ನಾನು ಯಾವ ಹುದ್ದೆಯ ಆಕಾಂಕ್ಷಿಯಲ್ಲ; ಯಾವುದೇ ರೇಸ್‌ನಲ್ಲೂ ಇಲ್ಲ : ಸಿ ಟಿ ರವಿ

Date:

  • ಬಿಜೆಪಿ ರಾಜ್ಯಾಧ್ಯಕ್ಷರ ರೇಸ್‌ನಿಂದ ಹಿಂದೆ ಸರಿದ ಸಿ ಟಿ ರವಿ
  • ನಾನು ಯಾವಾಗಲೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ

ಸದ್ಯ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ಜೊತೆಗೆ ನಾನು ಯಾವುದೇ ರೇಸ್‌ನಲ್ಲೂ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದರು.

- Advertisement -

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಎಕ್ಸ್ ಪೀರಿಯನ್ಸ್, ಎಕ್ಸ್ ಪೋಸ್ ಎರಡಕ್ಕೂ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ನಾನು ಸದ್ಯ ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ಯಾವುದೇ ರೇಸ್‌ನಲ್ಲೂ ಇಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ ಎಂದ ಸಿಟಿ ರವಿ ಅದಕ್ಕೆ ನ್ಯಾಯ ಒದಗಿಸುವುದಾಗಿ ಹೇಳಿದರು.

ರಾಜ್ಯಾಧ್ಯಕ್ಷ ಹುದ್ದೆ ವಿಚಾರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಸಿ ಟಿ ರವಿ, ಕಾರ್ಯಕರ್ತ ಎನ್ನುವುದನ್ನ ಯಾವತ್ತೂ, ಯಾರೂ ಕಿತ್ತುಕೊಳ್ಳಲು ಆಗುವುದಿಲ್ಲ. ಪಕ್ಷದ ಕಾರ್ಯಕರ್ತ ಮೊದಲು ಆ ನಂತರ ಉಳಿದ ಹುದ್ದೆಗಳು ಎಂದರು.

ಈ ಸುದ್ದಿ ಓದಿದ್ದೀರಾ?:ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ: ಮಾಜಿ ಸಚಿವ ಆರ್‌ ಅಶೋಕ

ರಾಜ್ಯಾಧ್ಯಕ್ಷ ನೇಮಕ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಬಳಿಕ ಯೂಟರ್ನ್ ತೆಗೆದುಕೊಂಡ ವಿಚಾರ ದಾಖಲಾದ ವೇಳೆ ಬಿಜೆಪಿಗೆ ನೂತನ ಸಾರಥಿ ಆಯ್ಕೆ ವಿಚಾರ ಮುನ್ನೆಲೆಗೆ ಬಂದಿತ್ತು.

ಕಟೀಲ್ ಅವಧಿ ಮುಕ್ತಾಯಗೊಂಡಿದ್ದರೂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷೀಯ ಅವಧಿ ವಿಸ್ತರಿಸಲಾಗಿತ್ತು. ಆದರೆ ಈ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಲೋಕಸಭೆ ಚುನಾವಣೆಗೆ ಪಕ್ಷ ಹೊಸಬರ ನೇತೃತ್ವದಲ್ಲಿ ಮುನ್ನಡೆಯಬೇಕೆನ್ನುವ ಒತ್ತಾಯ ಪಕ್ಷದೊಳಗೆ ಕೇಳಿ ಬಂದಿತ್ತು.

ಈ ನಡುವೆ ರಾಜ್ಯಾಧ್ಯಕ್ಷ ಹುದ್ದೆಗೆ ಮಾಜಿ ಸಚಿವ ಸುನಿಲ್ ಕುಮಾರ್, ಅಶ್ವತ್ಥ್ ನಾರಾಯಣ, ಸಿ ಟಿ ರವಿ, ವಿ ಸೋಮಣ್ಣ, ಹಾಗೂ ಶೋಭಾ ಕರಂದ್ಲಾಜೆಯವರ ಹೆಸರುಗಳು ಕೇಳಿ ಬಂದಿತ್ತು. ಪಕ್ಷದ ಮೂಲಗಳ ಮಾಹಿತಿಗಳ ಪ್ರಕಾರ ಶೋಭಾ ಕರಂದ್ಲಾಜೆಯವರಿಗೆ ಮುಂದಿನ ಅವಕಾಶ ಸಿಗುವುದು ದಟ್ಟವಾಗಿದೆ ಎನ್ನಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...