ಪ್ರಾಣಿವಸ್ತುಗಳನ್ನು ರಾಜ್ಯ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Date:

ಹುಲಿ‌ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಕಳೆದ ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿಗಳ, ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಿ ಪ್ರಮಾಣ ಪತ್ರ ಪಡೆಯಲು ಅಧಿಸೂಚನೆ ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಧಿಸೂಚನೆಯ ಅಧಿನಿಯಮಗಳ ವಿರುದ್ಧ  ರಂಜಿ ಪೂನಚ್ಚ ಮತ್ತು  ಕುಟ್ಟಪ್ಪ ರವರು ಹೈಕೋರ್ಟ್‌ನಲ್ಲಿ ದಾವೆಯನ್ನು ಹೂಡಿದ್ದರು. ವಿಚಾರಣೆ ನಡೆಸಿದ ಮಾನ್ಯ ಉಚ್ಚನ್ಯಾಯಾಲಯವು ಅಧಿಸೂಚನೆಯ ಅಧಿನಿಯಮಗಳಿಗೆ ಮಧ್ಯಾಂತರ ಆದೇಶದಲ್ಲಿ ತಡೆಯಾಜ್ಞೆಯನ್ನು ನೀಡಿ ಆದೇಶಿಸಲಾಗಿದೆ.

ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ ಎಸ್ ಪೊನ್ನಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ

ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...