ಹಿರೇಮಗಳೂರು ಕಣ್ಣನ್ ಪ್ರಕರಣ | ತಹಶೀಲ್ದಾರ್‌ರಿಂದ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ: ಸಿದ್ದರಾಮಯ್ಯ

Date:

ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ನೋಟಿಸ್​​ ನೀಡಿರುವ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ

ಈ ಕುರಿತು ಅವರು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಿರೇಮಗಳೂರು ಕಣ್ಣನ್ ಅವರು ಕಳೆದ 44 ವರ್ಷಗಳಿಂದ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡದಲ್ಲೇ ಮಂತ್ರ ಪಠಣ ಮಾಡಿ ಅರ್ಚನೆ ಮಾಡುವ ಮೂಲಕ ರಾಜ್ಯದ ಜನರ ಗಮನ ಸೆಳೆದಿದ್ದ ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ವೇತನ ವಾಪಸ್ ಕೇಳಿ ನೋಟಿಸ್ ಜಾರಿ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಲು ಆರಂಭವಾಗಿತ್ತು.

2013-14ರಿಂದ 2016-17ರವರೆಗೆ ವಾರ್ಷಿಕ 24 ಸಾವಿರ ರೂ ಅರ್ಚಕರಿಗೆ ಪಾವತಿಸಬೇಕಿತ್ತು. ಆದರೆ ತಪ್ಪಾಗಿ 90 ಸಾವಿರದಂತೆ ಹೆಚ್ಚುವರಿಯಾಗಿ ವಾರ್ಷಿಕವಾಗಿ 66 ಸಾವಿರ ಪಾವತಿಯಾಗಿದೆ. ಹಾಗೂ 2017-18ರಿಂದ 2021-22ನೇ ಸಾಲಿನವರೆಗೆ ವಾರ್ಷಿಕವಾಗಿ 48 ಸಾವಿರ ಪಾವತಿಸಬೇಕಿದ್ದು, ತಪ್ಪಾಗಿ 90 ಸಾವಿರ ರೂ ಪಾವತಿಸಲಾಗಿದೆ.

ಈ ಹೆಚ್ಚುವರಿಯಾಗಿ ಪಾವತಿಸಲಾದ 4,74 ಲಕ್ಷ ದೇವಾಲಯ ನಿಧಿಗೆ ಪಾವತಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್‌ ಅವರು ಕಣ್ಣನ್‌ ಅವರಿಗೆ ನೋಟಿಸ್‌ ನೀಡಿದ್ದರು. ಸದರಿ ನೋಟಿಸ್‌ ಅನ್ನು ವಾಪಸ್‌ ಪಡೆದು, ಆ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಹಶೀಲ್ದಾರ್‌ ಮತ್ತು ಸಿಬ್ಬಂದಿಯಿಂದ ವಸೂಲಿ ಮಾಡಿ, ಜಮಾ ಮಾಡುವಂತೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...