ಕ್ರಿಕೆಟ್‌ನಲ್ಲಿ ನಿಮ್ಮ ಪುತ್ರ ಎಷ್ಟು ರನ್ ಸ್ಕೋರ್‌ ಮಾಡಿದ್ದಾರೆ? ಅಮಿತ್ ಶಾಗೆ ಸ್ಟಾಲಿನ್‌ ಪುತ್ರ ತಿರುಗೇಟು

Date:

ಡಿಎಂಕೆಯನ್ನು ವಂಶ ರಾಜಕಾರಣ ಪಕ್ಷ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ. 

- Advertisement -

ಚೆನ್ನೈನಲ್ಲಿ ಡಿಎಂಕೆ ಯುವ ಘಟಕದ ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಉದಯನಿಧಿ, “ನಾನು ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕನಾಗಿ ಮಂತ್ರಿ ಸ್ಥಾನ ಪಡೆದಿದ್ದೇನೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿಯಾಗಿರುವ ನಿಮ್ಮ ಪುತ್ರ ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿ ಎಷ್ಟು ರನ್ ಗಳಿಸಿದ್ದಾರೆ” ಎಂದು ಉಯನಿಧಿ ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿ ಮಾಡುವ ಗುರಿ ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾ ಅವರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ?” ಎಂದರು.

“ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು 2014ರಿಂದ ನಿಮ್ಮ ಮಗ ಜಯ್ ಶಾ ಜೈನ್ ಕುಸುಮ್ ಫಿನ್‌ಸರ್ವ್ ಎಂಬ ಕಂಪನಿಯನ್ನು ನಡೆಸುತ್ತಿದ್ದಾರೆ. ಆಗ ಕುಸುಮ್ ಫಿನ್‌ಸರ್ವ್‌ನ ಮೌಲ್ಯವು ಕೇವಲ 75 ಲಕ್ಷ ರೂ. ಇತ್ತು. ಈಗ ಅದರ ಮೌಲ್ಯ ಎಷ್ಟಾಗಿದೆ ಎಂದು ತಿಳಿಸುವಿರಾ? ಎಂದು ಉದಯನಿಧಿ ಸ್ಟಾಲಿನ್ ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳು; ಕರ್ನಾಟಕಕ್ಕೆ ಎರಡನೇ ಸ್ಥಾನ

ಶುಕ್ರವಾರ (ಜುಲೈ 28) ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರ ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ ಅವರು ಡಿಎಂಕೆಯ ವಂಶ ರಾಜಕಾರಣದ ಬಗ್ಗೆ ಮಾತನಾಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಡಿಎಂಕೆ ಮಿತ್ರಪಕ್ಷಗಳು ವಂಶ ರಾಜಕಾರಣಕ್ಕೆ ಉತ್ತೇಜಿಸುತ್ತಿದ್ದಾರೆ. ಅವರದು ವಂಶ ರಾಜಕೀಯ ಪಕ್ಷ ಎಂದು ಆರೋಪಿಸಿದ್ದರು.

ರಾಜ್ಯ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಎನ್ ಮಣ್, ಎನ್ ಮಕ್ಕಳ್(ನನ್ನ ನೆಲ, ನನ್ನ ಜನ) ಅಭಿಯಾನ ಆರಂಭಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅಮಿತ್‌ ಶಾ ಚಾಲನೆ ನೀಡಿದ್ದರು.

5 ಹಂತದಲ್ಲಿ 1774 ಕಿಲೋ ಮೀಟರ್‌ನ ಈ ಪಾದಯಾತ್ರೆಯು ತಮಿಳುನಾಡಿನ 234 ವಿಧಾನಸಭೆ, 39 ಲೋಕಸಭೆ ಕ್ಷೇತ್ರಗಳನ್ನು ಒಳಗೊಳ್ಳಲಿದೆ. 2024ರ ಜನವರಿ 11ರಂದು ಯಾತ್ರೆ ಅಂತ್ಯಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...