ಸರ್ಕಾರದ ವೆಚ್ಚ, ಗ್ಯಾರಂಟಿಗಳಿಗೆ ಶೇ.80ರಷ್ಟು ಬಜೆಟ್‍ ಖರ್ಚಾದರೆ ಅಭಿವೃದ್ಧಿ ಹೇಗೆ ಸಾಧ್ಯ: ವಿಜಯೇಂದ್ರ ಪ್ರಶ್ನೆ

Date:

ಮುಖ್ಯಮಂತ್ರಿಗಳು ಅತಿ ಹೆಚ್ಚು ಮೊತ್ತದ ಬಜೆಟ್ ಮಂಡಿಸಿದ್ದು, ರಾಜ್ಯದ ಮೇಲೆ ಸಾಲದ ಹೊರೆ 7.6 ಲಕ್ಷ ಕೋಟಿಗೆ ಹೆಚ್ಚಾಗಿದೆ. ಸಾಲದ ಹೊರೆ ತಗ್ಗಿಸುವ ಸಲುವಾಗಿ ಹಣಕಾಸಿನ ಯಾವುದೇ ಕ್ರಿಯಾಯೋಜನೆ ರೂಪಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

- Advertisement -

ವಿಧಾನಸಭಾ ಅಧಿವೇಶನದಲ್ಲಿ ಮಂಗಳವಾರ ಮಾತನಾಡಿ, “ಸರಕಾರದ ವೆಚ್ಚ, ಗ್ಯಾರಂಟಿಗಳ ವೆಚ್ಚವು ಬಜೆಟ್‍ನ ಶೇ.80 ರಷ್ಟಾಗಿದೆ. ಬಂಡವಾಳ ವೆಚ್ಚಕ್ಕೆ ಸಿಗಬೇಕಾದಷ್ಟು ಅನುದಾನ ಸಿಗುತ್ತಿಲ್ಲ. ಇದರಿಂದ ರಾಜ್ಯದಲ್ಲಿ ಯಾವ ರೀತಿ ಅಭಿವೃದ್ಧಿ ಸಾಧ್ಯ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ಸಾಲದ ಪ್ರಮಾಣ ಒಂದೆಡೆ ಏರುತ್ತಿದೆ. 2025-26ನೇ ಸಾಲಿನ ಅಂತ್ಯಕ್ಕೆ ರಾಜ್ಯ ಸರಕಾರವು 45,600 ಕೋಟಿ ಬಡ್ಡಿ ಪಾವತಿಸಬೇಕಾಗುತ್ತದೆ. 2027-28ಕ್ಕೆ ಸುಮಾರು 60 ಸಾವಿರಕ್ಕೂ ಹೆಚ್ಚು ಕೋಟಿ ರೂಪಾಯಿಗಳನ್ನು ಕೇವಲ ಬಡ್ಡಿಗೆ ಮೀಸಲಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. 2027-28ಕ್ಕೆ ರಾಜ್ಯದ ಒಟ್ಟು ಸಾಲ 9 ಲಕ್ಷ ಕೋಟಿ ದಾಟಲಿದೆ” ಎಂದರು.

“ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದು ಕಡೆ ಬೆಲೆ ಏರಿಕೆ ಪರಿಣಾಮವಾಗಿ ಹಣದುಬ್ಬರ ಹೆಚ್ಚಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅತಿ ಹೆಚ್ಚು ಹಣದುಬ್ಬರ ಇದೆ. ಶೇ 5.03ರಷ್ಟು ಹಣದುಬ್ಬರ ನಮ್ಮ ರಾಜ್ಯದಲ್ಲಿದ್ದರೆ, ಪಕ್ಕದ ಮಹಾರಾಷ್ಟ್ರದಲ್ಲಿ ಅದು 3.39 ರಷ್ಟಿದೆ. ಆಂಧ್ರ ಪ್ರದೇಶದಲ್ಲಿ 4.02, ಗುಜರಾತ್‍ನಲ್ಲಿ 3.88 ರಷ್ಟಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಹಣದುಬ್ಬರ ನಮ್ಮ ರಾಜ್ಯದಲ್ಲಿ ಇದೆ” ಎಂದು ಗಮನ ಸೆಳೆದರು.

ಜಿಡಿಪಿ ಬೆಳವಣಿಗೆ ಬಗ್ಗೆ ಮಾತನಾಡಿ, “ನಮ್ಮ ಬಿಜೆಪಿ ಸರಕಾರ ರಾಜ್ಯದಲ್ಲಿ ಇದ್ದಾಗ 2022-23ರಲ್ಲಿ ಅದು 14.2 ಶೇಕಡಾದಷ್ಟಿತ್ತು. ಈ ಕಾಂಗ್ರೆಸ್ ಸರಕಾರ ಬಂದ ಬಳಿಕ 2023-24ರಲ್ಲಿ ಶೇ.9.6 ರಷ್ಟಾಗಿದೆ. ಅಂದರೆ ಹಿಂದಿನ ಬಿಜೆಪಿ ಸರಕಾರದಲ್ಲಿ 14.2 ಶೇ ಇದ್ದರೆ, ಈಗಿನ ಕಾಂಗ್ರೆಸ್ ಸರಕಾರದಲ್ಲಿ ಅದು ಶೇ.9.6ಕ್ಕೆ ಇಳಿದಿದೆ. ಆರ್ಥಿಕ ಪರಿಸ್ಥಿತಿ ಏನಾಗುತ್ತಿದೆ ಎಂದು ನಾವು ಚರ್ಚೆ ಮಾಡಬೇಕಿದೆ” ಎಂದು ತಿಳಿಸಿದರು.

“ಬಂಡವಾಳ ಹೂಡಿಕೆಯು ಕೇವಲ ಹಾಳೆ ಮೇಲಿದೆಯೇ ಹೊರತು ಯಾವುದೂ ಅನುಷ್ಠಾನಕ್ಕೆ ಬಂದಿಲ್ಲ. ಕಳೆದ 20 ತಿಂಗಳಿನಲ್ಲಿ ಸರಕಾರ ತಲೆ ಕೆಡಿಸಿಕೊಳ್ಳದ ಕಾರಣ ಕೈಗಾರಿಕಾ ಬೆಳವಣಿಗೆ ಕಡಿಮೆಯಾಗಿದೆ. ಈ ಬಜೆಟ್ ಅವಲೋಕನ ಮಾಡಿದರೆ ಇದು ರಾಜ್ಯದ ಯಾವುದೇ ವರ್ಗದ ಜನರಿಗೆ ಸಂತೃಪ್ತಿ ತಂದಿಲ್ಲ. ನಾಡಿನ ಕೃಷಿಕರು, ಬಡವರು, ಮಹಿಳೆಯರು, ಯುವಕರು ಸೇರಿ ಎಲ್ಲರಿಗೂ ಈ ಬಜೆಟ್ ನಿರಾಸೆ ತಂದಿದೆ. ಶಿಕ್ಷಣ, ಆರೋಗ್ಯ ಸೇರಿ ಯಾವುದೇ ಆದ್ಯತಾ ಕ್ಷೇತ್ರಗಳಿಗೂ ಗಮನ ಹರಿಸಿಲ್ಲ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...