ಹಿಜಾಬ್ ನಿಷೇಧ | ಕಾಂಗ್ರೆಸ್ ಕೈ ಬಿಡಲಿದೆ ಎಂಬ ವಿಶ್ವಾಸವಿದೆ: ಶಾಸಕಿ ಕನೀಝ್ ಫಾತಿಮಾ

Date:

  • ಹಿಜಾಬ್ ಹೋರಾಟದಲ್ಲಿ ಭಾಗವಹಿಸಿದ್ದ ಕನೀಝ್ ಫಾತಿಮಾ
  • ರಾಜ್ಯದ ಏಕೈಕ ಮಹಿಳಾ ಮುಸ್ಲಿಂ ಜನಪ್ರತಿನಿಧಿಯ ಮನವಿ


ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹೇರಲಾಗಿರುವ ಹಿಜಾಬ್ ನಿಷೇಧವನ್ನು ಕಾಂಗ್ರೆಸ್ ಸರ್ಕಾರ ಕೈ ಬಿಡಲಿದೆ ಎನ್ನುವ ವಿಶ್ವಾಸವನ್ನು ಶಾಸಕಿ ಕನೀಝ್ ಫಾತಿಮಾ ವ್ಯಕ್ತಪಡಿಸಿದರು.

ಕಲಬುರಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕಲಬುರಗಿ ಉತ್ತರ ಕ್ಷೇತ್ರದ ಶಾಸಕ ಕನೀಝ್ ಫಾತಿಮಾ, “ದೇವರು ಇಚ್ಛಿಸಿದರೆ ನಾವು ಮುಂದಿನ ದಿನಗಳಲ್ಲಿ ಹಿಜಾಬ್ ನಿಷೇಧ ಕೈಬಿಡಲಿದ್ದೇವೆ ಹಾಗೂ ಈ ನಿಷೇಧದಿಂದ ಶಾಲೆಗಳಿಂದ ದೂರ ಉಳಿದಿರುವ ಬಾಲಕಿಯರನ್ನು ಮರಳಿ ಶಾಲೆಗೆ ತರಲು ನಮಗೆ ಸಾಧ್ಯವಾಗಬಹುದು” ಎಂದು ಹೇಳಿದ್ದಾರೆ.

ಜೊತೆಗೆ “ಈ ಗಲಭೆ ಹಿನ್ನೆಲೆಯಲ್ಲಿ ನಾವು ನಮ್ಮ ಎರಡು ಅಮೂಲ್ಯ ವರ್ಷಗಳನ್ನು ಕಳೆದುಕೊಂಡಿದ್ದೇವೆ,” ಎಂದು ಫಾತಿಮಾ ಬೇಸರದಿಂದ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚುನಾವಣೆಯಲ್ಲಿನ ರಾಜ್ಯದಲ್ಲಿ ಕಾಂಗ್ರೆಸ್ ನ ಗೆಲುವಿನ ಶ್ರೇಯವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದ ಫಾತಿಮಾ, “ಖರ್ಗೆ ಅವರು ಪಕ್ಷದ ಅಧ್ಯಕ್ಷರಾದಂದಿನಿಂದ ನಾವು ಬಹಳ ಕಷ್ಟಪಟ್ಟು ಪಕ್ಷಕ್ಕಾಗಿ ಶ್ರಮಿಸಿದ್ದೇವೆ. ಅವರ ಭಾಷಣಗಳು ಜನರ ಮೇಲೆ ದೊಡ್ಡ ಪರಿಣಾಮ ಬೀರಿವೆ, ಅದರ ಫಲಿತಾಂಶ ಈಗ ನಮ್ಮ ಮುಂದೆ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಕರ್ನಾಟಕದ ಪ್ರಬುದ್ಧ ಮತದಾರರಿಂದ ದೇಶಕ್ಕೆ ಬಲವಾದ ಸಂದೇಶ :…

ಮಾಜಿ ಸಚಿವ ದಿವಂಗತ ಖಮರುಲ್ ಇಸ್ಲಾಂ ಅವರ ಪತ್ನಿ ಫಾತಿಮಾ, 2018ರಲ್ಲಿ ಚುನಾವಣಾ ಕಣಕ್ಕಿಳಿದಿದ್ದರು. ಇದರ ಜೊತೆಜೊತೆಗೆ ಕಲಬುರಗಿಯಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದರು. ಹಾಲಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕರಾಗಿರುವ ಇವರು ಈ ಸಾಲಿನ ಚುನಾವಣೆಯಲ್ಲಿ ಗೆದ್ದ ಏಕೈಕ ಮುಸ್ಲಿಮ್ ಮಹಿಳಾ ಶಾಸಕಿ ಎನಿಸಿಕೊಂಡಿದ್ದಾರೆ.

ಈ ಚುನಾವಣೆಯಲ್ಲಿ ಇವರು ಬಿಜೆಪಿಯ ಚಂದ್ರಕಾಂತ್ ಬಿ ಪಾಟೀಲ್ ಅವರನ್ನು 2,712 ಮತಗಳ ಅಂತರದಿಂದ ಸೋಲಿಸಿದ್ದರು. ಫಾತಿಮಾ ಅವರ ಆಶಯವನ್ನು ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರ ಯಾವ ರೀತಿ ನೋಡಲಿದೆ ಎನ್ನುವ ಕುತೂಹಲ ಎಲ್ಲರದ್ದು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...