ಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್‌ಗೆ ಕೋರ್ಟ್ ತಡೆ

Date:

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿಯನ್ನು ನಡೆಸದಂತೆ, ಮಾನಹಾನಿ ಹೇಳಿಕೆಯನ್ನು ನೀಡದಂತೆ ರಾಜ್ಯ ಹೈಕೋರ್ಟ್‌ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ಗೆ ನಿರ್ಬಂಧ ವಿಧಿಸಿದೆ. ಯಾವುದೇ ಮಾಧ್ಯಮಗಳ ಮೂಲಕ ಮಾನಹಾನಿ ಹೇಳಿಕೆ ಪ್ರಕಟಿಸದಂತೆ ಆದೇಶ ನೀಡಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಕೆಲವು ದಿನಗಳ ಹಿಂದೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಆ ಸಂದರ್ಭದಲ್ಲಿ ಕೋರ್ಟ್‌ ಪ್ರತಾಪ್ ಸಿಂಹ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ತಡೆ ಹೇರಿತ್ತು. ಆದರೆ ಲಕ್ಷ್ಮಣ್‌ ಮೇಲ್ಮನವಿ ಸಲ್ಲಿಸಿದ ನಂತರ ತಡೆಯಾಜ್ಞೆ ತೆಗೆದುಹಾಕಲಾಗಿತ್ತು.

ಈ ತಡೆಯಾಜ್ಞೆಯನ್ನು ಕೋರ್ಟ್ ತೆಗೆದುಹಾಕಿರುವುದನ್ನು ಪ್ರಶ್ನಿಸಿ ಪ್ರತಾಪ್ ಸಿಂಹ ಮಿಸಲೇನಿಯಸ್‌ ಫಸ್ಟ್‌ ಅಪೀಲ್‌ (ಎಂಎಫ್‌ಎ) ಅರ್ಜಿಯನ್ನು ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌ ನಟರಾಜ್‌ ನೇತೃತ್ವದ ಏಕಸದಸ್ಯ ಪೀಠವು ಮತ್ತೆ ತಡೆಯಾಜ್ಞೆಯನ್ನು ವಿಧಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಾಪ್ ಸಿಂಹರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಅರುಣ ಶ್ಯಾಮ್‌, “ಲಕ್ಷ್ಮಣ್‌ ಅವರು ಪ್ರತಾಪ್‌ ಸಿಂಹ ವಿರುದ್ಧ ದೋಷಪೂರಿತ ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ವದಂತಿ ಎಬ್ಬಿಸುವ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ಇದು ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಈ ಆರೋಪಗಳು ಪ್ರತಾಪ್‌ ಘನತೆಗೆ ಧಕ್ಕೆ ಉಂಟು ಮಾಡುತ್ತದೆ, ಮಾನಹಾನಿ ಮಾಡುತ್ತದೆ,” ಎಂದಿ ವಾದಿಸಿದ್ದಾರೆ.

“ದೇಶದಲ್ಲಿ ಎಲ್ಲ ನಾಗರಿಕನಿಗೂ ವಾಕ್‌ ಸ್ವಾತಂತ್ರ್ಯವಿದ್ದು, ಅದನ್ನು ಬಳಸುವಾಗ ಸೂಕ್ತ ದಾಖಲೆಯಿಲ್ಲದೆ ಯಾರ ಘನತೆಗೆ ಹಾನಿ ಉಂಟು ಮಾಡಬಾರದು,” ಎಂದು ಹೇಳಿರುವ ಕೋರ್ಟ್ ಪ್ರತಾಪ್ ಸಿಂಹರ ಮಾನಹಾನಿ ಮಾಡುವುದನ್ನು ನಿಲ್ಲಿಸಬೇಕು ಎಂದು ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಬಜೆಟ್ | ”ಎಕನಾಮಿಕ್ ಸರ್ವೇ”: ಗಾಳಿ ಬಂದತ್ತ ತೂರಿಕೊಳ್ಳುವ ಪ್ಲಾನ್ ಇರಬಹುದೇ?

ಸರ್ಕಾರದ ಈ ವಾರ್ಷಿಕ ವರದಿಗಳೆಲ್ಲ ಪ್ರತ್ಯೇಕವಾಗಿ ತಮ್ಮ ತಮ್ಮ ವಾದಗಳನ್ನು ಬಲವಾಗಿ...

ಅಧಿವೇಶನ | ಮಾಲ್ ಸೇರಿ ಇತರೆಡೆ ಪ್ರವೇಶಕ್ಕೆ ಶೀಘ್ರ ಮಾರ್ಗಸೂಚಿ ಪ್ರಕಟ: ಡಿ ಕೆ ಶಿವಕುಮಾರ್

ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ...

ಲೈಂಗಿಕ ದೌರ್ಜನ್ಯ ಪ್ರಕರಣ | ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೆ...

ಗುಬ್ಬಿ | ದಲಿತರ ಸ್ಮಶಾನ ಭೂಮಿ ವ್ಯಾಪ್ತಿಯ ಅಳತೆ ಕಲ್ಲು ಕಿತ್ತೊಗೆದ ಕಿಡಿಗೇಡಿಗಳು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಡೇನಹಳ್ಳಿ ಗ್ರಾಮಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ...