- ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಬಿಗ್ ರಿಲೀಫ್
- ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ ದಾಖಲಾಗಿದ್ದ ದೂರು
ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಇಂದು ಈ ಪ್ರಕರಣಗಳ ವಿಚಾರಣೆ ನಡೆಸಿದ ಹೈ ಕೋರ್ಟ್ ಎಲ್ಲ ಪ್ರಕರಣಗಳನ್ನೂ ರದ್ದು ಮಾಡುವಂತೆ ಆದೇಶಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದರು.
ಈ ಸುದ್ದಿ ಓದಿದ್ದೀರಾ?:ಕರ್ನಾಟಕದ ನೆಮ್ಮದಿಯ ನಾಳೆಗಳಿಗಾಗಿ ಬೇಕಿವೆ ಗ್ಯಾರಂಟಿಗಳು
ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿ ನಿಯಮ ಉಲ್ಲಂಘಿಸಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿದೆ ಎಂದು ಆರೋಪಿಸಿ ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.