ಗುಡ್ಡ ಕುಸಿತ | ಕೇರಳಕ್ಕೆ ಸರ್ಕಾರದಿಂದ ಅಗತ್ಯ ನೆರವು: ಸಿಎಂ ಸಿದ್ದರಾಮಯ್ಯ

Date:

Advertisements

ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ ತಾಣದ ಮೂಲಕ ತಿಳಿಸಿದ್ದಾರೆ.

ಹಾಗೆಯೇ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, “ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ” ಎಂದಿದ್ದಾರೆ.

ಮುಂದುವರಿದು, “ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ” ಎಂದು ಹೇಳಿದ್ದಾರೆ.

Advertisements

“ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ಸಚಿವರು; ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X