ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದೇನು?

Date:

ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಪೋರ್ಟಲ್ ಅರ್ಜಿ ಪ್ರಕಾರ ಆಗುತ್ತಿಲ್ಲ ಎಂಬ ಆರೋಪದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಬುಧವರಾ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, “ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಶಿಸ್ತು ಬದ್ಧವಾಗಿ ನಿಯಮದ ಚೌಕಟ್ಟಿನಲ್ಲಿ ನಡೆಯಬೇಕಾಗುತ್ತದೆ” ಎಂದು ಹೇಳಿದರು.

“ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ಮಾಡಿದ್ದಾರೆ. ಅದನ್ನು ಮೀರಿ ವರ್ಗಾವಣೆ ಮಾಡಲು ಬರುವುದಿಲ್ಲ. ಅಕಸ್ಮಾತ್ ಮಾಡಬೇಕಾದರೆ ನಿಯಮಗಳನ್ನು ಬದಲಾಯಿಸಬೇಕಾಗುತ್ತದೆ” ಎಂದರು.

“ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಒಂದು ವರ್ಷದ ನಿಯಮವಿತ್ತು. ಸದನದಲ್ಲಿ ಕಾನೂನು ಬದಕಾಯಿಸಿ ಎರಡು ವರ್ಷ ಮಾಡಲಾಗಿದೆ. ಈ ರೀತಿ ಕಾನೂನು ಬದಲಾವಣೆ ಮಾಡಬಹುದು. ಇರುವಂತಹ ನಿಯಮ ಉಲ್ಲಂಘನೆ ಮಾಡಿ, ವರ್ಗಾವಣೆ ಮಾಡುವುದಕ್ಕೆ ಅವಕಾಶವಿಲ್ಲ. ಡಿಜಿ ಅವರಾಗಲಿ, ನಾನು ಅಥವಾ ಮತ್ತೊಬ್ಬರು ಇರಬಹುದು. ಕಾನೂನು ನಿಯಮದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವರ್ಗವಾಣೆಗೆ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿರುವುದಕ್ಕೆ ಏನಾದರು ಸಣ್ಣಪುಟ್ಟ ತೊಂದರೆಗಳು ಸಿಬ್ಬಂದಿಗಳಿಗೆ ಆಗಿದ್ದರೆ ಸರಿಪಡಿಸುವುದಕ್ಕೆ ಸೂಚನೆ ನೀಡುತ್ತೇನೆ. ಅವರಿಗೆ ಕುಟುಂಬಗಳಿವೆ. ಇದನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕಾಗುತ್ತದೆ” ಎಂದು ಹೇಳಿದರು.

“545 ಪಿಎಸ್ಐ ಹುದ್ದೆಗಳ ನೇಮಕಾತಿ ಕುರಿತು, ಎಲ್ಲರು ಕೋರ್ಟ್‌ಗಳಿಗೆ ಹೋಗಿ ಆದೇಶಗಳನ್ನು ತಂದಾಗ, ನಮ್ಮ ಕೈ ಕಟ್ಟಿ ಹಾಕಿದಂತಾಗುತ್ತದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿ ಆದೇಶಗಳನ್ನು ಕೊಡಬೇಕು ಎಂಬ ಉದ್ದೇಶದಿಂದ ಪರೀಕ್ಷೆಯನ್ನು‌ ಪೂರ್ಣಗೊಳಿಸಿದ್ದೇವೆ. ಈ ಹಂತದಲ್ಲಿಯೇ ಯಾರೋ ಕೋರ್ಟ್‌ಗೆ ಹೋಗುತ್ತಾರೆ. ಇದನ್ನು ಮುಗಿಸಿದರೆ ಮುಂದಿನ ನೇಮಕಾತಿಗಳಿಗೆ ಅನುಕೂಲವಾಗುತ್ತದೆ. 545 ಹುದ್ದೆಗಳ ನೇಮಕಾತಿಯನ್ನು ಆದಷ್ಟು ಬೇಗ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ,...

ಅಪ್ಪಟ ಕನ್ನಡತಿ ಅಪರ್ಣಾ | ಶುದ್ಧ, ಅಶುದ್ಧ ಅನ್ನೋದು ಭಾಷಾ ಭಯೋತ್ಪಾದನೆ

ನಿರೂಪಕಿ, ನಟಿ ಅಪರ್ಣಾ ಮೊನ್ನೆ ತೀರಿ ಹೋದಾಗ ಆಕೆಗೆ ಐವತ್ತೇಳರ ಹರೆಯ...

ಬೀದರ್‌ | ಕನ್ನಡ ನಾಮಫಲಕ ಹಾಕಿ ಇಂಗ್ಲಿಷ್ ಕಲಿಸುತ್ತಿರುವುದು ಆತಂಕ ತರಿಸಿದೆ : ಡಾ.ಪುರುಷೋತ್ತಮ ಬಿಳಿಮಲೆ

ನಮ್ಮೆಲ್ಲರ ನಿರಾಸಕ್ತಿ, ಅನ್ಯ ಭಾಷೆಯ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆ ಸೊರಗುತ್ತಿದೆ....