ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ‘ಇಂಡಿಯಾ’ ಒಕ್ಕೂಟಕ್ಕೆ ಭರ್ಜರಿ ಗೆಲುವು

Date:

ಲೋಕಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟವನ್ನು ತಲುಪುತ್ತಿದೆ. ಮಂಗಳವಾರ ರಾತ್ರಿಯ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕರಣವಾಗುವ ಸಾಧ್ಯತೆಗಳಿವೆ. ಈ ಡುವೆ, ಎಕ್ಸಿಟ್‌ ಪೋಟ್‌ಗಳ ಅಂಕಿ-ಸಂಖ್ಯೆಗಳನ್ನು ಬುಡಮೇಲು ಮಾಡಿ ‘ಇಂಡಿಯಾ’ ಒಕ್ಕೂಟ ಮುನ್ನಡೆಯುತ್ತಿದೆ. ಎನ್‌ಡಿಎ 295 ಸ್ಥಾನಗಳಲ್ಲಿ ಮುಂದಿದ್ದರೆ, ಇಂಡಿಯಾ 230 ಸ್ಥಾನಗಳನ್ನು ಮುನ್ನಡೆ ಕಾಯ್ದುಕೊಂಡಿದೆ.

- Advertisement -

ಅದರಲ್ಲೂ ಬಹುಮುಖ್ಯವಾಗಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಇಂಡಿಯಾ ತನ್ನದಾಗಿಸಿಕೊಳ್ಳುತ್ತಿದೆ. ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ, ಬಿಜೆಪಿಯನ್ನು ಮಣಿಸಿ, ಇಂಡಿಯಾ ಮುನ್ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಉತ್ತರ ಪ್ರದೇಶವು ದೇಶದಲ್ಲಿಯೇ ಅತಿ ಹೆಚ್ಚು ಸಂಸತ್‌ ಸ್ಥಾನಗಳನ್ನು ಹೊಂದಿದೆ. ಅಲ್ಲಿನ ಒಟ್ಟು 80 ಸ್ಥಾನಗಳ ಪೈಕಿ ಇಂಡಿಯಾ 45 (ಎಸ್‌ಪಿ-36, ಕಾಂಗ್ರೆಸ್‌ 9) ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 32 ಸ್ಥಾನಗಳಲ್ಲಿ ಮಾತ್ರವೇ ಮುಂದಿದ್ದು, ಮೂರು ಸ್ಥಾನಗಳಲ್ಲಿ ಇತರರು ಮುನ್ನಡೆಯಲ್ಲಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆಯಲ್ಲಿದ್ದರೆ, ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಕೂಡ ಮುನ್ನಡೆ ಸಾಧಿಸಿದ್ದಾರೆ. ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರನ್ನು ಗಾಂಧಿ ಕುಟುಂಬದ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಸೋಲಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 2019ರಲ್ಲಿ ಬಿಜೆಪಿ 62 ಸ್ಥಾನಗಳನ್ನು ಗೆದ್ದಿತ್ತು. ಅದರ ಮುತ್ರಿ ಪಕ್ಷ ಅಪ್ನಾ ದಳ 2 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಸಮಾಜವಾದಿ ಪಕ್ಷ 5 ಕ್ಷೇತ್ರಗಳಲ್ಲಿ ಗೆದ್ದರೆ, ಕಾಂಗ್ರೆಸ್‌ 1 ಕ್ಷೇತ್ರದಲ್ಲಿ ಮಾತ್ರವೇ ಗೆದ್ದಿತ್ತು. ಈ ಬಾರಿ, ಎಸ್‌ಪಿ-ಕಾಂಗ್ರೆಸ್‌ ಒಗ್ಗೂಡಿ ಬಿಜೆಪಿಯನ್ನು ಮಣಿಸಿವೆ.

ಪಶ್ಚಿಮ ಬಂಗಾಳದಲ್ಲಿ, ಒಟ್ಟು 42 ಸ್ಥಾನಗಳ ಪೈಕಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ 32 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 9 ಸ್ಥಾನಗಳಲ್ಲಿ ಮಾತ್ರವೇ ಮುಂದಿದ್ದರೆ, ಕಾಂಗ್ರೆಸ್‌ ಒಂದರಲ್ಲಿ ಮುಂದಿದೆ.

ಮಹಾರಾಷ್ಟ್ರದಲ್ಲಿ, ಭಾರೀ ಹೋರಾಟ ನಡೆದಿದ್ದು, ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿ, ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳನ್ನು ಒಡೆದು ಇಬ್ಬಾಗ ಮಾಡಿದ್ದ ಬಿಜೆಪಿ ವಿರುದ್ಧ ಮಹಾರಾಷ್ಟ್ರ ಜನರು ಮತ ಚಲಾಯಿಸಿದ್ದಾರೆ. ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳ ಪೈಕಿ, ಇಂಡಿಯಾ ಮೈತ್ರಿಕೂಟ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಡಿಎ ಮೈತ್ರಿಕೂಟ 18 ಸ್ಥಾನಗಳಲ್ಲಿ ಮಾತ್ರವೇ ಮುಂದೆ ಇದೆ.

ಕಾಂಗ್ರೆಸ್‌ 12, ಶಿವಸೇನೆ (ಉದ್ಧವ್ ಬಣ) 10 ಹಾಗೂ ಎನ್‌ಸಿಪಿ (ಶರದ್ ಬಣ) 7 ಸ್ಥಾನಗಳಲ್ಲಿ ಗೆಲುವಿನ ಹಾದಿಯಲ್ಲಿವೆ. ಎನ್‌ಡಿಎ ಕೂಟದ ಬಿಜೆಪಿ 11, ಶಿವಸೇನೆ (ಶಿಂಧೆ ಬಣ) 6 ಹಾಗೂ ಎನ್‌ಸಿಪಿ (ಅಜಿತ್ ಬಣ) 1 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆಗಳಿವೆ. ಒಂದು ಸ್ಥಾನವನ್ನು ಸ್ವತಂತ್ರರು ಗೆಲ್ಲಬಹುದು ಎನ್ನಲಾಗಿದೆ.

ಹರಿಯಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಮೂರು ಸ್ಥಾನಗಳಲ್ಲಿ, ಶಿರೋಮಣಿ ಅಕಾಲಿದಳ (ಎಸ್‌ಎಡಿ) ಒಂದರಲ್ಲಿ ಮತ್ತು ಸ್ವತಂತ್ರರು ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ತಮಿಳುನಾಡಿನಲ್ಲಿ ಇಂಡಿಯಾ ಒಕ್ಕೂಟ ಒಟ್ಟು 39ಕ್ಕೆ 39 ಸ್ಥಾನಗಳಲ್ಲಿಯೂ ಮುನ್ನಡೆ ಸಾಧಿಸಿದೆ. ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್‌ 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...