- ಸೆ.1ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾ. ಎಸ್.ಸುನೀಲ್ ದತ್ ಯಾದವ್
- ವರುಣಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಸಿದ್ಧರಾಮಯ್ಯ
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳು ಆಮಿಷಕ್ಕೆ ಸಮ. ಹಾಗಾಗಿ ಸಿಎಂ ಸಿದ್ದರಾಮಯ್ಯನವರ ಶಾಸಕ ಸ್ಥಾನ ಅನೂರ್ಜಿತಗೊಳಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿ ರಾಜ್ಯ ಹೈಕೋರ್ಟ್ ಸಿಎಂಗೆ ನೋಟಿಸ್ ಜಾರಿ ಮಾಡಿದೆ.
ಶುಕ್ರವಾರ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಸಿಎಂ ಸಿದ್ಧರಾಮಯ್ಯ ಅವರ ಶಾಸಕ ಸ್ಥಾನವನ್ನು ಅನೂರ್ಜಿತ ಮಾಡಬೇಕು. ಚುನಾವಣೆ ವೇಳೆ ಐದು ಗ್ಯಾರಂಟಿಗಳನ್ನು ನೀಡಿ, ಮತದಾರರಿಗೆ ಆಮಿಷ ನೀಡಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಉಡುಪಿ ಪ್ರಕರಣ ಉಲ್ಲೇಖಿಸಿ ಸಿಎಂ ಕುಟುಂಬದ ಅವಹೇಳನ : ಬಿಜೆಪಿ ಕಾರ್ಯಕರ್ತೆ ವಶಕ್ಕೆ
ವರುಣಾ ಕ್ಷೇತ್ರದ ಮತದಾರ ಕೆ.ಎಂ.ಶಂಕರ ಸಲ್ಲಿಸಿದ್ದ ಅರ್ಜಿ ಶುಕ್ರವಾರ ವಿಚಾರಣೆಗೆ ಬಂದಿತ್ತು. ಚುನಾವಣಾ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದ ಹಿನ್ನೆಲೆಯಲ್ಲಿ ಪ್ರಕರಣದ ಪ್ರತಿವಾದಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಜೊತೆಗೆ, ಪ್ರಕರಣವನ್ನು ಸೆ.1ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸುತ್ತಿದ್ದಾರೆ.