ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತಷ್ಟು ಸ್ಫೋಟಕ ಸಂಗತಿಗಳನ್ನು ಸಂತ್ರಸ್ತೆ ಹೊರ ಹಾಕಿದ್ದಾರೆ.
ಬೆಂಗಳೂರಿನ ರಾಜಭವನ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂತ್ರಸ್ತೆ, “ಮಾಜಿ ಮುಖ್ಯಮಂತ್ರಿಯನ್ನು ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ವಿಡಿಯೋ ಅವರ ಬಳಿಯಿದ್ದು, ಆ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ ಮೂಲಕ ಮುನಿರತ್ನ ಮಂತ್ರಿಯಾಗಿದ್ದರು” ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
2020ರಲ್ಲಿಮಮತಾ, ವೆಂಕಟೇಶ್ ಎಂಬುವರ ಮೂಲಕ ಮುನಿರತ್ನ ಪರಿಚಯವಾಗಿದ್ದಾರೆ. ಒಂದು ದಿನ ನನಗೆ ವಿಡಿಯೋ ಕರೆ ಮಾಡಿದ್ದರು. ನನ್ನ ಕರೆಯಿಸಿಕೊಂಡು ಗೋದಾಮಿನ ಬಳಿ ಕರೆದುಕೊಂಡು ಹೋಗಿ, ನನ್ನನ್ನು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಅವರಿಗೆ ಜಾಮೀನು ಸಿಕ್ಕು ಹೊರ ಬಂದರೆ ಅವರಿಂದ ನನಗೆ ಜೀವ ಭಯ ಇದೆ” ಎಂದು ದೂರಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ
“ಮುನಿರತ್ನ ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಅದನ್ನು ಇಟ್ಟುಕೊಂಡು ಅವರು ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದ್ದಾರೆ. ಜತೆಗೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು” ಎಂದು ಸಂತ್ರಸ್ತೆ ಈಗಾಗಲೇ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದೀಗ ಮಾಜಿ ಮುಖ್ಯಮಂತ್ರಿಗಳೊಬ್ಬರನ್ನು ಹನಿಟ್ರ್ಯಾಪ್ ಮಾಡಿರುವ ಆರೋಪ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.