ವೈಟ್ ಟ್ಯಾಪಿಂಗ್‌ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿ ಕೆ ಶಿವಕುಮಾರ್

Date:

“ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಹೆಚ್ ಎಸ್ ಗೋಪಿನಾಥ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳು ಇವೆ. ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ. ನಗರದಲ್ಲಿ ನಿತ್ಯ ಸರಾಸರಿ 1300 ದ್ವಿಚಕ್ರ ವಾಹನಗಳು ಹಾಗೂ 490 ಕಾರುಗಳು ನೋಂದಣಿಯಾಗುತ್ತಿವೆ. ವಾಹನಗಳ ಒತ್ತಡದಿಂದ ರಸ್ತೆಗಳು ಹಾಳಾಗುತ್ತಿದ್ದು, ರಸ್ತೆಗುಂಡಿ ಮುಚ್ಚುವುದೇ ದೊಡ್ಡ ಕೆಲಸವಾಗಿದೆ. ಹೀಗಾಗಿ ರಸ್ತೆಗುಂಡಿ ಮುಚ್ಚುವ ಕೆಲಸವನ್ನು ವಿಕೇಂದ್ರೀಕರಣ ಮಾಡಲಾಗಿದೆ. ಸಾರ್ವಜನಿಕರು ಅಥವಾ ಪೊಲೀಸ್ ಸಿಬ್ಬಂದಿ ಫೋಟೋ ತೆಗೆದು ಕಳುಹಿಸುವ ಗುಂಡಿಗಳನ್ನು ಪಾಲಿಕೆ ಅಧಿಕಾರಿಗಳು ಮುಚ್ಚಿಸುತ್ತಿದ್ದಾರೆ” ಎಂದರು.

“ವೈಟ್ ಟಾಪಿಂಗ್‌ಗೆ 1000 ಕೋಟಿ ಅನುದಾನವಿದ್ದು, ಮುಖ್ಯರಸ್ತೆಗಳಲ್ಲದೆ ಬೇರೆ ರಸ್ತೆಗಳನ್ನು ಮಾಡಬೇಕೆಂಬ ಬೇಡಿಕೆ ಇದೆ. ಬೆಂಗಳೂರಿನಲ್ಲಿ ಕೇಬಲ್‌ಗಳ ಹಾವಳಿ ಹೆಚ್ಚಾಗಿದೆ. ಇದಕ್ಕಾಗಿ ರಸ್ತೆ ಅಗೆಯಲಾಗುತ್ತಿದೆ. ಹೀಗಾಗಿ ಯೋಜಿತ ರೂಪದಲ್ಲಿ ವೈಟ್ ಟ್ಯಾಪಿಂಗ್ ಕೆಲಸ ಮಾಡಬೇಕಿದೆ” ಎಂದು ವಿವರಿಸಿದರು.

ಬೆಂಗಳೂರಿನ ಸ್ವಚ್ಛತೆ, ಮೂಲಭೂತ ಸೌಕರ್ಯ ಅಭಿವೃದ್ಧಿ, ಅಪರಾಧ ತಡೆ ಹಾಗೂ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಘನತೆ ಉಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಭಾರತಿ ಶೆಟ್ಟಿ ಅವರು ಕೇಳಿದ ಪ್ರಶ್ನೆಗೆ, “ನಾನು ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 60 ಲಕ್ಷ ಇತ್ತು. ಈಗ 1.40 ಕೋಟಿ ಆಗಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಕುಡಿಯುವ ನೀರು ಪೂರೈಕೆ. ಘನತ್ಯಾಜ್ಯ ವಿಲೇವಾರಿ ದೊಡ್ಡ ಸವಾಲು. ಕಸ ತೆಗೆಯುವುದೇ ದೊಡ್ಡ ಸಮಸ್ಯೆ, ದಂಧೆ ಆಗಿದೆ. ಕಸ ವಿಲೇವಾರಿಗೆ ಬೇರೆ ರಾಜ್ಯಗಳಲ್ಲಿ ಅಳವಡಿಸಿರುವ ವ್ಯವಸ್ಥೆಗಳನ್ನು ಅಧ್ಯಯನ ಮಾಡಲಾಗುತ್ತಿದೆ. ದೆಹಲಿ, ಹೈದರಾಬಾದ್ ನಲ್ಲಿ ಅಧ್ಯಯನ ಮಾಡಲಾಗಿದೆ. ಇಂಧೋರ್ ಗೆ ತೆರಳಬೇಕಿದೆ. ಈ ಬಗ್ಗೆ ಎಲ್ಲಾ ಪಕ್ಷದ ನಾಯಕರು ಹಾಗೂ ಸಾರ್ವಜನಿಕರ ಸಲಹೆ ಪಡೆದಿದ್ದೇನೆ” ಎಂದರು.

“ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ಸಾರ್ವಜನಿಕರಿಂದ 70 ಸಾವಿರ ಸಲಹೆ ಸಂಗ್ರಹವಾಗಿದೆ. ಆರೋಗ್ಯ, ಕುಡಿಯುವ ನೀರು, ತಂತ್ರಜ್ಞಾನ, ಪರಿಸರ ಕ್ಷೇತ್ರಗಳಾಗಿ ವಿಭಜನೆ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ಬೆಂಗಳೂರು ಎಲ್ಲರ ನೆಚ್ಚಿನ ನಗರ. ಬೆಂಗಳೂರಿನ ಆದಾಯ ಹಳ್ಳಿಗಳ ಅಭಿವೃದ್ಧಿಗೆ ನೆರವಾಗುತ್ತಿದೆ. ದೇಶದ ರಫ್ತು ಆದಾಯದಲ್ಲಿ 39 % ರಷ್ಟು ಬೆಂಗಳೂರಿನಿಂದ ಸಂಗ್ರಹವಾಗುತ್ತಿದೆ. ಹೀಗಾಗಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ” ಎಂದು ವಿವರಿಸಿದರು.

ಬಿಡಿಎ ಸ್ವತ್ತು ವ್ಯಾಜ್ಯಗಳಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಖಾಸಗಿ ವ್ಯಕ್ತಿಗಳ ಪರ ತೀರ್ಪು ಬರುತ್ತಿರುವುದರ ಬಗ್ಗೆ ಮರಿತಿಬ್ಬೇಗೌಡರ ಪ್ರಶ್ನೆಗೆ ಉತ್ತರಿಸಿ, “ನಾನು ಮರಿತಿಬ್ಬೇಗೌಡರ ವಾದ ಒಪ್ಪುತ್ತೇನೆ. ಅಲ್ಲಿ ದೊಡ್ಡ ಮಾಫಿಯಾ ಇದೆ. ಯಾವುದೇ ಹೊಣೆಗಾರಿಕೆ ಇಲ್ಲವಾಗಿದೆ. ಈ ಹಿಂದಿನ ಸರ್ಕಾರಗಳು ಅಡ್ವೊಕೇಟ್ ಗಳನ್ನು ನೇಮಕ ಮಾಡಿದರೂ ಶೇ.90 ರಷ್ಟು ತೀರ್ಪು ಖಾಸಗಿಯವರ ಪರವಾಗಿವೆ. ಇತ್ತೀಚೆಗೆ ಸಚಿವ ಹೆಚ್.ಕೆ. ಪಾಟೀಲರು ರಾಜ್ಯದ ಅಡ್ವೊಕೇಟ್ ಗಳ ಜತೆ ಚರ್ಚೆ ಮಾಡಿದ್ದಾರೆ. ಬಿಡಿಎ ಹಾಗೂ ಪಾಲಿಕೆ ವಿಚಾರದಲ್ಲಿ ಮುಂದಿನ ಶನಿವಾರ ಅಡ್ವೊಕೇಟ್ ಗಳ ಸಭೆ ನಿಗದಿ ಮಾಡಿದ್ದು, ಯಾರು ಎಷ್ಟು ಕೇಸ್ ವಾದ ಮಾಡಿದ್ದಾರೆ, ಎಷ್ಟು ಕೇಸ್ ಗೆದ್ದಿದ್ದಾರೆ, ಮುಂದೆ ಅವರ ಕಾರ್ಯಯೋಜನೆ ಏನು ಎಂದು ಪರಿಶೀಲನೆ ಮಾಡಲಾಗುವುದು. ನಾವು ಏಕಾಏಕಿ ಒಂದೇ ದಿನ ತೆಗೆದುಹಾಕುವುದಿಲ್ಲ. ಸದಸ್ಯರು ಹೇಳಿದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಬಿಡಿಎ ಆಸ್ತಿ ಕುರಿತ ಪ್ರಕರಣಗಳ ಪರಿಶೀಲನೆಗೆ ಪ್ರತ್ಯೇಕ ವಿಭಾಗ ರೂಪಿಸಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಅಡ್ವೊಕೇಟ್ ಗಳಿಗೆ ಹೊಣೆಗಾರಿಕೆ ನಿಗದಿ ಮಾಡುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...