ಹಿಂಡನ್‌ಬರ್ಗ್ | ರಾಹುಲ್ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದ ಕಂಗನಾ ರಣಾವತ್

Date:

ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡಾ ಭಾಗಿಯಾಗಿರುವ ಬಗ್ಗೆ ಹಿಂಡನ್‌ಬರ್ಗ್ ವರದಿ ಬೆನ್ನಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಂಸದೆ, ನಟಿ ಕಂಗನಾ ರಣಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ” ಎಂದು ಕಂಗನಾ ಹೇಳಿದ್ದಾರೆ.

- Advertisement -

ಹಿಂಡನ್‌ಬರ್ಗ್‌ನ ಹೊಸ ಸಂಶೋಧನಾ ವರದಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡುತ್ತಾ ರಾಹುಲ್ ಗಾಂಧಿಯತ್ತ ಬೊಟ್ಟು ಮಾಡಿರುವ ಕಂಗನಾ, “ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ. ಕಹಿ, ವಿಷಕಾರಿ ಮತ್ತು ವಿನಾಶಕಾರಿ ವ್ಯಕ್ತಿಯಾಗಿದ್ದಾರೆ. ತಾನು ಪ್ರಧಾನಿಯಾಗಲು ಸಾಧ್ಯವಾಗದಿದ್ದರೆ ಈ ದೇಶವನ್ನೇ ನಾಶಪಡಿಸುವುದು ರಾಹುಲ್ ಗಾಂಧಿ ಅಜೆಂಡಾ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನಮ್ಮ ಷೇರು ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿ ಅನುಮೋದಿತ ಹಿಂಡನ್‌ಬರ್ಗ್ ವರದಿಯು ನಿನ್ನೆ ರಾತ್ರಿ ಟುಸ್ ಪಟಾಕಿಯಾಗಿದೆ. ಅವರು ಈ ರಾಷ್ಟ್ರದ ಭದ್ರತೆ ಮತ್ತು ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಬೇಕಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಬಿಜೆಪಿ ಸಂಸದೆ ದೂರಿದ್ದಾರೆ.

ಇದನ್ನು ಓದಿದ್ದೀರಾ? ಹಿಂಡನ್‌ಬರ್ಗ್ | ಪತಿಯ ಬಾಲ್ಯದ ಸ್ನೇಹಿತನ ಫಂಡ್‌ನಲ್ಲಿ ಹೂಡಿಕೆ ಮಾಡಲಾಗಿದೆ, ಅದಾನಿಗಲ್ಲ: ಸೆಬಿ ಅಧ್ಯಕ್ಷೆ

“ರಾಹುಲ್ ಗಾಂಧಿ ನಿಮ್ಮ ಜೀವನದುದ್ದಕ್ಕೂ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿರಿ ಮತ್ತು ನೀವು ಅನುಭವಿಸುವ ರೀತಿಯಲ್ಲೇ ಈ ರಾಷ್ಟ್ರದ ಜನರ ವೈಭವ, ಬೆಳವಣಿಗೆ ಮತ್ತು ರಾಷ್ಟ್ರೀಯತೆಯನ್ನು ನೋಡಲು ಸಿದ್ಧರಾಗಿ. ಜನರು ನಿಮ್ಮನ್ನು ಎಂದಿಗೂ ತಮ್ಮ ನಾಯಕನನ್ನಾಗಿ ಮಾಡುವುದಿಲ್ಲ. ನೀವು ನಾಚಿಕೆಗೇಡಿನ ಮನುಷ್ಯ” ಎಂದು ಕಿಡಿಕಾರಿದ್ದಾರೆ.

ಆಗಸ್ಟ್ 10ರಂದು ರಾತ್ರಿ ಹಿಂಡನ್‌ಬರ್ಗ್ ಹೊಸದಾಗಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್‌ ಬುಚ್‌ ಭಾಗಿಯಾಗಿದ್ದಾರೆ. ಅವರೂ ಕೂಡಾ ಹೂಡಿಕೆ ಮಾಡಿದ್ದಾರೆ ಎಂದು ಈ ವರದಿಯು ಬಹಿರಂಗಪಡಿಸಿದೆ. ಆದರೆ ಸೆಬಿ ಅಧ್ಯಕ್ಷೆ ಇದು ಹಳೆಯ ಹೂಡಿಕೆ, ನಾನು ಸೆಬಿ ಅಧ್ಯಕ್ಷೆಯಾದ ಬಳಿಕ ಮಾಡಿರುವ ಹೂಡಿಕೆಯಲ್ಲ. ನನ್ನ ಪತಿಯ ಸ್ನೇಹಿತನ ಫಂಡ್‌ನಲ್ಲಿ ಮಾಡಿರುವ ಹೂಡಿಕೆ ಎಂದು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...