ನಾನೂ ಬಿ ರಾಚಯ್ಯನವರ ಪ್ರಾಡಕ್ಟು, ಯಾವಾಗಲೂ ಶೋಷಿತರ ಪರವಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

Date:

ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ. ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್‌ಗಳು. ನಾನೂ ರಾಚಯ್ಯನವರ ಪ್ರಾಡಕ್ಟು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರದಲ್ಲಿ ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಅವರು ಮಾತನಾಡಿ, “ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು ಮಾತಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು” ಎಂದರು.

“ರಾಮಕೃಷ್ಣ ಹೆಗಡೆ ಅವರ ಮಂತ್ರಿ ಮಂಡಲದಲ್ಲಿ ಪ್ರಭಾವಿ ಆಗಿದ್ದ ರಾಚಯ್ಯನವರಿಗೆ, ಪ್ರತಿಭಾವಂತ, ಜನಪರ ಕಾಳಜಿಯುಳ್ಳ ರಾಜಕಾರಣಿಗಳನ್ನು ಹತ್ತಿರಕ್ಕೆ ಕರೆದು ಬೆಳೆಸುವ ಗುಣ ಇತ್ತು. ಹೆಗಡೆ ಮತ್ತು ರಾಚಯ್ಯ ಅವರು ನನ್ನನ್ನು ಕರೆದು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದರು. ಬಳಿಕ ನನ್ನನ್ನು ಮಂತ್ರಿ ಮಾಡಿದರು” ಎಂದು ಇತಿಹಾಸ ಸ್ಮರಿಸಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅವತ್ತು ನಾನು ಮಂತ್ರಿ ಆಗದೇ ಹೋಗಿದ್ದರೆ ನಾನು ಇವತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಇದೇ ಕೆಲವರಿಗೆ ಹೊಟ್ಟೆಯುರಿ. ರಾಚಯ್ಯನವರು ನಡೆದಂತ ದಾರಿಯಲ್ಲೇ ನಡೆಯಪ್ಪಾ” ಎಂದು ಅವರ ಪುತ್ರ ಶಾಸಕ ಕೃಷ್ಣಮೂರ್ತಿ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಕಿವಿ ಮಾತು ಹೇಳಿದರು.

“ರಾಚಯ್ಯ ಸ್ಮಾರಕದಲ್ಲಿ IAS-IPS ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು” ಎಂದರು.

ಚಾಮರಾಜನಗರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಲೂರು ಗ್ರಾಮದಲ್ಲಿ ಸ್ಮಾರಕ ಭವನ ನಿರ್ಮಿಸಲಾಗಿದೆ ಎಂದು ಹೇಳಿದರು.

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಚಪ್ಪ ಅವರ ಪತ್ನಿ ಗೌರಮ್ಮ, ಸಂಸದ ಸುನಿಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಲವರ ಪಾಲಿಗೆ ಕರಾಳ ದಿನವಾದ ಗಣೇಶ ಚತುರ್ಥಿ; ಜೂನ್‌, ಜುಲೈ, ಆಗಸ್ಟ್‌ನಲ್ಲೇ ಹೆಚ್ಚು ರಸ್ತೆ ಅಪಘಾತ

ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರಿಂದ ಅಪಘಾತಗಳಲ್ಲಿ ಸಾವನ್ನಪ್ಪುವವರ...

ಜೈವಿಕ ತಂತ್ರಜ್ಞಾನ ನೀತಿ 2024-2029 ಅನಾವರಣ; 1,000ಕ್ಕೂ ಹೆಚ್ಚು ನವೋದ್ಯಮ ಸ್ಥಾಪನೆಯ ಗುರಿ

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ...

ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಕಲುಷಿತ : ಎಚ್ಚರಿಕೆ ನೀಡಿದ ಗ್ರೀನ್ ಪೀಸ್ ವರದಿ

ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ...

ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ...