ಅಮೆರಿಕ: ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ವಿರಾಮ ಘೋಷಿಸಲು ಆಗ್ರಹಿಸಿ ಪ್ರತಿಭಟಿಸುತ್ತಿದ್ದವರ ಬಂಧನ

Date:

ಅಮೆರಿಕದ ವಾಷಿಂಗ್ಟನ್​ ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್​ ಕಟ್ಟಡಕ್ಕೆ ದಿಢೀರ್​ ಮುತ್ತಿಗೆ ಹಾಕಿದ ನೂರಾರು ಪ್ಯಾಲೆಸ್ತೀನ್ ಪರ ಯಹೂದಿಗಳು ಹಾಗೂ ಬೆಂಬಲಿಗರು, ಇಸ್ರೇಲ್​ ಮತ್ತು ಹಮಾಸ್​ ನಡುವಿನ ಸಂಘರ್ಷಕ್ಕೆ ಕದನ ವಿರಾಮಕ್ಕಾಗಿ ಒತ್ತಾಯಿಸಿ, ಪ್ರತಿಭಟಿಸಿದರು.

- Advertisement -

ಈ ವೇಳೆ ಸುಮಾರು 300 ಪ್ರತಿಭಟನಾಕಾರರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಕದನ ವಿರಾಮಕ್ಕಾಗಿ ಒತ್ತಾಯಿಸಿ ಪ್ರತಿಭಟನಾಕಾರರು ಉಂಟು ಮಾಡಿದ ಅಡಚಣೆಯ ಬಳಿಕ ಕ್ಯಾಪಿಟಲ್ ಸಂಕೀರ್ಣಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿವಿಧ ಸಂಘಟನೆಗಳಿಗೆ ಸೇರಿದ ಪ್ರತಿಭಟನಾಕಾರರು ‘ಕದನ ವಿರಾಮ ಬೇಕು’ ಎಂದು ಘೋಷಣೆ ಕೂಗಿದರು. ‘ನಮ್ಮ ಹೆಸರಿನಲ್ಲಿ(ಯಹೂದಿ) ಬೇಡ, ಈಗ ಕದನ ವಿರಾಮ ಘೋಷಿಸಿ’ ಎಂಬ ಫಲಕಗಳನ್ನು ಹೊತ್ತ ಯಹೂದಿ ಸಂಘಟನೆಗಳ ಸದಸ್ಯರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಗಾಝಾದ ಅಲ್-ಅಹ್ಲಿ ಆಸ್ಪತ್ರೆ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ವಿಚಾರದಲ್ಲಿ ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ ಅಧಿಕಾರಿಗಳು ಆರೋಪ-ಪ್ರತ್ಯಾರೋಪ ಮಾಡುತ್ತಿದ್ದು, ಇದರ ಬೆನ್ನಲ್ಲೇ ಪ್ಯಾಲೆಸ್ತೀನ್​ ಪರ ಬೆಂಬಲಿಗರು ಯುಎಸ್​ ಕ್ಯಾಪಿಟಲ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್​ ಮಿತ್ರ ರಾಷ್ಟ್ರವಾಗಿದೆ. ಅಲ್ಲದೇ, ಹಮಾಸ್ ವಿರುದ್ಧದ ಹೋರಾಟಕ್ಕೆ ಇಸ್ರೇಲ್​ಗೆ ಅಮೆರಿಕ ಬಹಿರಂಗ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಕದನ ತೀವ್ರತೆಗೆ ಅಂತ್ಯವಾಡಬೇಕು ಎಂದು ಆಗ್ರಹಿಸಿ ಯುಎಸ್ ಕ್ಯಾಪಿಟಲ್​ ಕಟ್ಟಡಕ್ಕೆ ದಿಢೀರ್ ಮುತ್ತಿಗೆ ಹಾಕಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯ ಐಟಿ ಉದ್ಯೋಗಿಗಳಿಗೆ ಗ್ರೀನ್‌ಕಾರ್ಡ್‌ ಸಂಕಷ್ಟ; TCS, Wipro ಸೇರಿ ಹಲವು ಕಂಪನಿಗಳಿಗೆ ಅಮೆರಿಕ ನಿರ್ಬಂಧ

ಭಾರತೀಯ ಐಟಿ ವೃತ್ತಿಪರರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅಮೆರಿಕ ಸರ್ಕಾರ TCS,...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

‘ಭಾರತದ ನಿಜವಾದ ಬಾಸ್ ಅಂಬಾನಿಯೇ’: ಸ್ಟಾರ್‌ಲಿಂಕ್ ಸೇವೆಗೆ ಅನುಮತಿ ವಿಳಂಬದ ಬಗ್ಗೆ ಎಲಾನ್ ಮಸ್ಕ್ ಪ್ರಶ್ನೆ

ವಾಷಿಂಗ್ಟನ್‌ ಡಿಸಿ/ನವದೆಹಲಿ: ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ (Starlink) ಉಪಗ್ರಹ ಆಧಾರಿತ ಇಂಟರ್ನೆಟ್...