ಚನ್ನಪಟ್ಟಣದಲ್ಲಿ ಹರಕೆ ಕುರಿಯಾಗಲಿದ್ದಾರೆ ಯೋಗೇಶ್ವರ್‌, ನಿಖಿಲ್‌ ಗೆಲ್ಲಲಿದ್ದಾರೆ: ಆರ್‌.ಅಶೋಕ್

Date:

ಸಿ ಪಿ ಯೋಗೇಶ್ವರ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್‌ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಲೇವಡಿ ಮಾಡಿದರು.

- Advertisement -

‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್‌ ಒಟ್ಟಾಗಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಜೆಡಿಎಸ್‌ ಪಕ್ಷ ಕಾರ್ಯಕರ್ತರ ಸಭೆ ನಡೆಸಿ, ಒಮ್ಮತದಿಂದ ಅಭ್ಯರ್ಥಿಯನ್ನು ಆರಿಸಲಾಗಿದೆ. ಆದರೆ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳದೆ ಸಿ ಪಿ ಯೋಗೇಶ್ವರ್‌ ಅವರನ್ನು ಆರಿಸಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದು, ಅದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

“ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಎಸ್‌ಸಿ, ಎಸ್‌ಟಿ ಸಮುದಾಯದ ಹಣ ದುರ್ಬಳಕೆಯಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಗಣಿ ಹಗರಣದಲ್ಲಿ ಶಾಸಕ ಸತೀಶ್‌ ಸೈಲ್‌ ತಪ್ಪಿತಸ್ಥರು ಎಂಬುದು ಸಾಬೀತಾಗಿ ಶಿಕ್ಷೆ ನೀಡಲಾಗಿದೆ. ಕಾಂಗ್ರೆಸ್‌ ಲೂಟಿಕೋರರ ಪಾರ್ಟಿ ಎಂಬುದು ಸಾಬೀತಾಗಿದೆ. ಗಣಿ ಹಗರಣ ನಡೆದಿದೆ ಎಂದು ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಪಾದಯಾತ್ರೆ ಮಾಡಿ ನೃತ್ಯ ಮಾಡಿದ್ದರು. ಬಳಿಕ ಕಾಲು ನೋವಿಗೆ ಮಸಾಜ್‌ ಮಾಡಿಸಿಕೊಂಡಿದ್ದರು. ಈಗ ಅವರದ್ದೇ ಪಕ್ಷದ ಶಾಸಕ ಗಣಿಯಲ್ಲಿ ಲೂಟಿ ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ. ಗಣಿಗಳಲ್ಲಿ ಲೂಟಿ ಮಾಡಿದ್ದು ಕಾಂಗ್ರೆಸ್‌ ಪಕ್ಷ ಎಂಬುದು ಜನರಿಗೆ ಗೊತ್ತಾಗಿದೆ” ಎಂದು ಕಿಡಿಕಾರಿದರು.

“ನಿಖಿಲ್‌ ಕುಮಾರಸ್ವಾಮಿ ಅವರ ಬಗ್ಗೆ ಜನರಿಗೆ ಅನುಕಂಪವಿದೆ. ಸಿ ಪಿ ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಲು ನಾವೆಲ್ಲರೂ ಪ್ರಯತ್ನ ಮಾಡಿದ್ದೆವು. ಆದರೂ ಅವರು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ. ಬಿಜೆಪಿಯಲ್ಲಿ ಹಿರಿಯ ನಾಯಕರಾಗಿದ್ದವರು ಈಗ ಕಾಂಗ್ರೆಸ್‌ನಲ್ಲಿ ಮೂರನೇ ಸಾಲಿನಲ್ಲಿ ಕುಳಿತಿದ್ದಾರೆ. ಕಾಂಗ್ರೆಸ್‌ ನಾಯಕರು ಅವರನ್ನು ಹರಕೆ ಕುರಿ ಮಾಡಿ ಮುಗಿಸಲಿದ್ದಾರೆ. ಜನರಿಗೆ ಒಳ್ಳೆಯ ನಾಯಕತ್ವ ಬೇಕಾಗಿದೆ. ನಿಖಿಲ್‌ ಕುಮಾರಸ್ವಾಮಿ ಅವರು ಗೆಲ್ಲುವುದು ಸ್ಪಷ್ಟವಾಗಿದೆ. ಬಿಜೆಪಿಯ ಎಲ್ಲ ಕಾರ್ಯಕರ್ತರು ಹಾಗೂ ನಾಯಕರು ಪಣ ತೊಟ್ಟು ಕೆಲಸ ಮಾಡುತ್ತೇವೆ” ಎಂದರು.

“ರಾಜ್ಯ ಸರ್ಕಾರ 16 ತಿಂಗಳಲ್ಲಿ ಚನ್ನಪಟ್ಟಣ ತಾಲೂಕಿನ ಅಭಿವೃದ್ಧಿಗೆ ಒಂದು ರೂಪಾಯಿ ಹಣ ನೀಡಿಲ್ಲ. ಸಂಬಳ ಕೊಡಲು ಕೂಡ ದುಡ್ಡಿಲ್ಲದೆ ಸರ್ಕಾರ ಪಾಪರ್‌ ಆಗಿದೆ. ಮಳೆ ಹಾನಿಯಾಗಿ ರೈತರು ಕಂಗಾಲಾಗಿದ್ದರೂ ಪರಿಹಾರ ಕೊಡಲು ಕಾಸಿಲ್ಲ. ರಾಜಧಾನಿ ಬೆಂಗಳೂರು ಮುಳುಗುತ್ತಿದ್ದರೂ ಸರ್ಕಾರಕ್ಕೆ ಪ್ರಜ್ಞೆ ಇಲ್ಲ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...