- ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಕರ್ನಾಟಕ ಹೈಕೋರ್ಟ್
- ನ್ಯಾ. ಜಿ ನರೇಂದರ್ ಮತ್ತು ಶಿವಶಂಕರ್ ವಿಭಾಗೀಯ ಪೀಠದಿಂದ ಆದೇಶ
ಕಳೆದ ವರ್ಷ ನಡದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಹಾಗೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ 145 ಅಭ್ಯರ್ಥಿಗಳು ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರವು ಪಿಎಸ್ಐ ಮರು ಪರೀಕ್ಷೆ ನಡೆಸಲು ಆದೇಶ ನೀಡಿತ್ತು. ಈ ಆದೇಶವನ್ನು ರದ್ದು ಮಾಡುವಂತೆ ಕೋಲಾರದ ಚಂದನ್ ಎನ್ ವಿ, ವಸಂತ್ ನಾಯಕ್, ಆಶಾ ಸಣಕಲ್ಲ ಮತ್ತು ರಾಜೇಶ್ವರಿ ಸೇರಿದಂತೆ 145 ಮಂದಿ ಪ್ರತ್ಯೇಕವಾಗಿ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? : ಲಂಚ ಪ್ರಕರಣ | ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ
ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಶಿವಶಂಕರ್ ಅಮರಣ್ಣವರ್ ಅವರ ನೇತೃತ್ವದ ವಿಭಾಗೀಯ ಪೀಠವು ಅಭ್ಯರ್ಥಿಗಳ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ, ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆದು ಆಯ್ಕೆಯಾಗಿ, ನ್ಯಾಯಾಲಯದ ಮೆಟ್ಟಿಲೇರಿರುವ 145 ಅಭ್ಯರ್ಥಿಗಳು ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಜೂ. 15ರ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿ, ವಿಚಾರಣೆಯನ್ನು ಮುಂದೂಡಿದೆ.
ಅರ್ಜಿದಾರ ಪರ ಹಿರಿಯ ವಕೀಲ ಡಿ ಆರ್ ರವಿಶಂಕರ್ ಮತ್ತು ರಾಜಗೋಪಾಲ ವಾದ ಮಂಡಿಸಿದರೆ, ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು.