ರಾಜ್ಯಪಾಲರು ಸರ್ಕಾರದ ಪ್ರತಿದಿನದ ತೀರ್ಮಾನಗಳ ಬಗ್ಗೆ ಮಾಹಿತಿ ಕೇಳಿದರೆ ಹೇಗೆ: ಸಚಿವ ಪರಮೇಶ್ವರ್‌ ಪ್ರಶ್ನೆ

Date:

Advertisements

ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮ ಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂವಿಧಾನದ ಆಶಯಗಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ದಿನನಿತ್ಯ ಆಡಳಿತ ಮಾಡುವ ಅಧಿಕಾರ ಮುಖ್ಯಮಂತ್ರಿಯವರಿಗೆ ಮತ್ತು ಸರ್ಕಾರಕ್ಕೆ ಇದೆ. ಆದರೆ, ರಾಜ್ಯಪಾಲರು ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುವುದಾಗಲಿ ಅಥವಾ ಮಧ್ಯಪ್ರವೇಶಿಸುವುದನ್ನಾಗಲಿ ಎಲ್ಲಿಯೂ ಕೇಳಿಲ್ಲ‌” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಇಲ್ಲಿಯವರೆಗೆ ಅನೇಕ ರಾಜ್ಯಪಾಲರನ್ನು ಮತ್ತು ಮುಖ್ಯಮಂತ್ರಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಸಂದರ್ಭ ಯಾವತ್ತು ಬಂದಿಲ್ಲ. ರಾಜ್ಯಪಾಲರು ಸರ್ಕಾರದ ಪ್ರತಿನಿತ್ಯದ ಕೆಲಸಗಳು ಮತ್ತು ತೀರ್ಮಾನಗಳ ಬಗ್ಗೆ ಮಾಹಿತಿ ಕೊಡಿ ಅಂತ ಕೇಳುತ್ತಿದ್ದಾರೆ” ಎಂದು ಕಿಡಿಕಾರಿದರು.

Advertisements

“ಯಾವಾಗಲಾದರೂ ಒಮ್ಮೆ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಕಾನೂನು ಸುವ್ಯವಸ್ಥೆಯ ವಿಚಾರ ಇದ್ದರೆ ಗೃಹ ಸಚಿವರು ಹೋಗಿ ರಾಜ್ಯಪಾಲರಿಗೆ ವಿವರಿಸುತ್ತಾರೆ. ಸಂಬಂಧಪಟ್ಟ ಸಚಿವರನ್ನು ಕರೆಸಿ ಕೇಳುವುದಕ್ಕೆ ರಾಜ್ಯಪಾಲರಿಗೆ ಹಕ್ಕು ಇದೆ. ಆದರೆ, ದಿನನಿತ್ಯ ಪತ್ರ ಬರೆದು, ಪತ್ರದ ಮುಖಾಂತರ ಮಾಹಿತಿ ಕೊಡಿ ಅಂತ ಕೇಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ” ಎಂದರು.

“ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಒಳ್ಳೆಯ ಸಂಬಂಧವಿರಬೇಕು. ಆಂದಾಗ ರಾಜ್ಯದ ಮತ್ತು ಜನಗಳ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಏನು ತೀರ್ಮಾನ ತಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು” ಎಂದರು.

ಎಲ್ಲದಕ್ಕೂ ಉತ್ತರಿಸುವ ಅನಿವಾರ್ಯತೆ ಇಲ್ಲ

“ರಾಜ್ಯಪಾಲರಿಗೆ ಎಲ್ಲದಕ್ಕೂ ಉತ್ತರ ಕೊಡುವ ಅನಿವಾರ್ಯತೆ ಇಲ್ಲ. ಯಾವುದಕ್ಕೆ ಉತ್ತರ‌ಕೊಡಬೇಕು ಖಂಡಿತವಾಗಿಯೂ ಕೊಡುತ್ತೇವೆ. ಯಾವುದಕ್ಕೆ ಉತ್ತರಿಸುವ ಅನಿವಾರ್ಯತೆ ಇರುವುದಿಲ್ಲ, ಉತ್ತರ ಕೊಡುವುದಿಲ್ಲ. ಎಲ್ಲದಕ್ಕು ಉತ್ತರಿಸಬೇಕು ಅಂತೇನು ಇಲ್ಲ” ಎಂದು ಹೇಳಿದರು.

“ರಾಜ್ಯಪಾಲರು ಯಾವ ಉದ್ದೇಶಕ್ಕೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಅವರು ಏಕಾಏಕಿಯಾಗಿ ಚುನಾಯಿತ ಜನಪ್ರತಿನಿಧಿ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿರುವುದನ್ನು ತಪ್ಪು ಅಂತ ಹೇಳಿ ಪ್ರತಿಭಟನೆ ನಡೆಸಿದ್ದೇವೆ. ಸುಮ್ಮನೇ ಪ್ರತಿಭಟನೆ‌ ನಡೆಸಿಲ್ಲ. ತನಿಖೆ‌ಯಾಗಿಲ್ಲ, ಯಾವುದೇ ವರದಿಯು ಇಲ್ಲ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಪರಿಶೀಲನೆ ನಡೆಸದೆಯೇ ಶೋಕಾಸ್ ನೋಟಿಸ್ ನೀಡಿರುವುದು ಸರಿಯಲ್ಲ” ಎಂದರು.

ಒಂದೇ ಮಾನದಂಡವಿಲ್ಲ

“ಮುಖ್ಯಂಮತ್ರಿಯವರಿಗೆ ಒಂದು ಮಾನದಂಡ, ಕುಮಾರಸ್ವಾಮಿಯವರಿಗೆ ಇನ್ನೊಂದು ಮಾನದಂಡ ಮಾಡಲಾಗುವುದಿಲ್ಲ. ಒಂದೇ ಮಾನದಂಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಇವರಿಗೆ ನೋಟಿಸ್ ನೀಡಿದ್ದೀರಿ ಎಂದಾದರೆ ಅವರಿಗೂ ನೋಟಿಸ್ ನೀಡಬೇಕು. ಈ ಬಗ್ಗೆಯೂ ರಾಜ್ಯಪಾಲರನ್ನು ಪ್ರಶ್ನಿಸಿದ್ದೇವೆ” ಎಂದು ಹೇಳಿದರು.

ಶಾಸಕ ಮುನಿರತ್ನ ಪ್ರಕರಣಸ ಕುರಿತು ಪ್ರತಿಕ್ರಿಯಿಸಿ, “ಮುನಿರತ್ನ ವಿರುದ್ಧ ದಿನಕ್ಕೊಂದು ಪ್ರಕರಣಗಳು ಹೊರಬರುತ್ತಿವೆ. ಮೇಲ್ನೋಟಕ್ಕೆ ಒಂದು ಪ್ರಕರಣ ಎಂದು ಭಾವಿಸಲಾಗಿತ್ತು. ಈಗ ಬೇರೆ ಬೇರೆ ಪ್ರಕರಣಗಳು ಸೇರ್ಪಡೆಯಾಗುತ್ತಿವೆ. ಕೂಲಂಕುಷವಾಗಿ ತನಿಖೆ ನಡೆಯಬೇಕು ಎಂಬ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಅಗತ್ಯತೆ ಮೇರೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿಯವರು ಮುನಿರತ್ನನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X