ಎಚ್ಎಂಟಿ ಭೂಮಿ ಕೇಂದ್ರದ್ದಲ್ಲ, ಅದು ಕನ್ನಡಿಗರ ಆಸ್ತಿ: ಬಿಜೆಪಿಗೆ ಸಚಿವ ಈಶ್ವರ ಖಂಡ್ರೆ ತಿರುಗೇಟು

Date:

ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಆಗದ ಹೊರತು ಒಂದು ಬಾರಿ ಅರಣ್ಯ ಎಂದು ಅಧಿಸೂಚನೆ ಆದ ಭೂಮಿ ಸದಾ ಅರಣ್ಯವಾಗೇ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಡಿನೋಟಿಫೈ ಆಗದ ಎಚ್ಎಂಟಿ ಭೂಮಿ ಇಂದಿಗೂ ಅರಣ್ಯ ಇಲಾಖೆಯ ಸ್ವತ್ತು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

- Advertisement -

ಬಿಜೆಪಿ ವಕ್ತಾರ ಎನ್.ಆರ್. ರಮೇಶ್, ‘ಎಚ್ಎಂಟಿ ಜಾಗ ಕೇಂದ್ರದ್ದು, ಅರಣ್ಯ ಸಚಿವರು ಸಂಪೂರ್ಣ ದಾಖಲೆ ಅಧ್ಯಯನ ಮಾಡಿದ ಬಳಿಕವಷ್ಟೇ ಅಭಿಪ್ರಾಯ ವ್ಯಕ್ತಪಡಿಸಬೇಕು’ ಎಂದು ನೀಡಿರುವ ಹೇಳಿಕೆಗೆ ಬೆಂಗಳೂರಿನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಬಿಜೆಪಿ ಹೇಳಿಕೆ ಖಂಡನೀಯ. ಉತ್ತರ ಬೆಂಗಳೂರಿನಲ್ಲಿ ಶ್ವಾಸ ಪ್ರದೇಶವೇ ಇಲ್ಲ. ಈ ಜಾಗ ಆ ಭಾಗದ ಜನರ ಉಸಿರಾಟದ ತಾಣ ಎಂದು ಹೇಳಿದ್ದಾರೆ. ಡಿನೋಟಿಫೈ ಆಗಿಲ್ಲ ಎಂಬ ಕಾರಣಕ್ಕೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನೀಡಿದ ಭೂಮಿಗೇ ಹಕ್ಕು ನೀಡಲು ಸಾಧ್ಯವಾಗಿಲ್ಲ. ಅದೇ ರೀತಿ ಡಿನೋಟಿಫೈ ಆಗದ ಪೀಣ್ಯ -ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿನ 599 ಎಕರೆ ಭೂಮಿ ಮೇಲೆ ಅದು ಹೇಗೆ ಎಚ್ಎಂಟಿಗೆ ಹಕ್ಕು ಬರುತ್ತದೆ” ಎಂದು ಪ್ರಶ್ನಿಸಿದರು.

“ಪರಿಸರ ಹಕ್ಕು ಯಾವುದೇ ಇತರ ನಾಗರಿಕ ಹಕ್ಕಿಗಿಂತ ಮಿಗಿಲಾದ್ದು ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಎಚ್ಎಂಟಿ ತನ್ನ ವಶದಲ್ಲಿದ್ದ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯನ್ನು ನೂರಾರು ಕೋಟಿಗೆ ಮಾರಾಟ ಮಾಡಿದೆ. ಇನ್ನಷ್ಟು ಭೂಮಿಯನ್ನು ಅತ್ಯಲ್ಪ ದರಕ್ಕೆ ಪರಭಾರೆ ಮಾಡಬೇಕೇ” ಎಂದು ಬಿಜೆಪಿಗರನ್ನು ಕೇಳಿದರು.

ಲಾಲ್ ಬಾಗ್ ರೀತಿ ಅಭಿವೃದ್ಧಿ

“ಪೀಣ್ಯ- ಜಾಲಹಳ್ಳಿ (ಎಚ್.ಎಂ.ಟಿ. ಭೂಮಿ)ಯಲ್ಲಿ ಇನ್ನೂ ಸುಮಾರು 285 ಎಕರೆ ಪ್ರದೇಶದಲ್ಲಿ ದಟ್ಟ ಅರಣ್ಯವಿದೆ. ಹಚ್ಚ ಹಸಿರಿನಿಂದ ನಳ ನಳಿಸುತ್ತಿದೆ. ತಾವು ಕಳೆದ ವಾರ ಸ್ಥಳ ಪರಿಶೀಲನೆಗೆ ಹೋದಾಗ ದಟ್ಟ ಅರಣ್ಯದಂತಿರುವ ಈ ಪ್ರದೇಶದಲ್ಲಿ ಮೊಲ, ನವಿಲು, ಗಿಣಿಗಳ ಹಿಂಡಿತ್ತು. ದಟ್ಟ ಕಾಡಿನಂತೆಯೇ ಇರುವ ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆ ಪಡೆದು ಇಲ್ಲಿ ಲಾಲ್ ಬಾಗ್ ರೀತಿಯಲ್ಲಿ ಸಸ್ಯೋದ್ಯಾನ ಅಭಿವೃದ್ಧಿ ಪಡಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ ರಾಜಕಾರಣಕ್ಕೆ ದಿಟ್ಟ ಉತ್ತರದ ಅಗತ್ಯವಿದೆ

“ಇದು ಉತ್ತರ ಬೆಂಗಳೂರಿಗರ ಶ್ವಾಸ ತಾಣವೇ ಹೊರತು ಕೇಂದ್ರ ಸರ್ಕಾರದ ಸ್ವತ್ತಲ್ಲ. ಇದಕ್ಕೆ ಉತ್ತರ ಬೆಂಗಳೂರಿನ ಜನರೇ ತಕ್ಕ ಉತ್ತರ ನೀಡುತ್ತಾರೆ. ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆ ಎಚ್.ಎಂ.ಟಿ.ಗೆ ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಯವರು ಯಾವುದೇ ಗೆಜೆಟ್ ಅಧಿಸೂಚನೆಯೂ ಇಲ್ಲದೆ, ಸಚಿವ ಸಂಪುಟದ ಅನುಮೋದನೆಯನ್ನೂ ಪಡೆಯದೆ, ಡಿನೋಟಿಫಿಕೇಷನ್ ಮಾಡದೆ ಕ್ರಯ ಮತ್ತು ಗುತ್ತಿಗೆ ನೀಡಿರುವುದೇ ಕಾನೂನು ಬಾಹಿರವಾಗುತ್ತದೆ ಎಂದು ಇದನ್ನು ಬಿಜೆಪಿ ಮೊದಲು ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಅಮೂಲ್ಯ ಸಂಪತ್ತು ರಿಯಲ್ ಎಸ್ಟೇಟ್ ನವರ ಪಾಲಾಗಲು ಯಾರೂ ಬೆಂಬಲ ನೀಡಬಾರದು” ಎಂದು ಹೇಳಿದರು.

“ಈಗಾಗಲೇ ಎಚ್ಎಂಟಿ 165 ಎಕರೆ ಭೂಮಿಯನ್ನು 300 ಕೋಟಿ ರೂ.ಗೆ ಖಾಸಗಿಯವರೂ ಸೇರಿದಂತೆ ಹಲವರಿಗೆ ಮಾರಾಟ ಮಾಡಿದೆ. 2015ರಲ್ಲೇ ಅರಣ್ಯ ಅಧಿಕಾರಿಯೊಬ್ಬರು ಕರ್ನಾಟಕ ಅರಣ್ಯ ಕಾಯಿದೆ 1963ರಡಿ 64 ಎ ಪ್ರಕ್ರಿಯೆ ನಡೆಸಿದ್ದಾರೆ. ಇದು ಅರಣ್ಯವಲ್ಲದೆ ಮತ್ತೇನು” ಎಂದು ಪ್ರಶ್ನಿಸಿದರು.

“ಈಗ 5 ದಶಕಗಳ ಬಳಿಕ ಅರಣ್ಯ ಇಲಾಖೆಯ ಕೆಲವು ಅಧಿಕಾರಿಗಳು ಸಚಿವರ ಮತ್ತು ಸಚಿವ ಸಂಪುಟದ ಗಮನಕ್ಕೂ ತಾರದೆ ಸುಪ್ರೀಂಕೋರ್ಟ್ ನಲ್ಲಿ ಈ ಪ್ರದೇಶ ಅರಣ್ಯ ಸ್ವರೂಪ ಕಳೆದುಕೊಂಡಿದೆ ಹೀಗಾಗಿ ಇದನ್ನು ಡಿ ನೋಟಿಫೈ ಮಾಡಿ ಎಂದು ಅರ್ಜಿ ಹಾಕಿದ್ದಾರೆ. ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಸೂಚಿಸಿದ್ದೇನೆ. ಇದು ಅರಣ್ಯ ಅಲ್ಲದಿದ್ದರೆ ಐ.ಎ. ಹಾಕುವ ಅಗತ್ಯ ಏಕೆ ಬರುತ್ತಿತ್ತು, ಎನ್.ಆರ್. ರಮೇಶ್ ಅರಣ್ಯ ಕಾಯಿದೆ ಓದಿ ನಂತರ ಮಾತನಾಡಬೇಕು, ಅವರ ಹೇಳಿಕೆ ಖಂಡನೀಯ. ಸತ್ಯಮೇವ ಜಯತೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...