ರಾಜ್ಯದಲ್ಲಿ ಮತ್ತೆ ಸುದ್ದಿಯಲ್ಲಿರುವ ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, “ರಾಜ್ಯದೆಲ್ಲೆಡೆ ಹಿಜಾಬ್ ನಿಷೇಧಿಸಿಲ್ಲ. ರಾಜಕೀಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಈ ಪ್ರಸ್ತಾಪ ಮಾಡಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, “ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಎಲ್ಲಿ ಬೇಕು ಅಲ್ಲಿ ಹಾಕಿಕೊಂಡು ಓಡಾಡುತ್ತಿದ್ದಾರೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಆದರೆ ರಾಜಕೀಯ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ” ಎಂದು ಬೊಮ್ಮಾಯಿ ಹೇಳಿದರು.
“1984ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅಡಿ ಡ್ರೆಸ್ ಕೋಡ್ ಮಾಡಲಾಗಿದೆ. ಅದನ್ನು ಹಿಂದೆ ಪಡೆಯುವ ಮಾತನಾಡಿದ್ದಾರೆ. ಈಗಾಗಲೇ ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದ್ದರು” ಎಂದರು.
ಇದನ್ನು ಓದಿದ್ದೀರಾ? ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಮತ್ತೆ ಹಠ ಹಿಡಿಯಲಿದ್ದಾರೆ: ಚಕ್ರವರ್ತಿ ಸೂಲಿಬೆಲೆ
“ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಇದರಲ್ಲಿ ಇದೆ. ಭವಿಷ್ಯದಲ್ಲಿ ಇದು ದೊಡ್ಡ ಮಟ್ಟದ ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ತಾವು ಯಾವ ಧರ್ಮಕ್ಕೆ ಸೇರಿದ್ದೇವೆ ಎಂದು ವಿಷ ಬೀಜ ಬಿತ್ತುವ ಪ್ರಯತ್ನ ನಡೆಯುತ್ತಿದೆ. ಹಿಜಾಬ್ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್-ಇರಾನ್‌ನಲ್ಲಿ ಮಹಿಳೆಯರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುತ್ತಾರೆ. ಸುಪ್ರಿಂ ಕೋರ್ಟ್ ನಲ್ಲಿ ಪ್ರಕರಣ ಇದ್ದಾಗ ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು? ಕೋರ್ಟ್ ಈ ಬಗ್ಗೆ ಕೂಡ ಗಮನ ಹರಿಸುತ್ತದೆ ಎನ್ನುವ ವಿಶ್ವಾಸ ಇದೆ” ಎಂದು ಮಾಜಿ ಸಿಎಂ ಹೇಳಿದರು.
ಇದನ್ನು ಓದಿದ್ದೀರಾ? ಹಿಜಾಬ್ ನಿಷೇಧ ವಾಪಸ್ ವಿಚಾರ: ಸರ್ಕಾರದ ಮಟ್ಟದಲ್ಲಿ ಚರ್ಚೆ; ಮುಖ್ಯಮಂತ್ರಿ ಸಿದ್ದರಾಮಯ್ಯ
“ಅಭಿವೃದ್ಧಿಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೇ ಇದನ್ನು ಬಹಿರಂಗವಾಗಿ ಹೇಳಿದ್ದಾರೆ. ಪತ್ರ ಕೂಡ ಬರೆದಿದ್ದಾರೆ. ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಇಳಿದಿದೆ. ಬರ ಇರುವ ನಡುವೆ ಕೂಡ ಅದನ್ನೆಲ್ಲ ಮರೆತು ರಾಜ್ಯದ ಜನರ ದಾರಿ ತಪ್ಪಿಸಲು ಸಿಎಂ ಸಿದ್ದರಾಮಯಯ್ಯ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಐಟಿ ದಾಳಿ ಆಗಿ ಕಾಂಟ್ರಾಕ್ಟರ್ ಬಳಿ ಕೋಟ್ಯಂತರ ರೂ ಹಣ ಸಿಕ್ಕಿತ್ತು. ಆಗಲೂ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡಿದರು. ಯಾವುದೇ ಅಭಿವೃದ್ದಿ ಮಾಡದ ಸರ್ಕಾರ ರಾಜ್ಯದಲ್ಲಿ ಬಂದಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮಾಜಿಗಳೆ ತಮ್ಮ ಅಧಿಕಾರಾವಧಿಯಲ್ಲಿ ಹಿಜಾಬ್ ಹಲಾಲ್ ಜಟಕಾ,, ಇಂಥಾ ಹಲವು ಸಾಮಾಜಿಕ ಸೌಹಾರ್ದ ಹಾಳುಗೆಡುವ ಅವಿವೇಕದ ಸಾಕಷ್ಟು ಪ್ರಕರಣಗಳು ನಡೆದವು,,ಯಾವ ಕ್ರಮ ಕೈಗೊಂಡಿದ್ರಿ,,, ನಿಮಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇತ್ತಾ,??
ಬೆಲೆಯೇರಿಕೆ ನಿರುದ್ಯೋಗ ನಿಜವಾದ ಸಮಸ್ಯೆಗಳನ್ನು ಮರೆಮಾಚಲು ಏನೆಲ್ಲಾ ನಾಟಕಗಳು ನಡೆದವು,, ಆದರೆ ಜನರಿಗೆ ತಲೆಚಿಟ್ಟು ಹಿಡಿದಿತ್ತು,, ನಿಮ್ಮ ಕೇಂದ್ರದ ಚುನಾವಣೆ ಸುಳ್ಳು ಭಾಷಣಕ್ಕ ಹೆಸರಾದವರು ಎಲ್ಲಿ ರೋಡ್ ಶೋ ಮಾಡಿದರು,, ಅಲ್ಲೆಲ್ಲಾ ಜನರು ನಿಮ್ಮನ್ನು ತಿರಸ್ಕರಿಸಿದರು,,, ಅಧಿಕಾರಾವಧಿಯಲ್ಲಿ ಆದ ಲೋಪಗಳನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡು ಜನರಿಗೆ ಸತ್ಯ ಹೇಳದೇ ಹೋದರೆ ಯಾವುದೇ ರಾಜಕಾರಣಿಗೆ ಅಂದೊಂದು ಆತ್ಮ ದ್ರೋಹ ಅಲ್ಲದೆ ಬೇರೇನೂ ಅಲ್ಲ