ಮಂಗನ ಕಾಯಿಲೆ | ಮರಣ ಪ್ರಮಾಣ ತಗ್ಗಿಸಲು ಡಿಹೆಚ್‌ಒಗಳಿಗೆ ಹೆಚ್ಚಿನ ಹೊಣೆ: ಸಚಿವ ಗುಂಡೂರಾವ್

Date:

  • ಮಲೆನಾಡು ಭಾಗದ ಶಾಸಕರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಭೆ
  • ಕೆಎಫ್.ಡಿ ಟೆಸ್ಟಿಂಗ್ ನಲ್ಲಿ ವಿಳಂಬ ಆಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ

ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಮಹತ್ವದ ಸಭೆ ನಡೆಸಿದರು.

ಬಳಿಕ ಮಾಹಿತಿ ನೀಡಿದ ಸಚಿವರು, “ಈಗಾಗಲೇ ಮಂಗನ ಕಾಯಿಲೆಯಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಮರಣ ಪ್ರಮಾಣ ತಗ್ಗಿಸಲು ಆಯಾ ಜಿಲ್ಲೆಗಳ ಡಿಹೆಚ್‌ಒಗಳಿಗೆ ಹೆಚ್ಚಿನ ಹೊಣೆ ನೀಡಲಾಗಿದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಸದ್ಯ 103 ಮಂಗನ ಕಾಯಿಲೆ ಪ್ರಕರಣಗಳು ಸಕ್ರಿಯವಾಗಿದ್ದು ಪಾಸಿಟಿವ್‌ ಪ್ರಕರಣಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಕೆಎಫ್‌ಡಿ ಪರೀಕ್ಷೆ, ಪಾಸಿಟಿವ್‌, ಮರಣ, ಡಿಸ್ಚಾರ್ಜ್‌ ಕುರಿತಾಗಿ ದೈನಂದಿನ ಬುಲೆಟಿನ್‌ ಹೊರಗಿಸಲಾಗುತ್ತಿದೆ. ಶಿವಮೊಗ್ಗ ಮತ್ತು ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು KFD ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ” ಎಂದು ಆರೋಗ್ಯ ಸಚಿವರು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳೆದ ಒಂದು ತಿಂಗಳಿನಿಂದ ಮಂಗನ ಕಾಯಿಲೆಗೆ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ಎರಡು ತಿಂಗಳಿಗಾಗುವಷ್ಟು ಲಸಿಕೆ ಲಭ್ಯವಿದೆ. ಶಿರಸಿ ಹಾಗೂ ಸಾಗರದಲ್ಲಿ ಮಂಗನ ಕಾಯಿಲೆ ಪತ್ತೆಹಚ್ಚಲು ಹೊಸ ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡುವ ಬಗ್ಗೆ ಯೋಚನೆ ಮಾಡಲಾಗಿದೆ. ಮಂಗನ ಕಾಯಿಲೆಗೆ ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ಐಸಿಎಂಆರ್ ಜೊತೆ ಮಾತುಕತೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಲಸಿಕೆ ಲಭ್ಯವಾಗಲಿದೆ” ಎಂದು ತಿಳಿಸಿದರು.

“ಮಂಗನ ಕಾಯಿಲೆಯ ತ್ವರಿತ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ಗಳ ಹೆಚ್ಚಳ ಬಗ್ಗೆ ನಿರ್ಧರಿಸಲಾಗಿದೆ. ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಯೋಗದಲ್ಲಿ ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರ ಮೂಲಕ ಮಂಗನ ಕಾಯಿಲೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ತಿಳಿಸಿದರು.

ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರು, ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಆಲಿಸಿದರು.

ಮಂಗನ ಕಾಯಿಲೆಯ ರೋಗಲಕ್ಷಣಗಳು ಕಂಡುಬಂದ ತಕ್ಷಣ ಟೆಸ್ಟಿಂಗ್ ಶೀಘ್ರಗತಿಯಲ್ಲಿ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ, ಕೆಎಫ್.ಡಿ ಪಾಸಿಟಿವ್ ಬಂದವರನ್ನ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.‌ ಶಿರಸಿಯಲ್ಲಿ ಕೆಎಫ್.ಡಿ ಟೆಸ್ಟಿಂಗ್‌ಗೆ ಪ್ರಯೋಗಾಲಯ ಸ್ಥಾಪನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಇದನ್ನು ಓದಿದ್ದೀರಾ? ಸಿಎಂ ಜನಸ್ಪಂದನ 2.0 | 11 ದಿನದಲ್ಲಿ 14,685 ಅರ್ಜಿಗಳ ಪೈಕಿ 4,321 ಅರ್ಜಿ ವಿಲೇವಾರಿ ಯಶಸ್ವಿ: ಎಲ್ ಕೆ ಅತೀಕ್‌

ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಮಂಕಾಳ್ ಎಸ್‌. ವೈದ್ಯ, ಶಾಸಕರಾದ ಆರಗ ಜ್ಞಾನೇಂದ್ರ, ಹೆಚ್‌.ಡಿ.ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ನಯನಾ ಮೋಟಮ್ಮ ಸೇರಿದಂತೆ ಜನಪ್ರತಿನಿಧಿಗಳು, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್‌ ಪ್ರಕರಣ | ಮಹಿಳಾ ದೌರ್ಜನ್ಯದ ಮೂಲ ಅಪರಾಧವನ್ನೇ ಬಿಜೆಪಿ ಮರೆಮಾಚುತ್ತಿದೆ: ಕಾಂಗ್ರೆಸ್‌ ವಾಗ್ದಾಳಿ

ಪೆನ್‌ಡ್ರೈವ್ ಪ್ರಕರಣದ ಕೇಂದ್ರ ಬಿಂದು, ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ...

ಬೆಂಗಳೂರು | ಕೆಎಎಸ್‌ ಅಧಿಕಾರಿಯ ಪತ್ನಿ ಅನುಮಾನಾಸ್ಪದ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕೆಎಎಸ್‌...

ಬಿಜೆಪಿ ಗೆದ್ದರೆ, 2 ತಿಂಗಳಲ್ಲಿ ಯುಪಿ ಸಿಎಂ ಯೋಗಿ ರಾಜಕಾರಣವೂ ಅಂತ್ಯ: ಕೇಜ್ರಿವಾಲ್

"ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲದೆ ತಮ್ಮದೇ ಪಕ್ಷದ ನಾಯಕರನ್ನು ಜೈಲಿಗೆ...

ಪ್ರಜ್ವಲ್‌ ಪ್ರಕರಣ | ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್‌ಗಾಗಿ ಎಚ್‌ಡಿಕೆ ಸಿಬಿಐ ಜಪ: ಸಚಿವ ಎಂ ಬಿ ಪಾಟೀಲ್‌ ಕಿಡಿ

ಪ್ರಜ್ವಲ್ ರೇವಣ್ಣನ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ...