ಹೈಕೋರ್ಟ್‌ ತರಾಟೆ: ಕೇಂದ್ರ ಸರ್ಕಾರದಿಂದ ಕೇಜ್ರಿವಾಲ್‌ಗೆ ಸರ್ಕಾರಿ ಬಂಗಲೆ ಮಂಜೂರು

Date:

ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಕೇಜ್ರಿವಾಲ್ ಅವರಿಗೆ ಸರ್ಕಾರಿ ಬಂಗಲೆ ನೀಡದ ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಹೈಕೋರ್ಟ್‌ ಛಾಟಿಗೆ ಮಣಿದ ಕೇಂದ್ರ ಸರ್ಕಾರವು ಇದೀಗ, ಕೇಜ್ರಿವಾಲ್ ಅವರಿಗೆ ಸರ್ಕಾರಿ ಬಂಗಲೆಯನ್ನು ಮಂಜೂರು ಮಾಡಿದೆ.

- Advertisement -

ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರಿ ಬಂಗಲೆಯನ್ನು ತೊರೆದು ಒಂದು ವರ್ಷಕ್ಕಿಂತ ಹೆಚ್ಚು ಕಾಲವಾಗಿದೆ. ರಾಷ್ಟ್ರೀಯ ಪಕ್ಷದ ಸಂಚಾಲಕರಾಗಿರುವ ತಮಗೆ ಸರ್ಕಾರಿ ಬಂಗಲೆ ಒದಗಿಸಿಲ್ಲವೆಂದು ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಎಸ್ಟೇಟ್‌ ನಿರ್ದೇಶನಾಲಯದ ವಿರುದ್ಧ ಕೇಜ್ರಿವಾಲ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ‘ಎಸ್ಟೇಟ್ ನಿರ್ದೇಶನಾಲಯದ 2014ರ ನೀತಿಯ ಪ್ರಕಾರ, ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರು ಅಥವಾ ಸಂಚಾಲಕರು ಸರ್ಕಾರಿ ವಸತಿ ಸೌಕರ್ಯಕ್ಕೆ ಅರ್ಹರಾಗಿರುತ್ತಾರೆ’ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅವರ ಅರ್ಜಿಯ ವಿಚಾರಣೆ ಆಲಿಸಿರುವ ಹೈಕೋರ್ಟ್‌, ದೆಹಲಿಯಲ್ಲಿ ಸರ್ಕಾರಿ ವಸತಿಗೆ ಯಾರು ಅರ್ಹರು ಎಂಬುದನ್ನು ಕೇಂದ್ರವು ಆಯ್ದು ನಿರ್ಧರಿಸಲು ಸಾಧ್ಯವಿಲ್ಲ. ರಾಷ್ಟ್ರೀಯ ಪಕ್ಷದ ಸಂಚಾಲಕರಾಗಿ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸ ಮಾಡಲು ಅರ್ಹರಾಗಿದ್ದಾರೆ. ಅವರಿಗೆ ಸರ್ಕಾರಿ ಬಂಗಲೆ ಒದಗಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿತ್ತು.

ಅದರಂತೆ, ಕೇಜ್ರಿವಾಲ್ ಅವರಿಗೆ ದೆಹಲಿಯ ಲೋಧಿ ಎಸ್ಟೇಟ್‌ನಲ್ಲಿ ಟೈಪ್-7 ಬಂಗಲೆಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು Indian Express ವರದಿ ಮಾಡಿದೆ.

2014ರಲ್ಲಿ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವೇ, ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರಿಗೆ ದೆಹಲಿಯಲ್ಲಿ ಸರ್ಕಾರಿ ನಿವಾಸ ಒದಗಿಸುವ ನೀತಿಯನ್ನು ರೂಪಿಸಿತ್ತು. 2014ರ ಜುಲೈ 31ರಂದು ಎಸ್ಟೇಟ್ ನಿರ್ದೇಶನಾಲಯವು (Directorate of Estates – DoE) ಆಫೀಸ್ ಮೆಮೊರಂಡಮ್ (OM)ಅನ್ನು ಜಾರಿಗೊಳಿಸಿತ್ತು. ಅದರಲ್ಲಿ, ಚುನಾವಣಾ ಆಯೋಗದಿಂದ ಗುರುತಿಸಲ್ಪಟ್ಟ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಅಥವಾ ಸಂಚಾಲಕರಿಗೆ ದೆಹಲಿಯಲ್ಲಿ ಸರ್ಕಾರಿ ನಿವಾಸವನ್ನು ನೀಡಬಹುದು ಎಂದು ನಿಯಮ ರೂಪಿಸಿತ್ತು.

2014ರಲ್ಲಿ ಅಮಿತ್ ಶಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ಅವರು ಆಗ, ಕೇಂದ್ರ ಸರ್ಕಾರದ ಯಾವುದೇ ಹುದ್ದೆ (ಸಚಿವ) ಹೊಂದಿರಲಿಲ್ಲ. ಹೀಗಾಗಿ, ಅವರಿಗೆ ದೆಹಲಿಯಲ್ಲಿ ಸರ್ಕಾರಿ ನಿವಾಸ ಒದಗಿಸುವ ಉದ್ದೇಶದಿಂದಲೂ ಈ ನಿಯಮವನ್ನು ಜಾರಿಗೆ ತರಲಾಗಿತ್ತು ಎಂಬ ಆರೋಪಗಳೂ ಇವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...