ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ: ಮೂರು ತಿಂಗಳ ಗಡುವು ಹೆಚ್ಚಿಸಿದ ರಾಜ್ಯ ಸರ್ಕಾರ

Date:

Advertisements

ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಕೊನೆಯ ದಿನಾಂಕವಾಗಿತ್ತು. ಆದರೆ, ಕರ್ನಾಟಕ ಹೈಕೋರ್ಟ್​  ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, “ಸೆಪ್ಟೆಂಬರ್ 15 ವರಿಗೆ ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಡೆಡ್​ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15ರ ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಶೀಘ್ರದಲ್ಲೇ ಹೆಚ್ಎಸ್ಆರ್​ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ. ಮತ್ತೆ ಗಡುವು ವಿಸ್ತರಣೆ ಮಾಡುವುದಿಲ್ಲ. ಸೆಪ್ಟೆಂಬರ್ 15ರೊಳಗೆ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಿ” ಎಂದು ವಾಹನ ಸವಾರರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಅಕಾಡೆಮಿ, ಪ್ರಾಧಿಕಾರದ ಸಭೆಯ ಬಗ್ಗೆ ಡಿಸಿಎಂ ಡಿಕೆಶಿ ಹೇಳಿಕೆ ಖಂಡನೀಯ: ಕ್ಷಮೆಯಾಚನೆಗೆ ಆಗ್ರಹ

2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಹೆಚ್‌ಎಸ್‌ಆರ್‌ಪಿ) ಅಳವಡಿಸಲು ಜೂನ್ 12 ಕೊನೆ ದಿನವಾಗಿತ್ತು. ಆದರೆ, ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ. ಇದೀಗ ಖುದ್ದು ರಾಜ್ಯ ಸರ್ಕಾರ, ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X