ನ್ಯಾಯಾಲಯದ ಆದೇಶದಂತೆ ಹಂಪಿ ಸುತ್ತಮುತ್ತ ಹೋಮ್ ಸ್ಟೇಗಳನ್ನು ತಕ್ಷಣವೇ ನಿಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ

Date:

Advertisements
  • ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಅಧ್ಯಕ್ಷತೆಯಲ್ಲಿ ಚರ್ಚೆ
  • ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಪಾರಂಪರಿಕ ತಾಣವಾದ ಹಂಪಿಯ ಸುತ್ತಲಿನ ಗ್ರಾಮಗಳ ಕುರಿತು ನ್ಯಾಯಾಲಯ ಆದೇಶ ನೀಡಿರುವಂತೆ ಹೋಮ್ ಸ್ಟೇಗಳನ್ನು ತಕ್ಷಣಕ್ಕೆ ನಿಲ್ಲಿಸಬೇಕು. ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ ತೆಗೆದುಕೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿಯಾಗಿ ಚರ್ಚಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ ಮಾದಕವಸ್ತುಗಳ ಬಳಕೆ, ವೇಶ್ಯಾವಾಟಿಕೆಗಳಂಥ ಕಾನೂನು ಬಾಹಿರ ಚಟುವಟಿಕೆಗಳನ್ನು ಗುರುತಿಸುವಂತೆ ನ್ಯಾಯಾಲಯ ಸೂಚಿಸಿದ್ದು, ಇದನ್ನು ಗುರುತಿಸಿ ನಿಲ್ಲಿಸುವ ಕೆಲಸವಾಗಬೇಕು ಮತ್ತು ಗ್ರಾಮಸ್ಥರಿಗೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಸ್ಥಗಿತಗೊಳಿಸಬಾರದು ಎಂದು ಅವರು ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

Advertisements

ಹಂಪಿ ಪ್ರದೇಶದ 29 ಗ್ರಾಮಗಳಲ್ಲಿ 10 ಸಾವಿರ ಜನರಿದ್ದಾರೆ. 2009 ರಲ್ಲಿ ನಾಲ್ಕು ಸ್ವಾಮೀಜಿಗಳು ದಾವೆ ಹೂಡಿದ್ದು, ಅನಧಿಕೃತ ಚಟುವಟಿಕೆಗಳನ್ನು ಗುರುತಿಸುವ ಕೆಲಸ ಪ್ರಾಧಿಕಾರದ್ದು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಅದರ ಆಧಾರದ ಮೇಲೆ ಸ್ಥಳೀಯರಿಗೆ ಅಂಗಡಿ ಹಾಕಲು ಅವಕಾಶವಿಲ್ಲ. 230 ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹಂಪಿ ಅಭಿವೃದ್ಧಿಗೆ ಪ್ರಾಚ್ಯವಸ್ತು ಇಲಾಖೆ ಕ್ರಮವಹಿಸಿಲ್ಲ. ಹಂಪಿಗೆ ಬರುವ ಜನರಿಗೆ ಈ ಕ್ರಮದಿಂದ ತೊಂದರೆಯಾಗಿದೆ.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕಿದೆ. ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ, ಹಾಗೂ ಆರ್ಥಿಕ ಚಟುವಟಿಕೆ ಹಮ್ಮಿಕೊಳ್ಳಲು, ಹೋಮ್ ಸ್ಟೇ ನಡೆಸಲು ಅವಕಾಶ ಕಲ್ಪಿಸಲು ಅವಕಾಶ ನೀಡುವಂತೆ ಮಾಜಿ ಸಂಸದ ಉಗ್ರಪ್ಪ ಮನವಿ ಮಾಡಿದರು.

ದಿನನಿತ್ಯದ ಅವಶ್ಯಕತೆಗಳಿಗೆ 50 ಚಟುವಟಿಕೆಗಳನ್ನು ಗುರುತಿಸಲಾಗಿದೆ. ಹೋಮ್ ಸ್ಟೇಗೆ ಇದರಲ್ಲಿ ಅವಕಾಶ ಕಲ್ಪಿಸಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಜಾಗದಲ್ಲಿ ಸ್ಟಾರ್ ಹೋಟೆಲ್ ನಿರ್ಮಿಸಲು ಅನುಮತಿ ನೀಡಲಾಗಿದೆ.‌ ಜೈನರ ಆಶ್ರಮ, ಮಠವಿದೆ, ಖಾಸಗಿಯವರಿಗೆ ಹೋಮ್ ಸ್ಟೇ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಆದರೆ ಬಡವರಿಗೆ ಹೋಟೆಲು, ಹೋಮ್ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ಉಗ್ರಪ್ಪ ಅವರು ವಿವರಿಸಿದರು.

ಹೋಮ್ ಸ್ಟೇ ವಾಣಿಜ್ಯ ಚಟುವಟಿಕೆಯಾಗಿದೆ ಎಂದು ನ್ಯಾಯಾಲಯ ಪರಿಗಣಿಸಿದೆ. ಸದ್ಯ ನ್ಯಾಯಾಲಯ ಸ್ಥಳ ಪರಿಶೀಲನೆ ಮಾಡಲು ಸೂಚಿಸಿದ್ದು, ಈ ಚಟುವಟಿಕೆಗಳಿಂದ ಪಾರಂಪರಿಕ ತಾಣಕ್ಕೆ ಹಾನಿಯಾಗುತ್ತದೆಯೇ ಎಂಬ ಅಂಶಗಳನ್ನು ಪರಿಶೀಲಿಸಲು ತಿಳಿಸಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ತುಕಾರಾಂ, ಹಿರಿಯ ಕಾಂಗ್ರೆಸ್ ಮುಖಂಡ ಅಲ್ಲಂ ವೀರಭದ್ರಪ್ಪ, ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿ ಸಂತ್ರಸ್ಥ ಗ್ರಾಮದ 50ಕ್ಕೂ ಹೆಚ್ಚು ನಿವಾಸಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X