ನಾನು ಪದವಿ ಆಕಾಂಕ್ಷಿಯಲ್ಲ; ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ: ಶೆಟ್ಟರ್

Date:

  • ಪಕ್ಷ ಕೊಡುವ ಜವಾಬ್ದಾರಿ ನಿಭಾಯಿಸುವೆ ಎಂದ ಮಾಜಿ ಸಿಎಂ ಶೆಟ್ಟರ್
  • ಸೋತರೂ ಜಗದೀಶ್ ಶೆಟ್ಟರ್‌ಗೆ ಗೌರವ ಸ್ಥಾನಮಾನ ನೀಡಲಿರುವ ಕಾಂಗ್ರೆಸ್

“ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಆದರೆ ಹೈಕಮಾಂಡ್ ಕರೆದು ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ನಿಯೋಜಿತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನ ಭೇಟಿಯಾದ ಜಗದೀಶ್ ಶೆಟ್ಟರ್ ಅವರನ್ನು ಅಭಿನಂದಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದ ಹಿನ್ನಲೆಯಲ್ಲಿ ಅವರನ್ನು ಅಭಿನಂದನೆ ಸಲ್ಲಿಸಲು ಬಂದಿದ್ದೆ. ಬೇರೆ ಯಾವುದೇ ಚರ್ಚೆ ಮಾಡಿಲ್ಲ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾನು ಪಕ್ಷದ ನಿಷ್ಠಾವಂತ ಸದಸ್ಯ. ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಲ್ಲ. ಕಾಂಗ್ರೆಸ್ ಮತ್ತು ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ” ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ; ಸಚಿವ ಸಂಪುಟ ರಚನೆಗೆ ಸಿಎಂ-ಡಿಸಿಎಂ ಕಸರತ್ತು

ಜಗದೀಶ್ ಶೆಟ್ಟರ್ ಸೋತರೂ ಅವರಿಗೆ ಗೌರವಯುತ ಸ್ಥಾನಮಾನ ಕಲ್ಪಿಸಲು ಕಾಂಗ್ರೆಸ್ ಯೋಚಿಸಿದ್ದು, ಶೀಘ್ರವೇ ಆ ಕುರಿತು ನಿರ್ಧಾರವೊಂದನ್ನು ಪ್ರಕಟಿಸಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಬಿಜೆಪಿ ವಿರುದ್ದದ ಕಾಂಗ್ರೆಸ್ ಹೋರಾಟದಲ್ಲಿ ಕೈ ಪಾಳಯದೊಂದಿಗೆ ಕೈ ಜೋಡಿಸಿದ್ದ ಜಗದೀಶ್ ಶೆಟ್ಟರ್, ಕಮಲ ಪಕ್ಷ ತೊರೆದು ಬಂದ ಕಾರಣ ಧಾರವಾಡ ಭಾಗದಲ್ಲಿ ಕಾಂಗ್ರೆಸ್ ಗೆಲುವು ಇನ್ನಷ್ಟು ಸಲೀಸಾಯಿತು ಎನ್ನುವುದು ಆ ಭಾಗದ ನಾಯಕರ ಮಾತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...