ಧರ್ಮಸ್ಥಳಕ್ಕೆ ಪಾದಯಾತ್ರೆ | ಪ್ಲಾಸ್ಟಿಕ್ ನಿಷೇಧ, ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ: ಸಚಿವ ಈಶ್ವರ ಖಂಡ್ರೆ

Date:

“ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದರು.

ಧರ್ಮಸ್ಥಳದ ಪ್ರವಚನ ಮಂದಿರದ ಬಳಿ, ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿ ಮಾತನಾಡಿದರು.

“ಮರುಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗಿದ್ದು, ತ್ಯಾಜ್ಯ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ. ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದು ದುರ್ಲಭ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ, ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆದೋರುತ್ತಿವೆ, ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು” ಎಂದು ಈಶ್ವರ ಖಂಡ್ರೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಪಾದಯಾತ್ರೆ ವೇಳೆ ಪ್ಲಾಸ್ಟಿಕ್ ನಿಷೇಧ

“ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು” ಎಂದು ತಿಳಿಸಿದರು.

ಆಧುನಿಕ ಯಂತ್ರಗಳ ಬಳಕೆ: ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮಾತನಾಡಿ, “ಧರ್ಮಸ್ಥಳ ಸ್ವಚ್ಛ ನಗರಿಯಾಗಿದ್ದು, ಇಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಜನರಲ್ಲಿ ಸ್ವಯಂ ಪರಿಸರ ಜಾಗೃತಿ ಮೂಡಿದರೆ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯ. ಆಧುನಿಕ ಯಂತ್ರಗಳ ನೆರವಿನಿಂದ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲು ಆ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕ್ಷೇತ್ರ ಒತ್ತು ನೀಡಿದೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ

“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275...

ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ...

ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಬೆಂಗಳೂರಿನ ಆನೇಕಲ್‌ ಬಳಿಯ ಕಾಳನಾಯಕನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ...

ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ...