“ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಾದರೂ ಕೇಂದ್ರ ಸರ್ಕಾರ ನೆರವು ನೀಡುತ್ತದೆಂಬ ನಿರೀಕ್ಷೆ ಇದೆ” ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದ ಬಳಿ ಮಾಧ್ಯಮಗಳೊಂದಿಗೆ ಡಿ.ಕೆ ಶಿವಕುಮಾರ್ ಮಾತನಾಡಿದರು. “ರಾಜ್ಯದಲ್ಲಿನ ಬರ ಪರಿಸ್ಥಿತಿ, ಬಾಕಿ ಇರುವ ವಿವಿಧ ಯೋಜನೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಧ್ವನಿ ಎತ್ತುವ ಬಗ್ಗೆ ಚರ್ಚೆ ಮಾಡಲು ನಾಳೆ ಸಂಜೆ ದೆಹಲಿಯಲ್ಲಿ ರಾಜ್ಯದ ಎಲ್ಲ ಸಂಸದರ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರೂ ಭಾಗಿಯಾಗಲಿದ್ದಾರೆ. ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಿ ಕೇಂದ್ರ ಸರ್ಕಾರ ನೆರವು ನೀಡುವ ನಿರೀಕ್ಷೆ ಇದೆ. ಆಗಸ್ಟ್ 13 ರಿಂದ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.




