ಹಿಮಾಚಲ | ಕಾಂಗ್ರೆಸ್‌ನಿಂದ ಅನರ್ಹಗೊಂಡಿದ್ದ 6 ಶಾಸಕರು, 3 ಸ್ವತಂತ್ರರು ಬಿಜೆಪಿಗೆ ಸೇರ್ಪಡೆ

Date:

Iರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಿದ್ದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಆ ಆರು ಮಂದಿ ಮಾಜಿ ಶಾಸಕರು ಮತ್ತು ಈ ಹಿಂದೆ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ಮೂವರು ಸ್ವತಂತ್ರ ಶಾಸಕರು ಬಿಜೆಪಿ ಸೇರಿದ್ದಾರೆ.

- Advertisement -

ಕೇಂದ್ರ ಸಚಿವ ಅನುರಾಗ್ ಠಾಕೂರ್, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಸಮ್ಮಖದಲ್ಲಿ ಈ 9 ಮಂದಿ ಬಿಜೆಪಿಗೆ ಸೇರಿದ್ದಾರೆ. ಮಾಜಿ ಶಾಸಕರು ಮತ್ತು ಸ್ವತಂತ್ರರನ್ನು ಪಕ್ಷಕ್ಕೆ ಸ್ವಾಗತಿಸಿದ ಅನುರಾಗ್ ಠಾಕೂರ್, “ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾಂಗ್ರೆಸ್‌ ಅನರ್ಹಗೊಳಿಸಿದ್ದ ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್‌ಪಾಲ್, ಚೆತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೊ ಬಿಜೆಪಿ ಸೇರಿದ್ದಾರೆ.

ಈ ಆರು ಮಂದಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕದೆ, ಅಡ್ಡ ಮತದಾನ ಮಾಡಿದ ಪರಿಣಾಮ, ಕಾಂಗ್ರೆಸ್‌ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ನಿರ್ಣಾಯಕ ಸಂದರ್ಭದಲ್ಲಿ ಕಾಂಗ್ರೆಸ್‌ ಪರವಾಗಿ ಮತ ಚಲಾಯಿಸದ ಅವರನ್ನು ಶಾಸಕ ಸ್ಥಾನದಿಂದ ಕಾಂಗ್ರೆಸ್‌ ಅನರ್ಹಗೊಳಿಸಿತ್ತು. ಅಲ್ಲದೆ, ಪಕ್ಷದಿಂದ ಹೊರಹಾಕಿತ್ತು.

ಇನ್ನು, ಆಶಿಶ್ ಶರ್ಮಾ, ಹೋಶಿಯಾರ್ ಸಿಂಗ್ ಮತ್ತು ಕೆಎಲ್ ಠಾಕೂರ್ ಬಿಜೆಪಿಗೆ ಸೇರ್ಪಡೆಯಾದ ಮೂವರು ಸ್ವತಂತ್ರ ಶಾಸಕರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...