ನಾನು ಸಿಎಂ ಕುರ್ಚಿಯ ಆಕಾಂಕ್ಷಿಯಲ್ಲ : ಮಲ್ಲಿಕಾರ್ಜುನ ಖರ್ಗೆ

Date:

  • ‘ವಿಪಕ್ಷಗಳು ಒಂದಾದರೆ ಬಿಜೆಪಿಯನ್ನು ಕಿತ್ತೆಸೆಯಬಹುದು’
  • ‘ಬೊಮ್ಮಾಯಿ ಭ್ರಷ್ಟಾಚಾರಕ್ಕೆ ಸ್ವಪಕ್ಷದ ನಾಯಕರೇ ಬೇಸತ್ತಿದ್ದಾರೆ’

ನಾನು ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅನೇಕ ಮುಖ್ಯಮಂತ್ರಿಗಳನ್ನು ನೇಮಿಸುವವನು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನೀವು ಮುಖ್ಯಮಂತ್ರಿ ಕುರ್ಚಿಯ ‘ರೇಸ್‌’ನಲ್ಲಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಕರ್ನಾಟಕ ಸಿಎಂ ಆಕಾಂಕ್ಷಿಯಲ್ಲ. ನಾನು ಅನೇಕ ಮುಖ್ಯಮಂತ್ರಿಗಳನ್ನು ನೇಮಿಸುತ್ತೇನೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚುನಾವಣೆ ನಂತರ ಶಾಸಕರು ಯಾರನ್ನು ಆಯ್ಕೆ ಮಾಡುತ್ತಾರೆ ಎನ್ನುವುದರ ಮೇಲೆ ಕಾಂಗ್ರೆಸ್ ಹೈಕಮಾಂಡ್‌ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ತೀರ್ಮಾನಿಸುತ್ತದೆ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ” ಎಂದು ಹೇಳಿದ್ದಾರೆ.

“ನಾವು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಈ ಮೊದಲು ಮಾಡಿದ್ದೇವೆ. ಹಾಗಾಗಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಈ ಬಾರಿ ನಮ್ಮ ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದಾರೆ.

“ಈಗಿನ ಬಿಜೆಪಿಯ ರಾಜ್ಯ ಸರ್ಕಾರ ಭ್ರಷ್ಟ ಸರ್ಕಾರ. ಸಾರ್ವಜನಿಕರು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಬಯಸುತ್ತಾರೆ” ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಅವರು, “ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿದರೆ ಬಿಜೆಪಿ ಹೊರಬೀಳಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಿಂಗಾಯತ ಹೇಳಿಕೆ ವಿವಾದ | ಬಿಜೆಪಿ ತನಗೆ ಬೇಕಾದಂತೆ ವಿಡಿಯೋ ತಿರುಚಿದೆ: ಸಿದ್ದರಾಮಯ್ಯ

ಖಾಸಗಿ ವಾಹಿನಿಯ ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಬಿಜೆಪಿಯು ಲಿಂಗಾಯತ ಸಮುದಾಯವನ್ನು ಕಡೆಗಣಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿಯೊಳಗೆ ಅಂತರ್‌ಯುದ್ಧ ನಡೆಯುತ್ತಿದೆ. ಬಿ ಎಲ್ ಸಂತೋಷ್‌ ಬಿಜೆಪಿಯ ಎಲ್ಲ ನಾಯಕರನ್ನು ಮುಗಿಸಲು ಹೊರಟಿದ್ದಾರೆ. ಬಿ ಎಸ್ ಯಡಿಯೂರಪ್ಪ ಅಂತಹವನ್ನೇ ಬಿಜೆಪಿ ಕಸದ ಬುಟ್ಟಿಗೆ ಹಾಕಿದೆ” ಎಂದು ಹೇಳಿದ್ದಾರೆ.

“ಭಾರತ ಕಂಡ ಅತ್ಯಂತ ಭ್ರಷ್ಟ ಸರ್ಕಾರವನ್ನು ಬಸವರಾಜ ಬೊಮ್ಮಾಯಿ ನಡೆಸುತ್ತಿದ್ದಾರೆ ಎಂಬುದನ್ನು ಮನಗಂಡು ಬಿಜೆಪಿಯ ಅನೇಕ ನಾಯಕರು ಕಾಂಗ್ರೆಸ್‌ಗೆ ಬಂದಿದ್ದಾರೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...