಾಹುಲ್ ಗಾಂಧಿ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಒಳಿತಲ್ಲ ಎಂದು ಸಲಹೆ ನೀಡಿದ್ದರು.

ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದ ಕುರಿತು ಸಾಕಷ್ಟು ಚರ್ಚೆಗಳಾಗುತ್ತಿದ್ದು, ಕೋಲಾರದಿಂದಲೇ ಸ್ಪರ್ಧಿಸುವಂತೆ ಅಭಿಮಾನಿಗಳು ಅವರ ನಿವಾಸದ ಎದುರು ಧರಣಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅಭಿಮಾನಿಯೊಬ್ಬರು, “ಅವರು ಕೋಲಾರದಿಂದ ಸ್ಪರ್ಧಿಸದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದರು. ಸಾಲದೆಂಬಂತೆ ಮತ್ತೋರ್ವ ಅಭಿಮಾನಿ ಅಂಗಿ ಬಿಚ್ಚಿ ಬಾರಕೋಲಿನಿಂದ ಹೊಡೆದುಕೊಂಡಿದ್ದಾನೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆದಿಲ್ಲ: ಸಿದ್ದರಾಮಯ್ಯ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕಾನೂನುಬಾಹಿರ ನ್ಯಾಯಾಲಯದ ಮೊರೆ...

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ...

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...