“ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು.
ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್…
— Siddaramaiah (@siddaramaiah) April 18, 2024
“ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
