ದ್ವೇಷ ಭಾಷಣ, ಅಪರಾಧ ಪುನರಾವರ್ತಿಸಬಾರದು: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

Date:

Advertisements

ದ್ವೇಷ ಭಾಷಣ ಮಾಡಬಾರದು ಮತ್ತು ಈಗಾಗಲೇ ದೂರು ದಾಖಲಾಗಿರುವ ಅಪರಾಧಗಳನ್ನು ಪುನರಾವರ್ತಿಸಬಾರದು ಎಂದು ಹೈಕೋರ್ಟ್‌ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಆದೇಶ ನೀಡಿದೆ.

ಈ ಹಿಂದೆ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಷಣ ಮಾಡಿದ್ದ ಶಾಸಕ ಹರೀಶ್ ಪೂಂಜಾ, “ಕಂತ್ರಿ ಮುಸ್ಲಿಮರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವದಿಂದ ದೂರ ಇಡಬೇಕು. ಹಿಂದೂಗಳ ನಡುವೆ ಏಕತೆ ಇರಬೇಕು. ಮುಸ್ಲೀಮರ ಜೊತೆ ಸೌಹಾರ್ದತೆ ಅಲ್ಲ” ಎಂದು ಕೋಮು ದ್ವೇಷ ಮಾಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆದು ಕೋಮು ಉದ್ವಿಗ್ನತೆ ಉಂಟಾಗಿ, ಸೆಕ್ಷನ್ ಜಾರಿಯಲ್ಲಿದ್ದಾಗಲೇ ಈ ಕೋಮು ಭಾಷಣವನ್ನು ಹರೀಶ್ ಪೂಂಜಾ ಮಾಡಿದ್ದರು.

ಇದನ್ನು ಓದಿದ್ದೀರಾ? ಬೆಳ್ತಂಗಡಿ | ದಿನವಿಡೀ ಹೈಡ್ರಾಮಾದ ಬಳಿಕ ಪೊಲೀಸರಿಗೆ ಶರಣಾದ ಬಿಜೆಪಿ ಶಾಸಕ ಹರೀಶ್ ಪೂಂಜಾ

ಈ ಹಿನ್ನೆಲೆ ಕೋಮುಗಲಭೆಗಳಿಗೆ ಪ್ರಚೋದನೆ ನೀಡುವ ಭಾಷಣ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಇಬ್ರಾಹಿಂ ಎಂಬವರು ನೀಡಿದ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಎಫ್‌ಐಆರ್ ದಾಖಲಾದ ಬಳಿಕ “ನಾನು ಯಾವ ನ್ಯಾಯಾಲಯಕ್ಕೂ ಹೆದರುವುದಿಲ್ಲ” ಎಂದು ಹೇಳಿಕೊಂಡಿದ್ದ ಹರೀಶ್ ಪೂಂಜಾ ಮೇ 04ರಂದು ಎಫ್ಐಆರ್ ರದ್ದುಕೋರಿ ಮತ್ತು ಪ್ರಕರಣಕ್ಕೆ ತಕ್ಷಣ ತಡೆಯಾಜ್ಞೆ ನೀಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೇ 22ರಂದು ಪ್ರಕರಣಕ್ಕೆ ತಡೆಯಾಜ್ಞೆ ನೀಡಿತ್ತು.

ಈ ಎಫ್ಐಆರ್‌ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ದೂರುದಾರು ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು‌. ಈ ಅರ್ಜಿ ವಿಚಾರಣೆಯನ್ನು ಇಂದು(ಜುಲೈ 11) ಕೈಗೆತ್ತಿಕೊಂಡಿದೆ.

ಸರ್ಕಾರದ ಪರ ವಕೀಲರು(HCGP) ಮತ್ತು ಹರೀಶ್ ಪೂಂಜಾ ಪರ ವಕೀಲರು ಸಮಯಾವಕಾಶ ಕೇಳಿದರು. ಆದರೆ ಇಬ್ರಾಹಿಂ ಪರ ವಕೀಲ ಎಸ್ ಬಾಲನ್ ಅವರು ಸಮಯಾವಕಾಶ ನೀಡುವುದನ್ನು ವಿರೋಧಿಸಿ ವಾದ ಪ್ರಾರಂಭಿಸಿದರು.

“ಹರೀಶ್ ಪೂಂಜಾ ವಿರುದ್ದ ದಾಖಲಾಗಿರುವ ಎಫ್ಐಆರ್‌ಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸದಿದ್ದರೆ ಅಪರಾಧವನ್ನು ಪುನರಾವರ್ತಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆ ಸೃಷ್ಟಿಸಿ ಹೈಕೋರ್ಟ್‌ ಲ್ಲಿ ತಡೆಯಾಜ್ಞೆ ಪಡೆಯುತ್ತಾರೆ. ಇದು ಸರಿಯಾದ ಕ್ರಮವಲ್ಲ” ಎಂದು ಹಿರಿಯ ವಕೀಲ ಎಸ್ ಬಾಲನ್ ವಾದಿಸಿದರು.

“ಈ ರೀತಿಯ ದ್ವೇಷ ಭಾಷಣಗಳಿಂದ ಜನರು ಸಮೂಹ ಸನ್ನಿಗೆ ಒಳಗಾಗಿ ಮಾಬ್ ಲಿಂಚಿಂಗ್‌ನಲ್ಲಿ ತೊಡಗುತ್ತಾರೆ. ಮಂಗಳೂರಿನ ಮಾಬ್ ಲಿಂಚಿಂಗ್‌ನಿಂದ ಒಂದು ಹತ್ಯೆಯಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಮೂರು ಕೊಲೆಗಳಾಗಿವೆ. ಅಪರಾಧೀಕರಣ ಸಮುದಾಯ ದ್ವೇಷ ಹರಡಲು ತಡೆಯಾಜ್ಞೆ ಆದೇಶಗಳು ಬಳಕೆಯಾಗುತ್ತಿದೆ” ಎಂದು ಎಸ್ ಬಾಲನ್ ವಾದ ಮಂಡಿಸಿದರು.

ಇದನ್ನು ಓದಿದ್ದೀರಾ? ಅರಣ್ಯಾಧಿಕಾರಿಯನ್ನು ಅವಮಾನಿಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಕುಮಾರ್ ಆಗಸ್ಟ್ 7ರವರೆಗೆ ತಡೆಯಾಜ್ಞೆ ಮುಂದುವರೆಸಿ “ಅರ್ಜಿದಾರ ಹರೀಶ್ ಪೂಂಜಾ ಯಾವುದೇ ದ್ವೇಷ ಭಾಷಣ, ಈಗಾಗಲೇ ಆತನ ವಿರುದ್ದ ದಾಖಲಾಗಿರುವ ಅಪರಾಧಿಕ ಸೆಕ್ಷನ್‌ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ” ಎಂದು ಆದೇಶ ನೀಡಿದ್ದಾರೆ‌.

ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಮಸೀದಿ ಅಧ್ಯಕ್ಷ ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ‘ವೆಕೇಟಿಂಗ್ ಸ್ಟೇ’ ಅರ್ಜಿಯನ್ನು ಸಲ್ಲಿಸಿದ್ದರು. ಹರೀಶ್ ಪೂಂಜಾ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಠಾಣೆಯಲ್ಲಿ ಕ್ರೈಂ ನಂ 39/2023(IPC 153, 153-A, 505(1)(3)(c), 505(2), ಧರ್ಮಸ್ಥಳ ಠಾಣೆಯಲ್ಲಿ ಕ್ರೈಂ ನಂ 57/2024 (IPC 504, 353), ಬೆಳ್ತಂಗಡಿ ಠಾಣೆಯಲ್ಲಿ ಕ್ರೈಂ ನಂ 58/2024(IPC 143, 147, 341, 504, 506 r/w 149), ಬಜ್ಪೆ ಠಾಣೆಯಲ್ಲಿ ಕ್ರೈಂ ನಂ 239/2016 (IPC 143, 147, 290, 160, 504 r/w 149), ಬಂಟ್ವಾಳ ಠಾಣೆಯಲ್ಲಿ ಕ್ರೈಂ ನಂ 117/2017(IPC 142, 143, 188 r/w 149), ಧರ್ಮಸ್ಥಳ ಠಾಣೆಯಲ್ಲಿ ಕ್ರೈಂ ನಂ 77/2023(IPC 143, 353, 504 r/w 149), ಬೆಳ್ತಂಗಡಿ ಠಾಣೆಯಲ್ಲಿ ಕ್ರೈಂ ನಂ 105/2023 (IPC 504, 505(2) ಎಫ್ಐಆರ್‌ಗಳು ದಾಖಲಾಗಿದೆ.

ಹೀಗಿದ್ದರೂ ಪುನರಾವರ್ತಿತ ಅಪರಾಧ ಮಾಡುವ ಹರೀಶ್ ಪೂಂಜಾ ತಡೆಯಾಜ್ಞೆಯ ಅವಕಾಶಕ್ಕೆ ಅನರ್ಹರಾಗಿದ್ದು, ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಎಸ್ ಬಾಲನ್ ವಾದಿಸಿದ್ದಾರೆ. ಆದರೆ, ತಡೆಯಾಜ್ಞೆ ಮುಂದುವರೆಸಿರುವ ಹೈಕೋರ್ಟ್ ಬೆಳ್ತಂಗಡಿ ಶಾಸಕರಿಗೆ ಷರತ್ತುಗಳನ್ನು ವಿಧಿಸಿದೆ.

ಇಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಯಾವುದೇ ದ್ವೇಷ ಭಾಷಣ, ಈಗಾಗಲೇ ಆತನ ವಿರುದ್ದ ದಾಖಲಾಗಿರುವ ಅಪರಾಧಿಕ ಸೆಕ್ಷನ್‌ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ತಾಕೀತು ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X